ಪ್ರಮುಖ ಬಿಜೆಪಿ ನಾಯಕರಿಗೆ ಶಾಕ್: ಮುಂದಿನ ತಿಂಗ್ಳು ರಾಜ್ಯ ರಾಜಕಾರಣದಲ್ಲಿ ಸಂಚಲನ

By Suvarna NewsFirst Published Sep 26, 2020, 10:30 PM IST
Highlights

ರಾಜ್ಯ ಬಿಜೆಪಿ ಕೆಲ ನಾಯಕರಿಗೆ ಹೈಕಮಾಂಡ್ ಶಾಕ್ ಕೊಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಅಂದ್ರೆ ಅಕ್ಟೋಬರ್‌ನಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಲಿವೆ.

ಬೆಂಗಳೂರು, (ಸೆ.26): ಸಂಪುಟ ವಿಸ್ತರಣೆ ಬದಲು‌ ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎಂದು ತಿಳಿದುಬಂದಿದೆ.

ಹಲವು ದಿನಗಳಿಂದ ಕಗ್ಗಂಟಾಗಿ ಉಳಿದಿದ್ದ ಬಿಎಸ್‌ವೈ ಸಂಪುಟಕ್ಕೆ ಸಂಬಂಧಿಸಿದಂತೆ ಅಕ್ಟೋಬರ್  5ರ ಬಳಿಕ ಹೈಕಮಾಂಡ್ ಮಹತ್ವದ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿದ್ದು, ಸಿಎಂ ಯಡಿಯೂರಪ್ಪ ಕ್ಯಾಬಿನೆಟ್‌ನಲ್ಲಿ ಭಾರೀ ಬದಲಾವಣೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಬಿಜೆಪಿಯಲ್ಲಿ ಬಿಗ್ ಚೇಂಜ್: ರಾಜ್ಯ ನಾಯಕರಿಗೆ ಹೈಕಮಾಂಡ್ ಭರ್ಜರಿ ಗಿಫ್ಟ್

ಪ್ರಮುಖ ಸಚಿವರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ಕೊಡಬೇಕೆನ್ನುವುದು ಹೈಕಮಾಂಡ್‌ನ ಅಭಿಪ್ರಾಯವಾಗಿದೆ. ಅದರಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ಅವರಿಗೆ ಕೊಕ್ ಸಾಧ್ಯತೆ ಹೆಚ್ಚಿವೆ. ಇದಕ್ಕೆ ಪೂರಕವೆಂಬಂತೆ ಸಿ.ಟಿ.ರವಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ ಎಂದು ಮೂಲಗಳಿಂದು ತಿಳಿದುಬಂದಿದೆ.

ಪ್ರಮುಖರಿಗೆ ಕೊಕ್
 ಸಂಪುಟ ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಭಾರೀ  ಚರ್ಚೆಯಾಗುತ್ತಿದ್ದು, ಹಾಲಿ ಸಚಿವರಾದ ಸಿ.ಟಿ.ರವಿ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಕೊಕ್ ನೀಡುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಸಚಿವ‌ ಸ್ಥಾನದ ರೇಸ್‌ನಲ್ಲಿರುವವರು 
ಎಂ.ಟಿ‌‌.ನಾಗರಾಜ್, ಆರ್. ಶಂಕರ್,  ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಅಂಗಾರ, ಸುನೀಲ್ ಕುಮಾರ್ ಅಥವಾ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಬಸನಗೌಡಪಾಟೀಲ್ ಯತ್ನಾಳ್ ರತ್ತ ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗುತ್ತಿದೆ.

click me!