ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಹೈಕಮಾಂಡ್

By Suvarna News  |  First Published Feb 12, 2021, 2:23 PM IST

ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಅವರಿಗೆ ಕೇಂದ್ರ ಬಿಜೆಪಿ ಬಿಗ್ ಶಾಕ್ ಕೊಟ್ಟಿದೆ.


ಬೆಂಗಳೂರು, (ಫೆ.12): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರ ವಿರುದ್ಧ ಅಬ್ಬರಿಸಿ ಬೊಬ್ಬರಿತ್ತಿರುವ ವಿಜಯಪುರ ಬಿಜೆಪಿ ಶಾಸಕ ಸಚಿವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೊನೆಗೂ ನೋಟಿಸ್ ಜಾರಿ ಮಾಡಲಾಗಿದೆ.

"

Tap to resize

Latest Videos

ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸಿ ನೀಡಿದ್ದು, ಒಂದು ವಾರದೊಳಗೆ ಉತ್ತರಿಸುವಂತೆ ಖಡಕ್ ಸೂಚನೆ ಸಹ ಕೊಟ್ಟಿದೆ. 

ಯಾವುದಕ್ಕೂ ಡೋಂಟ್ ಕೇರ್: ಸಿಎಂ ಸಭೆಯಲ್ಲೂ ಸಿಡಿದೆದ್ದ ಯತ್ನಾಳ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗುತ್ತಾರೆ ಎಂಬಿತ್ಯಾದಿ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.

ಸಚಿವ ಸಂಪುಟ ವಿಸ್ತರಣೆಯ ವೇಳೆ ಅಸಮಾಧಾನಗೊಂಡಿದ್ದ ಯತ್ನಾಳ್ 'ಸಿಡಿ' ಬಾಂಬ್ ಸಿಡಿಸಿದ್ದರು. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು.

ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿದ್ದರು. 

click me!