
ನವದೆಹಲಿ(ಜು.03) ಕರ್ನಾಟಕ ಸೇರಿದಂತೆ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಅಂತ್ಯಗೊಂಡಿದೆ. ಹೀಗಾಗಿ ನೂತನ ರಾಜ್ಯಧ್ಯಕ್ಷರ ಆಯ್ಕೆಗೆ ಹಲವು ಸುತ್ತಿನ ಕಸರತ್ತು ನಡೆದಿದ್ದು, ಇದೀಗ ಅಂತಿಮ ಪಟ್ಟಿ ರೆಡಿ ಮಾಡಲಾಗಿದೆ. ಇಂದು ಸಂಜೆಯೊಳಗೆ 5 ರಾಜ್ಯಗಳಿಗೆ ನೂತನ ಬಿಜೆಪಿ ಸಾರಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬಿಜೆಪಿ ರಾಜ್ಯಧ್ಯಕ್ಷರಿಗೂ ಮೊದಲು ವಿಪಕ್ಷ ನಾಯಕ ಘೋಷಣೆ ಬಾಕಿ ಇದೆ. ಈ ಕುರಿತು ಬಿಎಸ್ ಯಡಿಯೂರಪ್ಪನವರನ್ನು ದೆಹಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಲಾಗಿದೆ.
ಕರ್ನಾಟಕ, ಗುಜರಾತ್, ಮದ್ಯಪ್ರದೇಶ, ತೆಲಂಗಾಣ, ಪಂಜಾಬ್ ರಾಜ್ಯಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಬೇಕಿದೆ. ಇದರಲ್ಲಿ ನಾಲ್ಕು ರಾಜ್ಯಗಳ ರಾಜ್ಯಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಆದರೆ ಕರ್ನಾಟಕದ ಆಯ್ಕೆಯಲ್ಲಿ ಕೆಲ ಗೊಂದಲಗಳು ಎರ್ಪಟ್ಟಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು ಅಂತಿಮಗೊಂಡಿಲ್ಲ. ಅಧಿವೇಶನ ಆರಂಭಗೊಂಡರೂ ಸಮರ್ಥ ವಿಪಕ್ಷ ನಾಯಕರಿಲ್ಲದೆ ಬಿಜೆಪಿ ತೀವ್ರ ಮುಜುಗರ ಅನುಭವಿಸಿದೆ. ಹೀಗಾಗಿ ಕರ್ನಾಟಕದಲ್ಲಿ ಮೊದಲು ವಿಪಕ್ಷ ನಾಯಕನ ಆಯ್ಕೆ ಬಳಿಕ ರಾಜ್ಯಧ್ಯಕ್ಷರ ನೇಮಕವಾಗಲಿದೆ ಎಂದು ಮೂಲಗಳು ಹೇಳಿವೆ.
ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?
ಕರ್ನಾಟಕಕಕ್ಕೆ ಶೋಭಾಕರಂದ್ಲಾಜೆ ಅಥವಾ ಅಶ್ವಥ್ ನಾರಾಯಣ್ ಬಿಜೆಪಿ ರಾಜ್ಯಾಧ್ಯಕ್ಷೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳುತ್ತಿವೆ. ಹೈಕಮಾಂಡ್ ಕೂಡ ಶೋಭಾ ಕರಂದ್ಲಾಜೆಯನ್ನು ರಾಜ್ಯಧ್ಯಕ್ಷೆ ಮಾಡಲು ಸಮ್ಮತಿಸಿದೆ. ಇತ್ತ ಯಡಿಯೂರಪ್ಪ ಬಣ ಕೂಡ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗುತ್ತಿದೆ. ಬಸವರಾಜ್ ಬೊಮ್ಮಾಯಿಯನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಯಡಿಯೂರಪ್ಪ ಬಣ ಹೊರತುಪಡಿಸಿ ಇನ್ನುಳಿದ ನಾಯಕರು ಸಮ್ಮತಿಸಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಹೀಗಾಗಿ ಬೊಮ್ಮಾಯಿ ರಾಜ್ಯಧ್ಯಕ್ಷರಾದರೆ ಪಕ್ಷ ಮತ್ತಷ್ಟು ದುರ್ಬಲವಾಗಲಿದೆ ಅನ್ನೋ ಮಾತುಗಳು ಕೇಳಿಬಂದಿದೆ.
ಅಶ್ವತ್ಥ್ ನಾರಾಯಣ್ ಕೂಡ ಬಿಜೆಪಿ ರಾಜ್ಯಧ್ಯಕ್ಷ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಪೈಪೋಟಿ ಜೋರಾಗಿದೆ. ಇನ್ನು ತೆಲಂಗಾಣದಲ್ಲಿ ಜಿ ಕಷ್ಣ ರೆಡ್ಡಿ, ಪಂಜಾಬ್‌ನಲ್ಲಿ ಸುನಿಲ್ ಜಖಾರ್ ರಾಜ್ಯಧ್ಯಕ್ಷರಾಗುವ ಸಾಧ್ಯತ ಇದೆ.
ಭಾರಿ ಪೈಪೋಟಿ ನಡುವೆ ಬಿಜೆಪಿ ತೆಕ್ಕೆಗೆ ಸಿಕ್ಕ ಆಡಳಿತ
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಅಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ವಿ ಸೋಮಣ್ಣರಿಂದ ಹಿಡಿದು, ಎಂಪಿ ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರು ಬಹಿರಂಗವಾಗಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ರೆಬೆಲ್ ಆಗಿರುವ ರೇಣುಕಾಚಾರ್ಯ, ರಾಜ್ಯಧ್ಯಕ್ಷ, ಎಂಪಿ ಟಿಕೆಟ್ ಸೇರಿದಂತೆ ಹಲವು ಸ್ಥಾನಕ್ಕೂ ಬೇಡಿಕ ಇಟ್ಟಿದ್ದಾರೆ.
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಲು ಎಲ್ಲರೂ ಸಮರ್ಥರಿದ್ದಾರೆ. ಅವರಂತೆ ನಾನೂ ಸಹ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ. ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ಎಂಪಿ ಟಿಕೆಟ್‌ಗೂ ಆಕಾಂಕ್ಷಿಯಾಗಿದ್ದೇನೆ. ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಜನತೆ ಸೇರಿದಂತೆ ಜಿಲ್ಲೆಯ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನನಗೆ ಕರೆ ಮಾಡಿ ಲೋಕಸಭಾ ಅಭ್ಯರ್ಥಿಯಾಗಿ, ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.