ಕೈ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ

By Suvarna News  |  First Published Jul 9, 2021, 8:13 PM IST

* ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಹಲ್ಲೆ ಪ್ರಕರಣ
* ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ವಿರುದ್ಧ ಬಿಜೆಪಿ ಕಿಡಿ
* ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ


ಬೆಂಗಳೂರು, (ಜುಲೈ.09): ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಕ್ರಮವನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ತಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್‌ ಹಿಂಪಡೆದಿದ್ದರು. ಈಗ ಶತ್ರುರಾಷ್ಟ್ರ ಪಾಕಿಸ್ತಾನದ ಪರವಾಗಿ ಬರೆದ ವ್ಯಕ್ತಿಯ ಪರ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್‌ನ ಎಲ್ಲಾ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಟ್ವಿಟ್ಟರ್‌ನಲ್ಲಿ ವಾಗ್ದಾಳಿ ನಡೆಸಿದೆ.

Latest Videos

undefined

ದೇಶದ್ರೋಹ ಎಂದರೇನು? ಸಿದ್ದುಗೆ ಬಿಜೆಪಿ ಶಾಸಕ ಗುದ್ದು..!

ಟಿಪ್ಪು ಜಯಂತಿಯನ್ನು ಜಾರಿಗೆ ತಂದಿದ್ದ ಸಿದ್ದರಾಮಯ್ಯ, ಇಂದು ಪಾಕಿಸ್ಥಾನದ ಸಮರ್ಥಕನನ್ನು ಕಾನೂನಿನಿಂದ ರಕ್ಷಿಸಲು ಯತ್ನಿಸುತ್ತಿದ್ದಾರೆ‌.

ಮತಾಂಧರಿಂದ ಮನೆಸುಟ್ಟುಕೊಂಡ ದಲಿತ ಶಾಸಕನ ಪರವಾಗಿ ಧ್ವನಿ ಎತ್ತದ ಸಿದ್ದರಾಮಯ್ಯ ಇಂದು ಪಾಕಿಸ್ಥಾನ ಪ್ರೇಮಿ, ಸೈನಿಕ ವಿರೋಧಿಯನ್ನು ಸಮರ್ಥನೆ ಮಾಡುತ್ತಿದ್ದಾರೆ.

ನಿಮಗೇನಾಗಿದೆ !?

— BJP Karnataka (@BJP4Karnataka)

ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ಈಗ ಪಾಕಿಸ್ತಾನ ಪ್ರೇಮಿಯ ಪರ ನಿಂತಿದ್ದಾರೆ. ಕಾಂಗ್ರೆಸ್‌ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ. ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್‌ ಮಾತ್ರ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕಾಂಗ್ರೆಸ್‌ ಪಕ್ಷ ಭಾರತೀಯ ಸೈನಿಕರ ಪರವೋ ಅಥವಾ ಪಾಕಿಸ್ಥಾನದ ಪರವೋ ಎಂಬುದನ್ನು ಸ್ಪಷ್ಟಪಡಿಸಬೇಕು.

ದೇಶದ ಸೈನಿಕರ ಸಾವು ಬಯಸುವ ಕಾರ್ಯಕರ್ತರನ್ನೂ ಸಮರ್ಥಿಸಿಕೊಳ್ಳುತ್ತದೆ ಎಂದರೆ ಇದಕ್ಕಿಂತ ನಾಚಿಗೆಗೇಡಿನ ಸಂಗತಿ ಮತ್ತೊಂದಿಲ್ಲ. pic.twitter.com/KYqT4yetEi

— BJP Karnataka (@BJP4Karnataka)
click me!