ರಾಜ್ಯಸಭೆಗೆ ದೇವೇಗೌಡರ ಆಯ್ಕೆ, ಧರ್ಮಸಂಕಷ್ಟಕ್ಕೆ ಸಿಲುಕಿದ ಬಿಜೆಪಿ, ಬೇರೆ ರಾಜ್ಯದಿಂದ ಕಳಿಸೋ ಪ್ಲಾನ್?

Kannadaprabha News   | Kannada Prabha
Published : Jun 04, 2026, 06:34 AM IST
BJP in Dilemma Over HD Deve Gowda s Rajya Sabha Nomination Political Buz

ಸಾರಾಂಶ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವ ವಿಚಾರದಲ್ಲಿ ಬಿಜೆಪಿ ಧರ್ಮಸಂಕಟಕ್ಕೆ ಸಿಲುಕಿದೆ. ಕರ್ನಾಟಕದ ಬದಲು ಬೇರೆ ರಾಜ್ಯದಿಂದ ಅವರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅಂತಿಮ ನಿರ್ಧಾರವನ್ನು ಬಿಜೆಪಿ ವರಿಷ್ಠರು ತೆಗೆದುಕೊಳ್ಳಲಿದ್ದಾರೆ.

- ಗೌಡರ ಆಯ್ಕೆ ಬಗ್ಗೆ ವರಿಷ್ಠರೇ ನಿರ್ಧಾರ ಮಾಡಲಿ । ಧರ್ಮಸಂಕಟದಲ್ಲಿ ರಾಜ್ಯ ಬಿಜೆಪಿ ನಾಯಕರು

ಬೆಂಗಳೂರು (ಜೂ.4): ಮಾಜಿ ಪ್ರಧಾನಿ, ಮಿತ್ರ ಪಕ್ಷ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್‌.ಡಿ.ದೇವೇಗೌಡ(HD Devegowda) ಅವರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳುಹಿಸುವ ಕುರಿತು ಬಿಜೆಪಿ ಅಕ್ಷರಶಃ ಧರ್ಮ ಸಂಕಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದೆ.

ಸಿಕ್ಕಿರೋ ಒಂದು ಸ್ಥಾನ ದೇವೇಗೌಡರಿಗೆ ಬಿಟ್ಟು ಕೊಡಲು ಮೀನಾಮೇಷ

ಕರ್ನಾಟಕ ವಿಧಾನಸಭೆಯಿಂದ ತನಗೆ ಲಭ್ಯವಾಗುವ ಒಂದು ರಾಜ್ಯಸಭಾ ಸ್ಥಾನವನ್ನು ದೇವೇಗೌಡರಿಗೆ ಬಿಟ್ಟು ಕೊಡುವ ಬಗ್ಗೆ ಮೀನ ಮೇಷ ಎಣಿಸುತ್ತಿರುವ ಬಿಜೆಪಿ ನಾಯಕರು ಹಾಗೊಂದು ವೇಳೆ ಕೊಡುವುದೇ ಆದಲ್ಲಿ ಬೇರೊಂದು ರಾಜ್ಯದಿಂದ ಆಯ್ಕೆ ಮಾಡಬಹುದು ಎಂಬ ಮಾತು ಕೇಳಿಬರುತ್ತಿದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ.

