ನಾಳೆ ಕುಷ್ಟಗಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ

By Kannadaprabha News  |  First Published Oct 11, 2022, 2:27 PM IST

ಜನಸಂಕಲ್ಪ ಯಾತ್ರೆ’ಯ ಅಂಗವಾಗಿ ಅ. 12ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ತಿಳಿಸಿದರು.


ಕುಷ್ಟಗಿ (ಅ.11) : ‘ಜನಸಂಕಲ್ಪ ಯಾತ್ರೆ’ಯ ಅಂಗವಾಗಿ ಅ. 12ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ‘ಜನಸಂಕಲ್ಪ ಯಾತ್ರೆ’ಯನ್ನು ಕೈಗೊಂಡಿದ್ದು, ವೇದಿಕೆ ಕಾರ್ಯಕ್ರಮವನ್ನು ಕುಷ್ಟಗಿಯ ತಾವರಗೇರಾ ರಸ್ತೆಯ ಹಾಲಿನ ಡೈರಿಯ ಹತ್ತಿರವಿರುವ ಖಾಲಿ ಜಾಗದಲ್ಲಿ ಜರುಗಲಿದೆ.

SC-ST Reservation: ಸಿದ್ದರಾಮಯ್ಯಗೆ ಮೀಸಲಾತಿ ಕೊಡೋ ಯೋಗ್ಯತೆ ಇರಲಿಲ್ಲ: ಕಟೀಲ್‌

Tap to resize

Latest Videos

undefined

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವರಾದ ಶ್ರೀರಾಮಲು, ನಾರಾಯಣಸ್ವಾಮಿ, ಆನಂದ ಸಿಂಗ್‌, ಹಾಲಪ್ಪ ಆಚಾರ, ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರು ಸೇರಿ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಭಾಗವಹಿಸಲಿದ್ದಾರೆ ಎಂದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ಮುಂದಿನ 2023ನೇ ವಿಧಾನಸಭೆಯ ಚುನಾವಣೆಯ ದೂರದೃಷ್ಟಿಕೋನವನ್ನು ಇಟ್ಟುಕೊಂಡು ರಾಜ್ಯದ ಸುಮಾರು ಐವತ್ತು ಕಡೆ ‘ಜನಸಂಕಲ್ಪ ಯಾತ್ರೆ’ಯನ್ನು ನಡೆಸಲಾಗುತ್ತಿದೆ. ಯಾತ್ರೆಯ ಸಲುವಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಒಂದು ತಂಡದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ, 2ನೇ ತಂಡ ಬಿಜೆಪಿ ರಾಜ್ಯಾಧ್ಯಕ್ಷರು ನಳಿನಕುಮಾರ ಕಟೀಲ್‌, 3ನೇ ತಂಡ ಬಿಜೆಪಿ ಉಸ್ತುವಾರಿ ಆನಂದ ಸಿಂಗ್‌ ಅವರ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗಾಗಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸಲಾಗುತ್ತದೆ ಎಂದರು.

ಕಾರ್ಯಕ್ರಮಕ್ಕೂ ಮೊದಲು ಹೊಸದಾಗಿ ಕುಷ್ಟಗಿ ಪಟ್ಟಣದ ಶಾಖಾಪುರ ರಸ್ತೆಯಲ್ಲಿ ಹೊಸದಾಗಿ ತೆರೆಯಲಾಗಿರುವ ಪಕ್ಷದ ಕಚೇರಿಯ ಉದ್ಘಾಟನೆ ಮತ್ತು ಕಾರ್ಯಕ್ರಮ ನಡೆಯುವ ವೇದಿಕೆ ಮಾರ್ಗದಲ್ಲಿ ಬರುವ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿ ಹಾಗೂ ಅಂಬೇಡ್ಕರ ವೃತ್ತಕ್ಕೆ ವಿಶೇಷವಾಗಿ ಪಕ್ಷದ ನಾಯಕರು ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕ್ರಮ ನಡೆಯಲಿದೆ.

ಸನ್ಮಾನ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಹೆಚ್ಚಳಗೊಳಿಸಿ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡದವರಿಗೆ ಶೈಕ್ಷಣಿಕವಾಗಿ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಮಾಡಿಕೊಟ್ಟಿದ್ದಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

 

Jana Sankalpa Yatra: ಇಂದಿನಿಂದ ಬಿಜೆಪಿ ಜೋಡೆತ್ತು ಜನ ಸಂಕಲ್ಪ ಯಾತ್ರೆ ಪ್ರಾರಂಭ

ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ, ಪುರಸಭೆ ಅಧ್ಯಕ್ಷ ಗಂಗಾಧರಯ್ಯ ಹಿರೇಮಠ, ಜಿಪಂ ಮಾಜಿ ಸದಸ್ಯ ಕೆ. ಮಹೇಶ್‌, ಬಿಜೆಪಿ ತಾಲೂಕು ಅಧ್ಯಕ್ಷ ಬಸವರಾಜ್‌ ಹಳ್ಳೂರು, ನಾಗರಾಜ ಮೇಲಿನಮನಿ, ಚಂದ್ರು ವಡಗೇರಿ ಸೇರಿದಂತೆ ಅನೇಕರು ಇದ್ದರು.

click me!