
ಬಳ್ಳಾರಿ (ಅ. 14): ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ (INC) ಸರ್ಕಾರ ಶೇ. 85 ಪರ್ಸೆಂಟ್ ಕಮಿಷನ್ ಹೊಡೀತಿತ್ತು. ಈ ಆರೋಪ ಮಾಡಿರುವುದು ನಾನಲ್ಲ. ಅವರದ್ದೇ ಪಕ್ಷದ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ (Rajiv Gandhi) ಅವರೇ ಸೂಚ್ಯವಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಆರೋಪಿಸಿದರು. ಜಿಲ್ಲೆಯ ಸಿರುಗುಪ್ಪ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಜರುಗಿದ ಜನಸಂಕಲ್ಪ ಯಾತ್ರೆಯಲ್ಲಿ (BJP Janasankalpa Yatre)ಪಾಲ್ಗೊಂಡು ಮುಖ್ಯಮಂತ್ರಿ ಮಾತನಾಡಿದರು.
ದೆಹಲಿಯಿಂದ ₹100 ಅನುದಾನ ಕಳುಹಿಸಿದರೆ ಅದು ಸಂತ್ರಸ್ತರಿಗೆ ಮುಟ್ಟುವುದರೊಳಗೆ .15 ಆಗಿರುತ್ತದೆ’ ಎಂದು ರಾಜೀವ್ ಗಾಂಧಿ ಅವರು ಹೇಳುತ್ತಿದ್ದರು. ಅಂದರೆ, ಇದರರ್ಥ ದೇಶವನ್ನು ಹೆಚ್ಚು ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್‌ನವರು ಶೇ. 85 ಪರ್ಸೆಂಟ್ ಕಮೀಷನ್ ಜೇಬಿಗೆ ಇಳಿಸಿಕೊಂಡಿದ್ದಾರೆ. ಈ ಸತ್ಯವನ್ನು ಅವರ ಪಕ್ಷದ ಮಾಜಿ ಪ್ರಧಾನಿಗಳೇ ಹೇಳಿದ್ದಾರೆ. ಆದರೆ, ನಮ್ಮ ವಿರುದ್ಧ ವಿನಾಕಾರಣ ಭ್ರಷ್ಟಾಚಾರ ಆರೋಪ ಮಾಡುವ ಕಾಂಗ್ರೆಸ್‌ಗೆ ಯಾವ ನೈತಿಕತೆ ಇದೆ ಎಂದು ಸಿಎಂ ಪ್ರಶ್ನಿಸಿದರು.
ಕಾಂಗ್ರೆಸ್ ಈ ಹಿಂದೆ ಎಂದೂ ಜನಪರವಾಗಿ ಕೆಲಸ ಮಾಡಲಿಲ್ಲ. ಭ್ರಷ್ಟಾಚಾರದಲ್ಲಿಯೇ ತೊಡಗಿಸಿಕೊಂಡಿತ್ತು. ಕಾಂಗ್ರೆಸ್‌ನ ತಪ್ಪುನೀತಿಗಳನ್ನು ಪಟ್ಟಿಮಾಡುತ್ತಾ ಹೋದರೆ ಹೇಳಲು ಸಾಕಾಗದಷ್ಟಿದೆ. ಭೂಮಿ ಮೇಲೆ, ಆಕಾಶದ ಮೇಲೆ, ಪಾತಾಳದಲ್ಲೂ ಅವರು ಭ್ರಷ್ಟಾಚಾರ ಮಾಡಿದ್ದಾರೆ. 2ಜಿ ಸ್ಪೆಕ್ಟ್ರಂ, ಕಾಮನ್‌ವೆಲ್ತ್, ಕಲ್ಲಿದ್ದಲು ಹಗರಣಗಳು ಸೇರಿದಂತೆ ನಾನಾ ಹಗರಣಗಳನ್ನು ಮಾಡಿದ ಅಪಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ರಾಜ್ಯದ ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಎಸ್ಸಿ-ಎಸ್ಟಿಹಾಸ್ಟೆಲ್‌ಗಳಲ್ಲಿ ದಿಂಬು ಹಾಸಿಗೆಯಲ್ಲಿ ಸಹ ಭ್ರಷ್ಟಾಚಾರ ಮಾಡಿದರು.
