ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ, ವಿಧಾನಸಭೆಯ ಪ್ರತಿಪಕ್ಷದ ನಾಯಕನ ಹುದ್ದೆ ಸೇರಿದಂತೆ ಪ್ರಬಲ ಸಮುದಾಯಗಳಿಗೆ ಸಾಕಷ್ಟು ಸ್ಥಾನಮಾನ ಸಿಕ್ಕಿದೆ. ಹೀಗಾಗಿ, ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ಹಾಗೂ ರಾಜಕೀಯ ಪ್ರಾತಿನಿಧ್ಯ ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ಚರ್ಚೆ ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಡೆದಿದೆ.
ಬೆಂಗಳೂರು(ಮೇ.24): ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಲಭ್ಯವಾಗುವ ಮೂರು ಸ್ಥಾನಗಳಿಗೆ ಸಣ್ಣ ಪುಟ್ಟ ಸಮುದಾಯಗಳ ಮುಖಂಡರನ್ನು ಗುರುತಿಸಿ ಪರಿಗಣಿಸಬೇಕು ಎಂಬ ಅಭಿಪ್ರಾಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ, ವಿಧಾನಸಭೆಯ ಪ್ರತಿಪಕ್ಷದ ನಾಯಕನ ಹುದ್ದೆ ಸೇರಿದಂತೆ ಪ್ರಬಲ ಸಮುದಾಯಗಳಿಗೆ ಸಾಕಷ್ಟು ಸ್ಥಾನಮಾನ ಸಿಕ್ಕಿದೆ. ಹೀಗಾಗಿ, ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ಹಾಗೂ ರಾಜಕೀಯ ಪ್ರಾತಿನಿಧ್ಯ ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ಚರ್ಚೆ ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಆದರೆ, ಈ ಚರ್ಚೆ ಕೇವಲ ಚರ್ಚೆಗೆ ಮಾತ್ರ ಸೀಮಿತವಾಗಿ ಅಂತ್ಯಗೊಳ್ಳುತ್ತದೆಯೋ ಅಥವಾ ನಿಜವಾಗಿಯೂ ಕಾರ್ಯಗತವಾಗುತ್ತದೆಯೋ ಎಂಬುದಕ್ಕೆ ಕೆಲದಿನಗಳವರೆಗೆ ಕಾದು ನೋಡಬೇಕಿದೆ.
ಇನ್ನು ಮೇಲ್ಮನೆ ಕದನ ಭರಾಟೆ: 7 ಸ್ಥಾನಗಳಿಗೆ ಡಜನ್ ಆಕಾಂಕ್ಷಿಗಳು..!
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರುವುದರಿಂದ ಸಹಜವಾಗಿಯೇ ಹಿಂದುಳಿದ ವರ್ಗಗಳಿಗೆ ಆದ್ಯತೆ ನೀಡಲಾಗುತ್ತದೆ ಎಂಬ ಭಾವನೆಯಿದೆ. ಈ ನಡುವೆ ಒಕ್ಕಲಿಗ ಸಮುದಾಯದ ನಾಯಕತ್ವ ಹೊಂದಿರುವ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಹೀಗಿರುವಾಗ ಕಾರಣಾಂತರದಿಂದ ಬಿಜೆಪಿಗೆ ಬೆಂಬಲ ನೀಡುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವುದು ಸೂಕ್ತ ಎಂಬ ಪ್ರತಿಪಾದನೆಯನ್ನು ಕೆಲವು ನಾಯಕರು ಸಭೆಯಲ್ಲಿ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್‌ಗೆ ಈಶ್ವರಪ್ಪ ಬೆಂಬಲ
ಬಿಜೆಪಿಯನ್ನು ಬೆಂಬಲಿಸಿರುವ ಅನೇಕ ಸಮುದಾಯಗಳಿಗೆ ವಿಧಾನಸಭಾ ಅಥವಾ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲು ಸಾಧ್ಯವಾಗಿಲ್ಲ. ಇದಕ್ಕೆ ನಾನಾ ಕಾರಣಗಳಿರಬಹುದು. ಗೆಲ್ಲುವ ಮಾನದಂಡವೂ ಮುಖ್ಯವಾಗಿರಬಹುದು. ಆದರೆ, ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಅಂಥ ಸಮುದಾಯಗಳಿಗೆ ಅವಕಾಶ ಕಲ್ಪಿಸಲು ಯಾವುದೇ ಅಡ್ಡಿ ಎದುರಾಗುವುದಿಲ್ಲ. ಹೀಗೆ ಮಾಡುವುದರಿಂದ ಬಿಜೆಪಿ ಕೇವಲ ಪ್ರಬಲ ಸಮುದಾಯಗಳ ಪಕ್ಷ, ಬಿಜೆಪಿಯಲ್ಲಿ ಪ್ರಬಲ ಸಮುದಾಯಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ ಎಂಬ ಆರೋಪವನ್ನು ಹುಸಿಗೊಳಿಸಿದಂತಾಗುತ್ತದೆ. ಮೇಲಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎದಿರೇಟು ನೀಡಿದಂತಾಗುತ್ತದೆ. ಅಲ್ಲದೆ, ಮುಂಬರುವ ಇತರ ಚುನಾವಣೆಗಳಲ್ಲಿ ಪಕ್ಷಕ್ಕೆ ಅನುಕೂಲವೂ ಆಗುತ್ತದೆ ಎಂಬ ಅಭಿಪ್ರಾಯವನ್ನು ಹಲವರು ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಪ್ರಸ್ತಾಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಂಡೆದ್ದು ಸ್ಪರ್ಧಿಸಿದ ರಘುಪತಿ ಭಟ್‌ಗೆ ಬಿಜೆಪಿ ನೋಟಿಸ್
ಬೆಂಗಳೂರು: ವಿಧಾನಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಶಿಸ್ತು ಕ್ರಮದ ನೋಟಿಸ್ ನೀಡಿದ್ದು, ಎರಡು ದಿನದೊಳಗಾಗಿ ಉತ್ತರಿಸುವಂತೆ ತಾಕೀತು ಮಾಡಲಾಗಿದೆ.