ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನ ಖಚಿತ: ಸಚಿವ ಬಿ.ಸಿ.ಪಾಟೀಲ್

Published : Mar 20, 2023, 02:40 AM IST
ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನ ಖಚಿತ: ಸಚಿವ ಬಿ.ಸಿ.ಪಾಟೀಲ್

ಸಾರಾಂಶ

ಕೇಂದ್ರ ಹಾಗೂ ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರಗಳು ದಕ್ಷ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ 140ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೇ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರ (ಮಾ.20): ಕೇಂದ್ರ ಹಾಗೂ ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರಗಳು ದಕ್ಷ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ 140ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೇ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅಭಿವೃದ್ಧಿಯ ಕಾರ್ಡ್‌ನೊಂದಿಗೆ ಜನರ ಮುಂದೆ ಹೋಗುತ್ತೇವೆ. ಕಾಂಗ್ರೆಸ್‌ನವರಂತಹ ಗ್ಯಾರಂಟಿ ಕಾರ್ಡ್‌ ನಮ್ಮದಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದೇ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ ಎಂದರು.

ವಿಜಯ ಸಂಕಲ್ಪ ಯಾತ್ರೆ ಎಂದರೆ ವಿಜಯದ ಸಂಕೇತವಾಗಿದೆ. ಬಿಜೆಪಿಯಿಂದ ರಾಜ್ಯಾದ್ಯಂತ ಈ ಯಾತ್ರೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾವೇರಿ ಜಿಲ್ಲೆಗೆ ಫಸಲ್‌ ಬಿಮಾ ಯೋಜನೆಯಲ್ಲಿ 435 ಕೋಟಿ ನೀಡಿದೆ. ಇದು ಇತಿಹಾಸದಲ್ಲಿ ಪ್ರಪ್ರಥಮವಾಗಿದೆ. ಕಳೆದ ಮುಂಗಾರಿನ 432 ಕೋಟಿ ಬಿಡುಗಡೆಯಾಗಲಿದೆ. ಅದರಲ್ಲಿ ಹಿರೇಕೆರೂರ ತಾಲೂಕಿನದ್ದು 89 ಕೋಟಿ ಇದೆ. ಈಗಾಗಲೇ 14 ಕೋಟಿ ಮಧ್ಯಂತರ ಪರಿಹಾರ ಬಂದಿದ್ದು, ತಾಲೂಕಿಗೆ 103 ಕೋಟಿ ಬೆಳೆ ವಿಮೆ ಬಂದಿದೆ. ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿಗೆ 80 ಕೋಟಿ ಬೆಳೆ ಪರಿಹಾರ ಹಾಗೂ 70 ಕೋಟಿ ಮನೆಗಳ ಪರಿಹಾರ ಬಂದಿದೆ ಎಂದರು.

ಸೊರ​ಬ​ದಲ್ಲಿ ಕುಮಾರ್‌ ಬಂಗಾರಪ್ಪ ಗೆಲ್ಲಿಸಿ: ಬಿ.ಎಸ್‌.ಯಡಿ​ಯೂ​ರ​ಪ್ಪ

ರಾಜ್ಯದ ಬಿಜೆಪಿ ಸರ್ಕಾರ ಹಿರೇಕೆರೂರ ರಟ್ಟೀಹಳ್ಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಿದೆ. ಕುಡಿಯವ ನೀರು ಪೊರೈಸುವ ಕಾರ್ಯವಾಗಿದೆ. ರಾಜ್ಯಾದ್ಯಂತ ಕೃಷಿ ಇಲಾಖೆಯಿಂದ ರೈತ ಶಕ್ತಿ ಯೋಜನೆಯಿಂದ ಎಕರೆಗೆ 250ರಂತೆ ಐದು ಎಕರೆವರೆಗೆ 1250 ಸಹಾಯಧನ ಬಿಡುಗಡೆ ಮಾಡಲಾಗಿದೆ ಎಂದರು. ರೈತ ವಿದ್ಯಾನಿಧಿ ಯೋಜನೆಯಲ್ಲಿ ರೈತರ ಮಕ್ಕಳಿಗೆ 680 ಕೋಟಿ, ರೈತ ಕಾರ್ಮಿಕರ ಮಕ್ಕಳಿಗೆ 14 ಕೋಟಿ ಬಿಡುಗಡೆಯಾಗಿದೆ. ಈ ಯೋಜನೆಗಳು ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಭರವಸೆಗಳಲ್ಲ, ಪ್ರಣಾಳಿಕೆಯಲ್ಲಿ ಹೇಳದೇ ಇದ್ದರೂ ರೈತ ಶಕ್ತಿ, ರೈತ ವಿದ್ಯಾನಿಧಿ, ರೈತರ ಮಕ್ಕಳು ಕೃಷಿ ಪದವಿ ವ್ಯಾಸಂಗ ಮಾಡಲು ಮೀಸಲಾತಿ ಹೆಚ್ಚಳ ಮಾಡುವ ಮೂಲಕ ರೈತ ಪರವಾಗಿ ಕೆಲಸ ಮಾಡಿದೆ ಎಂದರು.

ಕಾಂಗ್ರೆಸ್‌ ನಾಯಕರಿಗೆ ದೇಶ ಮೊದಲು ಎಂಬ ತತ್ವದಲ್ಲಿ ನಂಬಿಕೆ ಇಲ್ಲ: ಸಿ.ಟಿ.ರವಿ

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನವ ಭಾರತ ನಿರ್ಮಾಣಕ್ಕೆ, ನವ ಕರ್ನಾಟಕ, ನವ ಹಾವೇರಿ ಮತ್ತು ನವ ಹಿರೇಕೆರೂರ ನಿರ್ಮಾಣಕ್ಕೆ ಸಂಕಲ್ಪ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈ ಯಾತ್ರೆ ಆರಂಭವಾಗಿದೆ ಎಂದರು. ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕ ಅರುಣ ಶಹಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜು ಕಲಕೋಟಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ರಾಜ್ಯ ಸಾಂಬಾರು ಮಂಡಳಿ ಅಧ್ಯಕ್ಷ ಎನ್‌.ಎಂ. ಈಟೇರ್‌, ಮಂಡಲ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿಮುಖಂಡರಾದ ಎಸ್‌.ಎಸ್‌. ಪಾಟೀಲ, ದೊಡ್ಡಗೌಡ ಪಾಟೀಲ, ಲಿಂಗರಾಜ ಚಪ್ಪರದಳ್ಳಿ, ಹಾವೇರಣ್ಣನವರ, ದೇವರಾಜ ನಾಗಣ್ಣನವರ ಸೇರಿದಂತೆ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