Jana Sankalpa Yatra: ಕರ್ನಾಟಕ ಕಾಂಗ್ರೆಸ್‌ಗೆ ಎಟಿಎಂ ಆಗಿತ್ತು: ಸಿಎಂ ಬೊಮ್ಮಾಯಿ
ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಎಲ್ಲ ಯೋಜನೆಗಳಲ್ಲೂ ಭಾರೀ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದರಲ್ಲದೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭ್ರಷ್ಟಾಚಾರ ನಿಯಂತ್ರಿಸಿದ್ದಾರೆ. ಸರ್ಕಾರಗಳ ಅನುದಾನ ನೇರವಾಗಿ ಸಂತ್ರಸ್ತರಿಗೆ ತಲುಪುವಂತೆ ಮಾಡಿದ್ದಾರೆ ಎಂದು ತಿಳಿಸಿದರು. ಪ್ರತಿಯೊಂದು ಜಿಲ್ಲೆಗೆ ₹5 ಸಾವಿರ ಕೋಟಿ: ರಾಜ್ಯದ ಪ್ರತಿಯೊಂದು ಜಿಲ್ಲೆಗೆ 5 ಸಾವಿರ ಕೋಟಿ ಅನುದಾನ ನೀಡಿ ಸಮಗ್ರ ಅಭಿವೃದ್ಧಿಗೆ ನಿರ್ಧರಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಚ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕ್ರಿಯಾ ಯೋಜನೆ ತಯಾರಿಸಲಾಗುವುದು.
ರಸ್ತೆ, ಕುಡಿಯುವ ನೀರು, ಸೇತುವೆಗಳು, ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲು ನಾವು ನಿರ್ಧರಿಸಿದ್ದೇವೆ. ಇನ್ನೆರೆಡು ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಗೆ ಸಹ .5 ಸಾವಿರ ಕೋಟಿ ಅನುದಾನ ಬರಲಿದ್ದು, ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಲಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಬರುವ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಹೇಳಿದರು.
ರಾಜಾಹುಲಿ ಭಾಷಣಕ್ಕೆ ಕಾಂಗ್ರೆಸ್ ತತ್ತರ: ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಜನನಿ ಇದ್ದಂತೆ. ಮೂರು ತಲೆಮಾರಿಗಾಗುವಷ್ಟುಆಸ್ತಿ ಮಾಡಿಕೊಂಡಿದ್ದೇವೆ ಎಂದು ಆ ಪಕ್ಷದ ನಾಯಕರೇ ಹೇಳಿದ್ದಾರೆ. ಕಾಂಗ್ರೆಸ್ ತಮ್ಮ ಅಧಿಕಾರ ಅವಧಿಯಲ್ಲಿ ಹಗಲು ದರೋಡೆ ಮಾಡಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾಗಿಲ್ಲ ಎಂದರು. ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ ಗೆದ್ದು ರಾಜಿನಾಮೆ ನೀಡಿದರು. ಬಳ್ಳಾರಿಯತ್ತ ತಿರುಗಿ ಸಹ ನೋಡಲಿಲ್ಲ. ಇದೀಗ ರಾಹುಲ್ ಗಾಂಧಿ ಅವರು ಯಾವ ಮುಖ ಇಟ್ಟುಕೊಂಡು ಬಳ್ಳಾರಿಗೆ ಬರುತ್ತಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಪ್ರಶ್ನಿಸಿದರು.
ಸಚಿವ ಬಿ. ಶ್ರೀರಾಮುಲು, ಗೋವಿಂದ ಕಾರಜೋಳ, ಶಾಸಕರಾದ ಎಂ.ಎಸ್. ಸೋಮಲಿಂಗಪ್ಪ, ಸಂಸದ ಸಂಗಣ್ಣ ಕರಡಿ, ಬಿಜೆಪಿ ಜಿಲ್ಲಾಧ್ಯಕ್ಷ ಮುರಾಹರಿಗೌಡ ಗೋನಾಳ್ ಮತ್ತಿತರರಿದ್ದರು. ಕಾರ್ಯಕ್ರಮ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿರುಗುಪ್ಪ ಪಟ್ಟಣದಲ್ಲಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.