ಬಿಜೆಪಿಯವರದ್ದು ನಾಟಕ ಕಂಪನಿ‌: ಸಚಿವ ಶಿವರಾಜ ತಂಗಡಗಿ

Published : Dec 26, 2024, 07:26 AM IST
ಬಿಜೆಪಿಯವರದ್ದು ನಾಟಕ ಕಂಪನಿ‌: ಸಚಿವ ಶಿವರಾಜ ತಂಗಡಗಿ

ಸಾರಾಂಶ

ಸಿ.ಟಿ.ರವಿ ಮೇಲೆ ಹಲ್ಲೆ ನಡೆದಿದೆಯೋ ಇಲ್ಲವೋ ಎನ್ನುವುದನ್ನು ಅಧಿಕಾರಿಗಳು ಹೇಳಬೇಕು. ಸುಮ್ಮನೆ ತಲೆಗೊಂದು ದೊಡ್ಡದೊಂದು ಪಟ್ಟಿ ಕಟ್ಟಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯವರದ್ದು ನಾಟಕ ಕಂಪನಿ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಟೀಕಿಸಿದರು.

ಕಾರಟಗಿ (ಡಿ.26): ಸಿ.ಟಿ.ರವಿ ಮೇಲೆ ಹಲ್ಲೆ ನಡೆದಿದೆಯೋ ಇಲ್ಲವೋ ಎನ್ನುವುದನ್ನು ಅಧಿಕಾರಿಗಳು ಹೇಳಬೇಕು. ಸುಮ್ಮನೆ ತಲೆಗೊಂದು ದೊಡ್ಡದೊಂದು ಪಟ್ಟಿ ಕಟ್ಟಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯವರದ್ದು ನಾಟಕ ಕಂಪನಿ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ದೇವರ ಜಪ ಮಾಡಿದರೆ, ಸ್ವರ್ಗಕ್ಕೆ ಹೋಗುತ್ತಾರೆ ಎಂದಿದ್ದಾರೆ. ಅದಕ್ಕೆ ನಾನು ಹೇಳಿದ್ದೆ, ಬಿಜೆಪಿಗರು ದೇವರ ಜಪ ಮಾಡಿ ಸ್ವರ್ಗಕ್ಕೆ ಹೋಗಲಿ. ನಾವು ಅಂಬೇಡ್ಕರ್ ಜಪ ಮಾಡಿ ಇಲ್ಲಿಯೇ ಇರುತ್ತೇವೆ ಎಂದರು. ಎನ್ ಕೌಂಟರ್‌ಗೆ ಪ್ರಯತ್ನ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಉತ್ತರ ಪ್ರದೇಶ, ಗುಜರಾತ್ ರೀತಿಯ ಎನ್‌ ಕೌಂಟರ್ ಇಲ್ಲಿ ನಡೆಯಲ್ಲ. ನಮ್ಮ ರಾಜ್ಯದಲ್ಲಿ ಅಂಥ ಅವಶ್ಯಕತೆಯಿಲ್ಲ ಎಂದರು.

ಜೋಶಿ ಆರೋಪ ಅವರ ಘನತೆಗೆ ತಕ್ಕದ್ದಲ್ಲ: ಕರ್ನಾಟಕ ಪೊಲೀಸ್ ಇಲಾಖೆ ದೇಶಕ್ಕೆ ಮಾದರಿಯಾಗಿದ್ದು, ಮೇಲ್ಮನೆ ಸದಸ್ಯ ಸಿಟಿ ರವಿ ಅವರನ್ನು ಎನ್ಕೌಂಟರ್ ಮಾಡುವ ಹುನ್ನಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕ ಮಾತಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭದ್ರತೆ ಕಾರಣಕ್ಕಾಗಿ ಪೊಲೀಸರು ಸಿ.ಟಿ.ರವಿ ಅವರನ್ನು ಧಾರವಾಡ, ಗದಗ, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಸುತ್ತಿಸಿರುವ ಕುರಿತು ಮಾಹಿತಿ ಇದೆ. 

