ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಸಿಎಂ ರಾಜ್ಯಕ್ಕೆ ವಾಪಸ್‌ ಬೆನ್ನಲ್ಲೇ ಶೆಟ್ಟರ್‌ಗೆ ಹೈಕಮಾಂಡ್ ಬುಲಾವ್

By Suvarna News  |  First Published Feb 10, 2022, 1:56 PM IST

* ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
* ಸಿಎಂ ರಾಜ್ಯಕ್ಕೆ ವಾಪಸ್‌ ಬೆನ್ನಲ್ಲೇ ಶೆಟ್ಟರ್‌ಗೆ ಹೈಕಮಾಂಡ್ ಬುಲಾವ್
*ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ


ಬೆಂಗಳೂರು, (ಫೆ.10): ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ (Hijab), ಕೇಸರಿ ಶಾಲು ಸಂಘರ್ಷ ಭುಗಿಲೆದ್ದಿದೆ. ಸದ್ಯ ಇಡೀ ರಾಜ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾಯುತ್ತಿದೆ. ಇದರ ಮಧ್ಯೆ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮಹತ್ವದ ಬೆಳವಣಣಿಗೆಗಳು ಆಗುತ್ತಿವೆ.

ಹೌದು... ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿ ರಾಜ್ಯಕ್ಕೆ ವಾಪಸ್ಸಾದ ಬೆನ್ನಲ್ಲೇ ಇದೀಗ ಬಿಜೆಪಿ ಹೈ ಕಮಾಂಡ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar) ಅವರಿಗೆ ಬುಲಾವ್ ನೀಡಿದೆ.

Tap to resize

Latest Videos

ವರಿಷ್ಠರ ನಿರ್ದೇಶನದಂತೆ ನಿನ್ನೆ(ಬುಧವಾರ) ರಾತ್ರಿ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲವನ್ನು ಕೆರಳಿಸಿದೆ.

BJP Politcs: ಬಿಜೆಪಿಯಲ್ಲಿ ಭಿನ್ನಮತ: ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು

ಸಚಿವ ಸಂಪುಟ ಪುನರ್‌ರಚನೆ ಮಾಡಿ ಶೆಟ್ಟರ್​​ಗೆ​​ ಅವಕಾಶ ನೀಡಿದರೆ ಅದನ್ನು ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬುವುದನ್ನು ಅರಿಯಲು ಹಾಗೂ ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದರ ಬಗ್ಗೆ ಸಲಹೆ ಕೇಳಲು ಅವರನ್ನು ಕರೆದಿರಬಹುದು ಎಂದು ಹೇಳಲಾಗುತ್ತಿದೆ.

ಈ ಹಿಂದೆ ಜಗದೀಶ್ ಶೆಟ್ಟರ್ ಅವರು ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದು ಹೇಳಿದ್ದರು. ಶೆಟ್ಟರ್ ಅವರ ಈ ನಿರ್ಧಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದನ್ನ ಇಲ್ಲಿ ಸ್ಮರಿಸಬಹುದು.

ಇನ್ನು 3 ತಿಂಗಳು ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದ ಈಶ್ವರಪ್ಪ
ಶೀಘ್ರವೇ ಸಚಿವ ವಿಸ್ತರಣೆ ಆಗಬೇಕೆಂದು ಆಡಳಿತಾರೂಢ ಬಿಜೆಪಿಯ ಅನೇಕ ಶಾಸಕರು ಒತ್ತಾಯಿಸುತ್ತಾ ಬಂದಿದ್ದಾರೆ. ಇದರ ಸಮ್ಮುಖದಲ್ಲಿ, ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಅವರು ಪಕ್ಷದ ಹೈಕಮಾಂಡ್​​ ಅನ್ನು ಒಪ್ಪಿಸಿ, ತಮ್ಮ ಸಂಪುಟವನ್ನು ವಿಸ್ತರಿಸು ತ್ತಾರಾ? ತನ್ಮೂಲಕ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರಾ ಎಂಬ ಕುತೂಹಲ ಗರಿಗೆದರಿದೆ.

 ಆದರೆ ಇದೇ ವೇಳೆ ಇಂದು ಮೈಸೂರಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ (Rural Development and Panchayat Raj Minister K S Eshwarappa) ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದಾರೆ.

ಸದ್ಯಕ್ಕೆ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಅದು ಮುಗಿಯುವವರೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ವಿಸ್ತರಣೆ ನಡೆಯುವುದಿಲ್ಲ. ಈ ಬಗ್ಗೆ ನನಗೆ ನಮ್ಮ ಹೈಕಮಾಂಡ್ ನಾಯಕರು ಹೇಳಿಲ್ಲ. ಆದರೆ ಖುದ್ದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ ಎಂದು ಈಶ್ವರಪ್ಪ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

click me!