ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ದೇವರಹಿಪ್ಪರಗಿ (ಮಾ.12): ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ನಡೆದ ಬೃಹತ್ ರೋಡ್ ಶೋ ವೇಳೆ ವಿವಿಧ ಕಲಾ ತಂಡಗಳ ಮೆರವಣಿಗೆ ಮೂಲಕ ಬಸ್ ನಿಲ್ದಾಣದ ಎದುರುಗಡೆ ಯಾತ್ರೆ ಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಪರ್ವವನ್ನೆ ಹರಿಸಿದ್ದು ಅದರ ಆಧಾರದ ಮೇಲೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು 140 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ,
ಸರಕಾರವು ರೈತರ ಖಾತೆಗೆ 10,000 ರೂ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 54 ಲಕ್ಷ ರೈತರ ಖಾತೆಗೆ ಹಣ ಜಮಾ ಮಾಡಲಾಗಿದೆ. 5 ಲಕ್ಷ ರೂಪಾಯಿಯಂತೆ ರೈತರಿಗೆ ಬಡ್ಡಿ ರಹಿತ ರೈತರಿಗೆ ಸಾಲ ಕೊಟ್ಟಿದ್ದೇವೆ.ಭೂ ರೈತ ಕೂಲಿಕಾರ್ಮಿಕರಿಗೆ ಮಾಸಿಕ ಸಾವಿರ ರೂಪಾಯಿ ಮುಂದಿನ ದಿನಗಳಲ್ಲಿ ಕೊಡಲಾಗುವುದು. ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಕೇಂದ್ರದ ಮೋದಿ ಸರ್ಕಾರ ದೇಶಾದ್ಯಂತ ಕೊರೋನಾ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಉಚಿತವಾಗಿ 140 ಕೋಟಿ ಜನರಿಗೆ ವ್ಯಾಕ್ಸಿನ್‌ಗಳನ್ನು ಹಾಕಿಸಲಾಗಿದೆ. ಬ್ರಷ್ಟಾಚಾರ ರಹಿತ ಸುಮಾರು 9 ವರ್ಷಗಳ ಸುಭದ್ರ ಆಡಳಿತ ನೀಡಿದ್ದಾರೆ. ಬರುವ ಚುನಾವಣೆಯಲ್ಲಿ ಸರಳ ಸಜ್ಜನಿಕೆಯ ರಾಜಕಾರಣಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರ ಬಿಜೆಪಿಯ ಭದ್ರಕೋಟೆ ನಿರ್ಮಾಣ ಮಾಡಲು ಕಾರ್ಯಕರ್ತರು ಕಂಕಣ ಬದ್ಧರಾಗಬೇಕು ಎಂದು ಹೇಳಿದರು.
ಮಾಗಡಿಗೆ ಕುಮಾರಸ್ವಾಮಿ ಕೊಡುಗೆ ಏನು: ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ
ಸಚಿವ ಮುರುಗೇಶ ನಿರಾಣಿ ಮಾತನಾಡಿ ಡಬಲ್ ಇಂಜಿನ್ ಸರ್ಕಾರದಿಂದ ದೇಶದಲ್ಲಿ ಆರ್ಥಿಕತೆ, ಕೈಗಾರಿಕೆಗಳ ಸ್ಥಾಪನೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟುಬದಲಾವಣೆ ಆಗಿದೆ, ಬರುವಂತ ದಿನಗಳಲ್ಲಿ ಕ್ಷೇತ್ರದ ಹೂವಿನ ಹಿಪ್ಪರಗಿ ಪಟ್ಟಣದಲ್ಲಿ ಕೈಗಾರಿಕಾ ವಲಯ ಸ್ಥಾಪನೆ ಮಾಡಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಅವರು ಸುಮಾರು 2ಸಾ ಕೋಟಿ ರೂ ಅನುದಾನ ತಂದು ಮೂಲಭೂತ ಸೌಕರ್ಯ, ರಸ್ತೆ, ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತಿದ್ದಾರೆ. ಬರುವಂತ ದಿನಗಳಲ್ಲಿ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಎಂದು ಹೇಳಿದರು.
ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಪರ ಯೋಜನೆಗಳು, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಜನಪರ ಯೋಜನೆಗಳೊಂದಿಗೆ 2023ರಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ, ರಾಜ್ಯದಲ್ಲಿ ಕಾಂಗ್ರೆಸ್ ಒಳ ಜಗಳದಲ್ಲಿ ಮುಳುಗಿದೆ ಎಂದು ಹೇಳಿದರು. ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ,ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ ಅನುದಾನ ತರಲಾಗಿದೆ. ಶೇ. 80 ಪ್ರತಿಶತ ನೀರಾವರಿಯಾಗಲಿದೆ. ನೀವು ನನಗೆ ನೀಡಿದ ಅಧಿಕಾರದಿಂದ ಪ್ರಾಮಾಣಿಕತೆಯಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೆನೆ ನನಗೆ ಮತ್ತೆ ಆಶೀರ್ವದಿಸಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಪಾಟೀಲ ಕುಚೂಬಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದಕ್ಕೂ ಮುಂಚೆ ನಡೆದ ಮೆರವಣಿಗೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳನ್ನು ಕೇಸರಿ ಬಾವುಟಗಳ ಮೂಲಕ ಅಲಂಕಾರಗೊಳಿಸಲಾಗಿತ್ತು. ವಿಜಯ ಸಂಕಲ್ಪ ಯಾತ್ರೆಯ ಮೆರವಣಿಗೆ ಮೊಹರೆ ವೃತ್ತದ ಮೂಲಕ ತಾಳಿಕೋಟಿ ರಸ್ತೆ ಮಾರ್ಗವಾಗಿ ವಿವಿಧ ಕಲಾ ತಂಡಗಳ ಮೆರವಣಿಗೆ,ಜನ ಸಮೂಹ ಘೋಷಣೆ ಹಾಕುತ್ತ ನೃತ್ಯ ಮಾಡುವ ಮೂಲಕ ಯಾತ್ರೆಗೆ ಮೆರಗು ನೀಡಿತು.
ಬಿಜೆಪಿಗೆ ಅಧಿಕಾರ ಖಚಿತ, ಸಿದ್ದರಾಮಯ್ಯ ಹರಕೆಯ ಕುರಿ: ಸಚಿವ ಶ್ರೀರಾಮುಲು
ಇದೇ ಸಂದರ್ಭದಲ್ಲಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕ ಅಧ್ಯಕ್ಷೆ ಗೀತಾ ವಿವೇಕಾನಂದ,ವಿವೇಕಾನಂದ ಡಬ್ಬಿ, ಮಂಡಲ ಅಧ್ಯಕ್ಷರಾದ ಭೀಮನಗೌಡ ಸಿದರಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರಭುಗೌಡ ಬಿರಾದಾರ ಆಸ್ಕಿ, ಜಿಲ್ಲಾ ರೈತ ಮೋರ್ಚಾ ಪ್ರಕಾ ಸಿದ್ದು ಬುಳ್ಳಾ, ಜಿಲ್ಲಾ ಕಾರ್ಯದರ್ಶಿ ರಮೇಶ ಮಸಿಬಿನಾಳ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶಿಲ್ಪಾ ಕುದಗೂಂಡ, ಪ್ರಕಾ ಗಾಯತ್ರಿ ದೇವೂರ, ಮಂಡಲ ಪ್ರಕಾ ಭೀಮನಗೌಡ ಲಚ್ಯಾಣ, ಒಬಿಸಿ ಮಂಡಲ ಅಧ್ಯಕ್ಷ ಗುರುನಾಥ ಮುರುಡಿ, ಮುಖಂಡರಾದ ಸುರೇಶಗೌಡ ಪಾಟೀಲ ಸಾಸನೂರ ಸೇರಿದಂತೆ ಮಂಡಲದ ಪದಾಧಿಕಾರಿಗಳು, ವಿವಿಧ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.