ಭಿನ್ನರ ಪಡೆಗೆ ಹೈಕಮಾಂಡ್‌ ಶಾಕ್‌, ಯತ್ನಾಳಗೆ ನೋಟಿಸ್‌: ಕಠಿಣ ಕ್ರಮದ ಎಚ್ಚರಿಕೆ!

Published : Feb 11, 2025, 05:00 AM IST
ಭಿನ್ನರ ಪಡೆಗೆ ಹೈಕಮಾಂಡ್‌ ಶಾಕ್‌, ಯತ್ನಾಳಗೆ ನೋಟಿಸ್‌: ಕಠಿಣ ಕ್ರಮದ ಎಚ್ಚರಿಕೆ!

ಸಾರಾಂಶ

ಕೇಂದ್ರ ಶಿಸ್ತು ಸಮಿತಿಯಿಂದ ಅಧಿಕೃತವಾಗಿ ನನಗೆ ಯಾವುದೇ ನೋಟಿಸ್ ಬಂ ದಿಲ್ಲ. ನೋಟಿಸ್ ಬಂದ ಮೇಲೆ ವಿವರವಾದ ಉತ್ತರ ಕೊಡುತ್ತೇನೆ ಎಂದು ತಿಳಿಸಿದ  ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರು(ಫೆ.11): ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಬೀಸಿದ ಭಿನ್ನರ ಗುಂಪಿ ಗೆ ಪಕ್ಷದ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ದೆಹಲಿ ವಿಧಾನ ಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಹೈಕ ಮಾಂಡ್ ಕಾರ್ಯ ಪ್ರವೃತ್ತವಾಗಿದೆ. ಭಿನ್ನರ ಗುಂಪಿನ ನಾಯಕ ಎಂದೇ ಬಿಂಬಿತವಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರಿಗೆ ಪಕ್ಷ ದ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಜತೆಗೆ 3 ದಿನಗಳೊಳಗಾಗಿ ಲಿಖಿತ ವಿವರಣೆ ನೀಡುವಂತೆ ಗಡುವನ್ನೂ ವಿಧಿಸಿದೆ.

ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ತಾವು ಪಕ್ಷದ ಶಿಸ್ತು ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದೆ. ಈ ಹಿಂದೆ ಶೋಕಾಸ್ ನೋಟಿಸ್‌ ನೀಡಿದ್ದ ವೇಳೆ ಉತ್ತಮ ನಡವಳಿಕೆ ತೋರುವುದಾಗಿ ಭರವಸೆ ನೀಡಿದ್ದಿರಿ. ಆದರೆ ನಿಮ್ಮದೇ ಭರವಸೆಯನ್ನು ನೀವು ಉಲ್ಲಂಘಿಸಿ, ಅದನ್ನೇ ಮುಂದುವರಿಸಿಕೊಂಡು ಬಂದಿದ್ದೀರಿ. ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು 3 ದಿನದಲ್ಲಿ ಉತ್ತರ ನೀಡಿ ಎಂದು ನೋಟಿಸ್‌ನಲ್ಲಿ, ಪ್ರತೀಕವಾಗಿ ಬರೆಯಲಾಗಿದೆ. ಒಂದು ವೇಳೆ, ಈ ಮೂರು ದಿನಗಳಲ್ಲಿ ವಿವರಣೆ ನೀಡದಿದ್ದರೆ, ಏನೂ ಹೇಳುವುದು ಇಲ್ಲವೆಂದು ಭಾವಿಸಿ ಅಂತಿಮ ಹಂತದ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನೂ ಕೊಟ್ಟಿದೆ. ಯತ್ನಾಳ್‌ ಸೇರಿ ಅವರ ಬಣದ ಮುಖಂ ಡರು ಸೋಮವಾರ ವಾರದಲ್ಲಿ ಎರಡನೇ ಬಾರಿ ದೆಹಲಿಗೆ ತೆರಳಿ ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿರುವ ಮಧ್ಯೆಯೇ ಪಕ್ಷದ ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂಪಾಠಕ್ ಅವರು ಶೋಕಾಸ್‌ ನೋಟಿಸ್‌ ನೀಡಿರುವುದು ಕುತೂಹಲ ಮೂಡಿಸಿದೆ.

