ಬಿಜೆಪಿಯಿಂದ ಕರಾವಳಿಗೆ ಮಾತ್ರವಲ್ಲ ರಾಜ್ಯಕ್ಕೇ ನಷ್ಟ: ಡಿ.ಕೆ.ಶಿವಕುಮಾರ್‌

Kannadaprabha News   | Kannada Prabha
Published : May 31, 2025, 08:41 AM IST
 DK Shivakumar

ಸಾರಾಂಶ

ಬಿಜೆಪಿಯವರು ಹಾಗೂ ಅನೇಕ ಸಂಘಟನೆಗಳು ಕರಾವಳಿ ಭಾಗದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಇದರಿಂದ ನಷ್ಟ ಆಗುವುದು ಇಡೀ ರಾಜ್ಯಕ್ಕೆ ಎಂಬುದನ್ನು ಅವರು ಅರಿತುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಮೇ.31): ಬಿಜೆಪಿಯವರು ಹಾಗೂ ಅನೇಕ ಸಂಘಟನೆಗಳು ಕರಾವಳಿ ಭಾಗದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಇದರಿಂದ ನಷ್ಟ ಆಗುವುದು ಇಡೀ ರಾಜ್ಯಕ್ಕೆ ಎಂಬುದನ್ನು ಅವರು ಅರಿತುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಮತ್ತೊಂದು ಕೋಮು ಹತ್ಯೆ ಹಾಗೂ ಗಲಭೆ ವಿಚಾರ ಕುರಿತು ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಪ್ರಕರಣದ ಬಗ್ಗೆ ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಇದೀಗ ಸಾರ್ವಜನಿಕರ ಜತೆ ಚರ್ಚೆ ಮಾಡಿ ವರದಿ ನೀಡಲು ನಮ್ಮ ಪಕ್ಷದವರಿಗೆ ತಿಳಿಸಿದ್ದೇನೆ ಎಂದರು. ನೀವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದರೂ ಪರಿಸ್ಥಿತಿ ನಿಯಂತ್ರಣವಾಗುತ್ತಿಲ್ಲ ಎಂದು ಕೇಳಿದಾಗ, ಪರಿಸ್ಥಿತಿ ನಿಯಂತ್ರಿಸಲಾಗುತ್ತಿದೆ. ಕರಾವಳಿಯಲ್ಲಿ ಶಾಂತಿ ನೆಲೆಸಬೇಕು. ಬಿಜೆಪಿಯವರು ಹಾಗೂ ಅನೇಕ ಸಂಘಟನೆಗಳು ಈ ಭಾಗದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ.

ಇದರಿಂದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇಡೀ ರಾಜ್ಯಕ್ಕೆ ನಷ್ಟ. ಇದು ಒಂದು, ಎರಡು ಸಾವಿನ ವಿಚಾರ ಮಾತ್ರವಲ್ಲ. ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿಪೆಟ್ಟು. ಜನ ಆಂತಕಕ್ಕೆ ಒಳಗಾಗುವುದು, ಇಲ್ಲಿನ ಯುವಕರು ಉದ್ಯೋಗಕ್ಕಾಗಿ ಬೇರೆ ದೇಶಗಳಿಗೆ ಹೋಗುವುದು, ಬಂಡವಾಳ ಹೂಡಿಕೆದಾರರು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿರುವುದನ್ನು ಎಲ್ಲರೂ ಅರಿತುಕೊಳ್ಳಬೇಕು. ಈ ವಸ್ತುಸ್ಥಿತಿ ಅರಿತುಕೊಳ್ಳಬೇಕೆಂದು ಬಿಜೆಪಿ ಸ್ನೇಹಿತರು ಹಾಗೂ ಬೇರೆ ಬೇರೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ ಎಂದರು.

ಗ್ಯಾರಂಟಿ ನಿಲ್ಲಲ್ಲ: ಕಾಂಗ್ರೆಸ್‌ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಜನರ ಕಲ್ಯಾಣಕ್ಕಾಗಿಯೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್‌ ಇರೋವರೆಗೂ ಈ ಗ್ಯಾರಂಟಿ ನಿಲ್ಲಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ. ನಗರದಲ್ಲಿ ನಡೆದ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಮುಂದೆಯೂ ಜನ ಕಲ್ಯಾಣಕ್ಕಾಗಿ ಶ್ರಮಿಸಲಿದೆ ಎಂದರು.

ಈಗ ಕಂದಾಯ ಇಲಾಖೆಯಿಂದ 6ನೇ ಗ್ಯಾರಂಟಿಯಾಗಿ ‘ಭೂ ಗ್ಯಾರಂಟಿ’ ಯೋಜನೆ ಜಾರಿಗೊಂಡಿದೆ. ವಿರೋಧ ಪಕ್ಷಗಳು ಎಷ್ಟೇ ಟೀಕಿಸಿದರೂ ಸರಿ, ನಾವು ಜನಸೇವಾ ಕಾರ್ಯವನ್ನು ಮುಂದುವರಿಸುತ್ತೇವೆ. ಟೀಕೆಗಳು ಅಳಿಯುತ್ತವೆ. ಆದರೆ, ಕೆಲಸಗಳು ಉಳಿಯುತ್ತವೆ ಎಂಬ ತತ್ವದಲ್ಲಿ ನಮಗೆ ನಂಬಿಕೆಯಿದೆ ಎಂದು ಹೇಳಿದರು. ಕರ್ನಾಟಕ ಅಭಿವೃದ್ಧಿಯ ಪಥದತ್ತ ಮುನ್ನುಗ್ಗುತ್ತಿದೆ. ಪ್ರವಾಸೋದ್ಯಮ ಸೇರಿದಂತೆ ಎಲ್ಲ ಇಲಾಖೆಗಳಿಗೂ ರಾಜ್ಯದ ಪ್ರಗತಿಗೆ ಶ್ರಮವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇವೆ. ಹೊಸ, ಹೊಸ ಯೋಜನೆಗಳ ಮೂಲಕ ಜನರ ಆರ್ಥಿಕ ಶಕ್ತಿಯನ್ನು ಮತ್ತಷ್ಟು ವೃದ್ಧಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