ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಸಲೀಂ ಅಹ್ಮದ್‌

By Kannadaprabha News  |  First Published Oct 22, 2021, 3:18 PM IST

*  130 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ
*  ಬಿಜೆಪಿ ಸರ್ಕಾರದ ವಿರುದ್ಧ ಭ್ರಮನಿರಸನಗೊಂಡ ಜನರು
*  ಕೋವಿಡ್‌ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಅಮಾನವೀಯ
 


ಹಾನಗಲ್ಲ(ಅ.22): ಬಿಜೆಪಿ(BJP) ಎಂದರೆ ಭ್ರಷ್ಟ(Corrupt) ಜನತಾ ಪಾರ್ಟಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌(Saleem Ahmed) ಗಂಭೀರವಾಗಿ ಆರೋಪಿಸಿದ್ದಾರೆ. 

ತಾಲೂಕಿನ ಹೊಂಕಣ ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್‌(Congress) ಅಭ್ಯರ್ಥಿ ಶ್ರೀನಿವಾಸ ಮಾನೆ(Shrinivas Mane) ಪರವಾಗಿ ನಡೆದ ಪ್ರಚಾರ(Campaign) ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌(Covid 19) ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ(Government) ಜನರ ತೆರಿಗೆ ಹಣದಲ್ಲಿ ಲೂಟಿ ಮಾಡಿದೆ. ಆಡಳಿತ ಪಕ್ಷದ ಸಚಿವರುಗಳ ನಡುವೆಯೇ ಹಣ ದೋಚಲು ಕಿತ್ತಾಟ ನಡೆದಿದೆ. ರಾಜ್ಯ ಸರ್ಕಾರ ಕೊರೋನಾ ಉಪಕರಣಗಳ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ. ಪ್ರಜಾಪ್ರಭುತ್ವ(Democracy) ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ, ವಿಶ್ವಾಸವಿಲ್ಲ ಎಂದು ದೂರಿದರು.

Latest Videos

undefined

ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್‌(Petrol), ಡಿಸೇಲ್‌(Diesel), ಅಡುಗೆ ಅನಿಲ(LPG) ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನ ಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ. ಕೋವಿಡ್‌ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಅಮಾನವೀಯವಾಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವಿರುದ್ಧ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

'ಹಾನಗಲ್‌ನಲ್ಲಿ ಬಿಜೆಪಿ ಸೋಲುತ್ತೆ, ಬೊಮ್ಮಾಯಿ, ನಿರಾಣಿಗೆ ಗೊತ್ತಿದೆ'

ಕಾಂಗ್ರೆಸ್‌ ಪಕ್ಷಕ್ಕೆ ತ್ಯಾಗ, ಬಲಿದಾನವಿದೆ..

ಕಾಂಗ್ರೆಸ್‌ ಪಕ್ಷ ನಿನ್ನೆ ಇವತ್ತು ಹುಟ್ಟಿದ ಪಕ್ಷ ಅಲ್ಲ. ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ. ಮಾಜಿ ಪ್ರಧಾನಮಂತ್ರಿಗಳಾದ ದಿ. ಇಂದಿರಾ ಗಾಂಧಿಯವರು(Indira Gandhi) ಹಾಗೂ ರಾಜೀವ್‌ ಗಾಂಧಿಯವರು(Rajiv Gandhi) ಈ ದೇಶಕ್ಕಾಗಿ(India) ಪ್ರಾಣ ತ್ಯಾಗ ಮಾಡಿದರು. ರಾಜೀವ್‌ ಗಾಂಧಿಯವರ ಪ್ರತಿಬಿಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು(Rahul Gandhi) ಇಂದು ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಬಿಜೆಪಿಯವರು ಇಂದು ಓಟು ಕೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಸಚಿವರಾದ ಎಚ್‌.ಕೆ. ಪಾಟೀಲ, ಮನೋಹರ ತಹಶೀಲ್ದಾರ, ಕೃಷ್ಣಬೈರೇಗೌಡ, ಶಾಸಕ ಶರತ್‌ ಬಚ್ಚೇಗೌಡ, ಮಾಜಿ ಶಾಸಕ ಮಧು ಬಂಗಾರಪ್ಪ, ಮಾಜಿ ಶಾಸಕ ಸಂಪಂಗಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಭೀಮಣ್ಣ ನಾಯಕ್‌ ಇತರರು ಇದ್ದರು.
 

click me!