ಬೆಳಗಾವಿಯಲ್ಲಿ ಅಧಿವೇಶ ನಡೆಯುತ್ತಿರುವುದರಿಂದ ಮತ್ತು ಮುಂಜಾಗ್ರತಾ ಕ್ರಮವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕರೆಯ್ದೊಯ್ದಿರಬಹುದು. ಇದಕ್ಕೆ ವಿಪಕ್ಷ ನಾಯಕರು ಬೇರೆ ಅರ್ಥ ಕಲ್ಪಿಸಬಾರದು. ಕೇಂದ್ರದಲ್ಲಿ ಹತ್ತಾರು ವರ್ಷಗಳಿಂದ ಮಂತ್ರಿಯಾಗಿರುವ ಪ್ರಹ್ಲಾದ ಜೋಶಿ ಅವರ ಆರೋಪ ಅವರ ಘನತೆಗೆ ತಕ್ಕದ್ದಲ್ಲ. ಗುಜರಾತ, ಉತ್ತರ ಪ್ರದೇಶ ಸರ್ಕಾರದಂತೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿಲ್ಲ. ನಾವು ಯಾರನ್ನೂ ಎನ್ಕೌಂಟರ್ ಮಾಡುವುದಿಲ್ಲ. ಸರ್ಕಾರದ ಮಹಿಳಾ ಮಂತ್ರಿಯೊಬ್ಬರು ದೂರು ನೀಡಿದ್ದರಿಂದ ಪೊಲೀಸರು ರವಿ ಅವರನ್ನು ಬಂಧಿಸಿದ್ದಾರೆ. ರವಿ ಅವರ ಮೇಲಿನ ಆರೋಪಕ್ಕೆ ದಾಖಲೆ ಇರುವುದು ನನಗೆ ಗೊತ್ತಿಲ್ಲ. ಆ ಸಂದರ್ಭ ನಾನು ಅಧಿವೇಶದಲ್ಲಿ ಇರಲಿಲ್ಲ ಎಂದರು.

ನನ್ನ ಮಾತಿಗೆ ಗೌರವ ಕೊಟ್ಟು ಬರುವುದಾದರೆ ಲಕ್ಷ್ಮಿ- ರವಿ ಮಧ್ಯೆ ಸಂಧಾನಕ್ಕೆಈಗಲೂ ರೆಡಿ: ಹೊರಟ್ಟಿ

ಡಾ. ಬಿ.ಆರ್‌. ಅಂಬೇಡ್ಕರ್‌ ಬಗ್ಗೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ತಂಗಡಗಿ, ಅಂಬೇಡ್ಕರ್‌ ಸಂವಿಧಾನ ದೇಶದಲ್ಲಿ ಜಾರಿ ಇರದಿದ್ದರೆ, ಅಮಿತ್ ಶಾ ಗುಜರಾತಿನಲ್ಲಿ ಗುಜರಿ ವಸ್ತು ಮಾರುತ್ತಿದ್ದರು. ಪ್ರಧಾನಿ ಮೋದಿ ಅವರು ಸಹ ಚಹಾ ಮಾರುತ್ತಿದ್ದರು. ನಾನು ಕೂಡ ಸಾಮಾನ್ಯ ಗೌಂಡಿ ಮಗನಾಗಿ ಗೋಡೆ ಕಟ್ಟಲು ಹೋಗುತ್ತಿದ್ದೆ. ಈ ದೇಶಕ್ಕೆ ಅಂಬೇಡ್ಕರ್‌ ಸಂವಿಧಾನ ಕೊಟ್ಟಿದ್ದರಿಂದ ಅಮಿತ್ ಶಾ ಮಂತ್ರಿ ಆಗಿದ್ದಾರೆ. ಮೋದಿ ಚಹಾ ಮಾರಿ ಪ್ರಧಾನಿ ಆಗಿದ್ದಾರೆ ಎಂದರು. ಕೇಂದ್ರ ಸಚಿವ ಅಮಿತ್ ಶಾ ಹೇಳಿದಂತೆ ಬಿಜೆಪಿ ಮಿತ್ರರೆಲ್ಲ ದೇವರ ಸ್ಮರಣೆ ಮಾಡಿ ಸ್ವರ್ಗಕ್ಕೆ ಹೋಗಲಿ. ಕಾಂಗ್ರೆಸ್ಸಿನವರಾದ ನಾವು ಅಂಬೇಡ್ಕರ್‌ ಹೆಸರು ಪಠಣ ಮಾಡಿ ಭೂಮಿಯ ಮೇಲೆ ಇರುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್