ಯತ್ನಾಳ್‌ ಅವರಿಗೆನೀಡುತ್ತಿರುವ ಎರಡನೆಯ ಶೋಕಾಸ್ ನೋಟಿಸ್ ಇದಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಮೊದಲ ಶೋಕಾಸ್ ನೋಟಿಸ್‌ ನೀಡಲಾಗಿತ್ತು. ಅದಕ್ಕೆ ಆರು ಪುಟಗಳ ವಿವರಣೆಯನ್ನೂ ಯತ್ನಾಳ್‌ ಅವರು ನೀಡಿದ್ದರು. ಆದರೆ, ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳದ ಅವರು ಸತತವಾಗಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಲೇ ಇದ್ದರು. ಜತೆಗೆ ಪಕ್ಷದ ರಾಜ್ಯ ಉಸ್ತುವಾರಿಗಳ ಬಗ್ಗೆಯೂ ಲಘುವಾಗಿ ಮಾತನಾಡಿದ್ದರು.

ಅಸಮಾಧಾನ ವ್ಯಕ್ತಪಡಿಸಿದ್ದ ಬಿವೈವಿ: ಇದರಿಂದ ಕೆಂಡಾಮಂಡಲವಾದ ವಿಜಯೇಂದ್ರ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಯತ್ನಾಳ್ ಅವರು ಯಡಿಯೂರಪ್ಪ ವಿರುದ್ದ ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪಕ್ಷದ ನಾಯಕರು ಮೌನ ವಹಿಸಿದ್ದರ ಬಗ್ಗೆ ಆಕ್ರೋಶ ಭರಿತರಾಗಿ ಮಾತನಾಡಿದ್ದರು. ಯಡಿಯೂರಪ್ಪ ವಿರುದ್ದ ಹೇಳಿಕೆ ನೀಡಿದರೂ ಅದನ್ನು ತಡೆಯಲು ಪ್ರಯತ್ನಿಸದೇ ಇರುವುದು ಅಪರಾಧ ಎಂದು ಹರಿಹಾಯ್ದಿದ್ದರು.

ಈ ಮಧ್ಯೆ ವಿಜಯೇಂದ್ರ ಅವರು ಭಾನುವಾರ ದಿಢೀರ್ ದೆಹಲಿಗೆ ತೆರಳಿದ್ದರು. ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರೂ ಅವರು ಕೆಲ ನಾಯಕರನ್ನು ಭೇಟಿ ಮಾಡಿ ಯತ್ನಾಳ್ ಅವರ ಹೇಳಿಕೆಗಳಿಗೆ ಬ್ರೇಕ್ ಹಾಕುವ ಅಗತ್ಯತೆಯನ್ನು ಎನ್ನಲಾಗಿದೆ. ಪ್ರತಿಪಾದಿಸಿದರು. 

ನೋಟಿಸಲ್ಲೇನಿದೆ?

ಈ ಹಿಂದೆ ನೋಟಿಸ್ ನೀಡಿದ್ದ ವೇಳೆ ಉತ್ತಮ ನಡವಳಿಕೆ ತೋರುವುದಾಗಿ ಹೇಳಿದ್ದಿರಿ. ಆದರೆ ನಿಮ್ಮದೇ ಭರವ ಸೆಯನ್ನು ನೀವು ಉಲ್ಲಂಘಿಸಿ, ಅದನ್ನೇ ಮುಂದುವರಿಸಿಕೊಂಡು ಬಂದಿದ್ದೀರಿ. ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು?

ನೋಟಿಸ್ ಬಂದಿಲ್ಲ

ಕೇಂದ್ರ ಶಿಸ್ತು ಸಮಿತಿಯಿಂದ ಅಧಿಕೃತವಾಗಿ ನನಗೆ ಯಾವುದೇ ನೋಟಿಸ್ ಬಂ ದಿಲ್ಲ. ನೋಟಿಸ್ ಬಂದ ಮೇಲೆ ವಿವರವಾದ ಉತ್ತರ ಕೊಡುತ್ತೇನೆ ಎಂದು ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸುಳ್ಳು ಆರೋಪ ಮಾಡಿದರೆ ಒದ್ದು ಒಳಗೆ ಹಾಕಬೇಕಾಗುತ್ತದೆ: ಸಚಿವ ಎಂ.ಬಿ.ಪಾಟೀಲ್‌
ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