ಡಿವಿಎಸ್‌ ಭೇಟಿಯಾಗದೆ ಅವಮಾನಿಸಿ ಕಳಿಸಿದ ಬಿಜೆಪಿ ಹೈಕಮಾಂಡ್: ಕಾಂಗ್ರೆಸ್‌ ಟೀಕೆ

Published : Oct 28, 2023, 07:15 AM IST
ಡಿವಿಎಸ್‌ ಭೇಟಿಯಾಗದೆ ಅವಮಾನಿಸಿ ಕಳಿಸಿದ ಬಿಜೆಪಿ ಹೈಕಮಾಂಡ್: ಕಾಂಗ್ರೆಸ್‌ ಟೀಕೆ

ಸಾರಾಂಶ

ಕುಮಾರಸ್ವಾಮಿಯವರಿಗೆ ಸುಲಭದಲ್ಲಿ ಸಿಗುವ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸಿಗದಿರುವುದೇಕೆ? ಕರ್ನಾಟಕದಲ್ಲಿ ಸಾಂವಿಧಾನಿಕ ಹುದ್ದೆಯಾದ ವಿಪಕ್ಷ ನಾಯಕನ ಸ್ಥಾನ ಹಲವು ತಿಂಗಳುಗಳಿಂದ ಖಾಲಿ ಇರುವುದು ಬಿಜೆಪಿಗೆ ಗಂಭೀರ ವಿಷಯವಲ್ಲವೇ ಎಂದು ಕಿಡಿ ಕಾರಿದ ಕಾಂಗ್ರೆಸ್‌ 

ಬೆಂಗಳೂರು(ಅ.28):  ‘ಯಡಿಯೂರಪ್ಪನವರನ್ನು ಭೇಟಿಯಾಗದೆ ಅವಮಾನಿಸಿ ಕಳಿಸಿದ್ದ ಬಿಜೆಪಿ ಹೈಕಮಾಂಡ್ ಈಗ ಸದಾನಂದಗೌಡರ ಮುಖವನ್ನೂ ನೋಡದೆ ವಾಪಸ್ ಕಳಿಸಿದೆ. ಇಂತಹ ಅವಮಾನ, ತಿರಸ್ಕಾರಗಳಿಗೆ ಒಳಪಟ್ಟರೂ ಸಹಿಸಿಕೊಳ್ಳುತ್ತಿರುವುದು ಗುಲಾಮಗಿರಿಯ ಸಂಕೇತವಲ್ಲವೇ?’ ಎಂದು ರಾಜ್ಯ ಕಾಂಗ್ರೆಸ್‌ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ‘ರಾಜ್ಯ ಬಿಜೆಪಿಯ ನಾಯಕರು ಕುಮಾರಸ್ವಾಮಿಯವರನ್ನು ಕರೆದುಕೊಂಡು ಹೋಗಿದ್ದರೆ ಕನಿಷ್ಠ ದೆಹಲಿ ನಾಯಕರ ಮುಖವನ್ನಾದರೂ ನೋಡುವ ಸೌಭಾಗ್ಯ ಸಿಗುತ್ತಿತ್ತೇನೋ ಎಂದು ಹೇಳಿದೆ.

ಕಲೆಕ್ಷನ್‌ನಲ್ಲೂ ಸಿದ್ದು, ಡಿಕೆಶಿ ನಡುವೆ ತೀವ್ರ ಸ್ಪರ್ಧೆ: ಸದಾನಂದಗೌಡ

ಯಡಿಯೂರಪ್ಪ ಹಾಗೂ ಸದಾನಂದಗೌಡ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಹಿರಿಯ ನಾಯಕರು. ಇಂತಹವರನ್ನೇ ಅವಮಾನಿಸುತ್ತಿರುವುದರಿಂದ ಬಿಜೆಪಿಗರ ಸ್ವಾಭಿಮಾನಕ್ಕೆ ಧಕ್ಕೆಯಾದಂತೆ ಅಲ್ಲವೇ? ಇಂತಹ ಅವಮಾನ, ತಿರಸ್ಕಾರಗಳಿಗೆ ಒಳಪಟ್ಟರೂ ಸಹಿಸಿಕೊಳ್ಳುತ್ತಿರುವುದು ಗುಲಾಮಗಿರಿಯ ಸಂಕೇತವಲ್ಲವೇ ಎಂದು ಪ್ರಶ್ನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