
ಹಾವೇರಿ (ನ.02): 2023ರ ವಿಧಾನಸಭೆ ಚುನಾವಣೆ ಅಖಾಡ ರಂಗೇರುತ್ತಿದೆ. ಅದರಲ್ಲೂ ಜಿದ್ದಿಗೆ ಬಿದ್ದಂತೆ ಚುನಾವಣೆ ತಯಾರಿ ನಡೆಸುತ್ತಿರುವ ಬಿಜೆಪಿ - ಕಾಂಗ್ರೆಸ್ ನಾಯಕರು ಪರಸ್ಪರ ಸೆಡ್ಡು ಹೊಡೆಯುತ್ತಲೇ ಇದ್ದಾರೆ. ಜನಸಂಕಲ್ಪ ಯಾತ್ರೆ ನಡೆಸಿ ಜನರ ಬಳಿ ತಮ್ಮ ಪಕ್ಷದ, ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡುವಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೂ ಭರ್ಜರಿ ಜನ ಸಂಕಲ್ಪ ಯಾತ್ರೆ ಮಾಡುವ ಮೂಲಕ ಜನರ ಮನೆ ಮನ ತಲುಪಲು ಕಸರತ್ತು ಆರಂಭವಾಗಿದೆ.
ಹಾವೇರಿ ಜಿಲ್ಲೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ನೆವೆಂಬರ್ 8ರಂದು ಬೃಹತ್ ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಸುಮಾರು 25000ಕ್ಕೂ ಹೆಚ್ಚು ಜನರನ್ನು ಸಂಘಟಿಸಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೋಡಿ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಹಾನಗಲ್ ಉಪ ಚುನಾವಣೆ ಗೆದ್ದು ಜಿಲ್ಲೆಯಲ್ಲಿ ಮತ್ತೆ ತೊಡೆ ತಟ್ಟಿದ್ದ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ನಿರ್ಧರಿಸಲಾಗಿದೆ. ಕಾರ್ಯಕರ್ತರಿಗೆ ಹೊಸ ಹುರುಪು ತುಂಬುವ ಸಂಬಂಧ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಬಿ.ಎಸ್.ವೈ ಘರ್ಜನೆ ಫಿಕ್ಸ್ ಆಗಿದೆ.
ಹಾನಗಲ್ ಕ್ಷೇತ್ರದವರು ಎಂದರೆ ಸರ್ಕಾರಕ್ಕೆ ಮಲತಾಯಿ ಮಕ್ಕಳು ಇದ್ದ ಹಾಗೆ: ಶಾಸಕ ಶ್ರೀನಿವಾಸ್ ಮಾನೆ
ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಿಂದ ಉತ್ತಮ ಆಡಳಿತ ನಡೆಯುತ್ತಿದೆ. ಜನತೆ ಬಿಜೆಪಿಯತ್ತ ಹೆಚ್ಚಿನ ಒಲವು ತೋರಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ವಿಜಯ ಸಾಧಿಸಲಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ್ ತಿಳಿಸಿದರು. ಔರಾದ್ ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಅ.22ರಂದು ಜರುಗಿದ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿಯು ತತ್ವ ಸಿದ್ಧಾಂತಗಳ ಆಧಾರದ ಮೇಲೆ ನಡೆದು ಬಂದ ಪಕ್ಷವಾಗಿದೆ. ಪಕ್ಷ ನನಗೆ ತಾಯಿ ಇದ್ದಂತೆ, ಕಾರ್ಯಕರ್ತರು ಕುಟುಂಬದ ಸದಸ್ಯರಿದ್ದಂತೆ, ಪಕ್ಷದ ಏಳಿಗೆಗೆ ದುಡಿಯುವ ಕಾರ್ಯಕರ್ತರೇ ಪಕ್ಷದ ಜೀವಾಳವಾಗಿದ್ದಾರೆ ಎಂದು ಸಚಿವರು ಹೇಳಿದರು. ಕೇಂದ್ರದಲ್ಲಿ ಪ್ರಧಾನಿ ಮೋದಿ ಮತ್ತು ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರದ ಆಡಳಿತದಿಂದ ಸಾಕಷ್ಟುಪ್ರಗತಿ ಕೆಲಸಗಳಾಗುತ್ತಿವೆ. ಕಳಂಕ ರಹಿತವಾಗಿ ಆಡಳಿತ ನಡೆಯುತ್ತಿದೆ. ಔರಾದ್ ಒಳಗೊಂಡು ನಾಡಿನಲ್ಲಿ ಪುನಃ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾವೇರಿ ಮೆಡಿಕಲ್ ಕಾಲೇಜು ಕಟ್ಟಡದಲ್ಲೇ ತರಗತಿ ಆರಂಭಕ್ಕೆ ಸಿದ್ಧತೆ
ಕಾರ್ಯಕರ್ತರಿಗೆ ಧನ್ಯವಾದ: ಔರಾದ(ಬಿ) ಪಟ್ಟಣದಲ್ಲಿ ಜರುಗಿದ ಜನಸಂಕಲ್ಪ ಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿ ಜನರನ್ನು ಸೇರಿಸಿ ಕಾರ್ಯಕ್ರಮ ಅಭೂತಪೂರ್ವ ಯಶಸ್ಸುಗೊಳಿಸಿದ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಸಚಿವರು ಧನ್ಯವಾದ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.