ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲುವುದು ಖಚಿತ: ಕೇಂದ್ರ ಸಚಿವ ಭಗವಂತ್ ಖೂಬಾ

By Kannadaprabha News  |  First Published Nov 25, 2023, 11:30 PM IST

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ಸಿಗಲಿದೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ವಿಶ್ವಾಸ ವ್ಯಕ್ತಪಡಿಸಿದರು. 


ಚಿತ್ರದುರ್ಗ (ನ.25): ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ ಸಿಗಲಿದೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಭಗವಂತ್‍ ಖೂಬ ಮಾರ್ಗ ಮಧ್ಯೆ ನಗರದ ಹೊರವಲಯ ಸೀಬಾರದ ಸಮೀಪವಿರುವ ಮೇದಾರ ಕೇತೇಶ್ವರ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಜನತೆಗೆ 5 ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆ ದೇಶದ ಬೇರೆ ಬೇರೆ ರಾಜ್ಯಗಳ ಜನತೆಗೂ ಗೊತ್ತಾಗಿದೆ. 

ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲಾಗಲಿದೆ. ಸುಳ್ಳು ಗ್ಯಾರೆಂಟಿಗಳಿಂದ ಕರ್ನಾಟಕದ ಜನ ನಿರಾಸೆಯಾಗಿದ್ದಾರೆ. ಸತ್ಯಾಸತ್ಯತೆ ಬೇರೆ ರಾಜ್ಯಗಳಿಗೆ ಗೊತ್ತಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ ಎಂದರು. ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೆಣಗುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿರವರ ಪಾರದರ್ಶಕ ಆಡಳಿತ ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ವರದಾನವಾಗಲಿದೆ ಎಂದರು. ಬಸವಪ್ರಭು ಮೇದಾರ ಕೇತೇಶ್ವರಸ್ವಾಮೀಜಿ ಇದ್ದರು.

Latest Videos

undefined

ಡಿಕೆಶಿ ಕೇಸ್‌: ಸಚಿವ ಸಂಪುಟದ ತೀರ್ಮಾನ ಕಾನೂನಾತ್ಮಕವಾಗಿದೆ: ಸಚಿವ ಮಹದೇವಪ್ಪ

ಕ್ಷಯ ರೋಗಿಯನ್ನು ಸರ್ಕಾರ ದತ್ತುಪಡೆದು ಪೋಷಿಸುತ್ತಿದೆ: ಯರೋಗಕ್ಕೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದ್ದು, ಪ್ರತಿ ರೋಗಿಯನ್ನು ದತ್ತು ಪಡೆದು ಆರು ತಿಂಗಳ ಕಾಲ ಪೋಷಿಸುವ ಯೋಜನೆ ಜಾರಿಗೊಳಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಹೇಳಿದರು. ನಗರದಲ್ಲಿ ಜೆಎಸ್‌ಎಸ್‌ ವೈದ್ಯಕೀಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಕ್ಷಯರೋಗ ಸಮ್ಮೇಳನ- 2023 ಉದ್ಘಾಟಿಸಿ ಅವರು ಮಾತನಾಡಿದರು. ಕ್ಷಯವು ಬಡವರನ್ನು ಕಾಡುವ ಕಾಯಿಲೆ. ಅಪೌಷ್ಟಿಕತೆ ಇದಕ್ಕೆ ಪ್ರಮುಖ ಕಾರಣ. ಇತ್ತೀಚಿನ ದಿನಗಳಲ್ಲಿ ಸರ್ಕಾರ ಉಚಿತವಾಗಿ ಚಿಕಿತ್ಸೆ ನೀಡುತ್ತಿದೆ. 