ಆರೋಗ್ಯದಲ್ಲಿ ಹೆಚ್ಚು ಕಡಿಮೆ ಆದರೆ ಆ ಸ್ಥಾನ ಕೈತಪ್ಪುವ ಆತಂಕ

ಸದ್ಯದ ಸ್ಥಿತಿಯಲ್ಲಿ ಬಿಜೆಪಿಗೆ ರಾಜ್ಯಸಭೆಯ ಒಂದೊಂದು ಸ್ಥಾನವೂ ಮುಖ್ಯ. ಹೀಗಿರುವಾಗ 94ರ ವಯಸ್ಸಿನ ಗೌಡರನ್ನು ಕರ್ನಾಟಕದಿಂದ ಆಯ್ಕೆ ಮಾಡಿ ಕಳುಹಿಸಿದಲ್ಲಿ ಮುಂದೆ ಹಲವು ದಿನಗಳ ಬಳಿಕ ಆರೋಗ್ಯದಲ್ಲಿ ಹೆಚ್ಚೂ ಕಡಮೆ ಆದಲ್ಲಿ ಮತ್ತೆ ಆ ಸ್ಥಾನ ಕೈಬಿಟ್ಟು ಹೋಗುತ್ತದೆ ಎಂಬ ಆತಂಕ ಬಿಜೆಪಿ ಪಾಳೆಯದಲ್ಲಿ ಕಂಡು ಬರುತ್ತಿದೆ. ವಿಧಾನಸಭೆ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ಗೆ ಗೆಲುವು ಸುಲಭವಾಗುತ್ತದೆಯೇ ಹೊರತು ಬಿಜೆಪಿಗಲ್ಲ. ಹೀಗಾಗಿ, ಕರ್ನಾಟಕದಿಂದ ಬಿಜೆಪಿಯವರೊಬ್ಬರನ್ನು ರಾಜ್ಯಸಭೆಗೆ ಕಳುಹಿಸಿ, ದೇವೇಗೌಡರನ್ನು ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಿಂದ ಆಯ್ಕೆ ಮಾಡಿ ಕಳುಹಿಸಬಹುದು ಎಂಬ ಚರ್ಚೆ ನಡೆದಿದೆ.

ತಮ್ಮ ಪಕ್ಷಕ್ಕೆ ಸಂಖ್ಯಾಬಲ ಇಲ್ಲದಿದ್ದರೂ ದೇವೇಗೌಡರಾಗಲಿ ಅಥವಾ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಾಗಲಿ ರಾಜ್ಯಸಭೆ ಸ್ಥಾನ ಬೇಡ ಎಂದು ಹೇಳಿಲ್ಲ. ಬಿಜೆಪಿಯವರಿಗೆ ಬೇಕಾದರೆ ಗೌಡರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಿ ಎಂದು ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವುದು ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಇಳಿವಯಸ್ಸಲ್ಲಿ ಆಯ್ಕೆ ಆಸಕ್ತಿ ಇಲ್ಲ:

ಹಾಗೆ ನೋಡಿದರೆ ದೇವೇಗೌಡರನ್ನು ಈ ಇಳಿ ವಯಸ್ಸಿನಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅಷ್ಟೇನೂ ಒಲವಿಲ್ಲ. ಆದರೆ, ಪ್ರಧಾನಿ ಮೋದಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಇದುವರೆಗೆ ಗೊತ್ತಾಗಿಲ್ಲ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ಮಾಜಿ ಶಾಸಕ ನಿರ್ಮಲಕುಮಾರ್ ಸುರಾನ ಅವರ ಹೆಸರುಗಳು ಬಿಜೆಪಿ ಪಾಳೆಯದಿಂದ ಪ್ರಬಲವಾಗಿ ಪ್ರಸ್ತಾಪವಾಗಿವೆ. ದೇವೇಗೌಡರ ಬಗ್ಗೆ ಏನೇ ನಿರ್ಧಾರ ಕೈಗೊಳ್ಳುವುದಿದ್ದರೂ ಅದನ್ನು ವರಿಷ್ಠರೇ ಕೈಗೊಳ್ಳಲಿ ಎಂಬ ನಿಲವಿಗೆ ಬಂದು ಕಾಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

DKS Six major Decisions: ಮೊದಲ ಸಂಪುಟ ಸಭೆಯಲ್ಲೇ ಡಿಕೆಶಿ ಸಿಕ್ಸರ್‌! ವಿದ್ಯಾರ್ಥಿಗಳಿಗೂ ಬಸ್ಸಲ್ಲಿ ಉಚಿತ ಪ್ರಯಾಣ ಸೇರಿ 6 ಮಹತ್ವದ ನಿರ್ಧಾರ!
ಸಚಿವ ಸ್ಥಾನ ಬಯಸಿದ್ದ ಬಿಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದು ಹೇಗೆ? ಏನಿದು ಒಕ್ಕಲಿಗ ಸಿಎಂ + ಓಬಿಸಿ ಅಧ್ಯಕ್ಷ ಸೂತ್ರ?