ಪ್ರತಿ ರೋಗಿಯನ್ನು ದತ್ತು ಪಡೆದು ಆರು ತಿಂಗಳ ಕಾಲ ಪೋಷಿಸುವ ಯೋಜನೆಗೆ ಕೇಂದ್ರ ಚಾಲನೆ ನೀಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು. ಕಳೆದ ಆರು ತಿಂಗಳ ಹಿಂದೆ ಉದ್ಯಮಿಗಳು, ಸಂಶೋಧಕರು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಒಂದೇ ವೇದಿಕೆಗೆ ತಂದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಎನ್.ಡಿ.ಎ ಸರ್ಕಾರದಲ್ಲಿ ಜನರಿಕ್ ಔಷಧಕ್ಕೆ ಆದ್ಯತೆ ನೀಡಲಾಗಿದೆ. 1856 ವಿಧದ ಔಷಧ ಲಭ್ಯ ಇದ್ದು, ಶೇ. 50 ರಿಂದ 90 ಕಡಿಮೆ ಬೆಲೆ ಇದೆ. ಸರ್ಜಿಕಲ್ ಸಾಮಗ್ರಿಗಳೂ ಕಡಿಮೆ ದರದಲ್ಲಿ ಸಿಗುತ್ತಿವೆ. ಇವುಗಳ ಖರೀದಿಗೆ ವೈದ್ಯರು, ರೋಗಿಗಳು ಆಸಕ್ತಿ ತೋರುತ್ತಿದ್ದಾರೆ ಎಂದು ಅವರು ಹೇಳಿದರು.

ಕೋವಿಡ್ ನಂತರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಆಗುತ್ತಿದೆ. ಔಷಧ ಉತ್ಪಾದನೆಗೆ ಕಚ್ಚಾ ಸಾಮಗ್ರಿ ಕೊರತೆ ಉಂಟಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಔಷಧ ಉತ್ಪಾದನೆಗೆ ಆದ್ಯತೆ ನೀಡಿದ್ದು, ದೇಶಗಳ ನಡುವೆ ಉತ್ಪಾದನೆ ಮತ್ತು ತಂತ್ರಜ್ಞಾನ ಮಾಧ್ಯಮದ ಹಂಚಿಕೆ ಆಗುತ್ತಿದೆ ಎಂದರು. ಪ್ರತಿ ಇಲಾಖೆ ಪ್ರತಿ ವರ್ಷ ಚಿಂತನಾ ಶಿಬಿರ ಆಯೋಜಿಸುತ್ತಿದೆ. ಇದರಿಂದ ಉತ್ತಮ ಫಲಿತಾಂಶ ದೊರಕಲು ಸಾಧ್ಯವಾಗಿದೆ. ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ಕಾರ್ಯಾಗಾರ ಬೆಳಕು ಚೆಲ್ಲಲಿ. ಹೆಚ್ಚು ಚರ್ಚೆ ನಡೆಯಲಿ ಎಂದು ಅವರು ಆಶಿಸಿದರು.

ಅಂಬರೀಶ್ ಗುರಿ, ಉದ್ದೇಶಗಳನ್ನು ಮುಂದುವರೆಸಿಕೊಂಡು ಹೋಗಲು ಸಂಕಲ್ಪ: ಸುಮಲತಾ

ಪಾಂಡಿಚೆರಿಯ ವಿದ್ಯುತ್‌ಮತ್ತು ಶಿಕ್ಷಣ ಸಚಿವ ಎ. ನಮಶಿವಾಯಂ ಮಾತನಾಡಿ, ಕೋವಿಡ್ ಕಾರಣಕ್ಕೆ ಇಡೀ ಮನುಕುಲ ತತ್ತರಿಸಿದ್ದು, ಆ ನಂತರದಲ್ಲಿ ಸಂಶೋಧನೆಗೆ ಹೆಚ್ಚು ಆದ್ಯತೆ ದೊರೆತಿದೆ. ಅಪೌಷ್ಟಿಕತೆ ಮೊದಲಾದ ಕಾರಣಕ್ಕೆ ಕೆಳವರ್ಗದ ಸಮುದಾಯಗಳಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆಯ ಅಗತ್ಯವಿದೆ. ಜನರಲ್ಲಿ ಈಚೆಗೆ ಆರೋಗ್ಯ ಕಾಳಜಿ ಕಡಿಮೆ ಆಗುತ್ತಿದೆ. ಯೋಗ ಮುಂತಾದ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

click me!