ಜನೋತ್ಸವ ಮತ್ತೆ ಮುಂದೂಡಿಕೆ: ಗಣೇಶ ಹಬ್ಬದ ಬಳಿಕ ಆಚರಣೆಗೆ ಪಕ್ಷದ ನಿರ್ಧಾರ

By Govindaraj SFirst Published Aug 18, 2022, 3:30 AM IST
Highlights

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ಗಣೇಶ ಹಬ್ಬದ ಬಳಿಕ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. 

ಬೆಂಗಳೂರು (ಆ.18): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ಗಣೇಶ ಹಬ್ಬದ ಬಳಿಕ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಬುಧವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದರು. 

ಇದೇ ತಿಂಗಳು 28ರಂದು ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಸಾಧನೆಯ ಜನೋತ್ಸವ ಆಚರಿಸಲು ತೀರ್ಮಾನಿಸಲಾಗಿತ್ತು. ಆದರೆ, ಪಕ್ಷದ ಮುಖಂಡರ ಜತೆ ಚರ್ಚಿಸಿದ ಬಳಿಕ ಗಣೇಶ ಹಬ್ಬದ ನಂತರ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ದಿನಾಂಕ ಇನ್ನೂ ನಿಗದಿ ಮಾಡಿಲ್ಲ. ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. 

ದೊಡ್ಡಬಳ್ಳಾಪುರ ಸೇರಿ 5 ಕಡೆ ಜನೋತ್ಸವ: ಸಿಎಂ ಬೊಮ್ಮಾಯಿ

ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟುಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿತ್ತು. ನಂತರ ಇದೇ ತಿಂಗಳು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಇದೀಗ ಮತ್ತೆ ಸಮಾರಂಭ ಮುಂದೂಡಿಕೆ ಮಾಡಲಾಗಿದೆ.

ಬಿಎಸ್‌ವೈಗೆ ಆಹ್ವಾನ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ಜುಲೈ 28ರಂದು ನಡೆಸಲು ತೀರ್ಮಾನಿಸಿತ್ತು. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆಯಾಗಿತ್ತು. ಇದರಿಂದ ಸಾಧನಾ ಸಮಾವೇಶವನ್ನು ಸ್ವತಃ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿದ್ದರು. 

ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿ ಇಟ್ಟುಕೊಂಡು ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ. ಇತ್ತೀಚೆಗೆ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮ ಯಶ್ವಸ್ವಿಯಾಗಿದೆ. ಇದರಿಂದ ಬಿಜೆಪಿಯನ್ನು ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕೌಂಟರ್ ಕೊಡಲು ಬಿಜೆಪಿ ಪ್ಲಾನ್ ಮಾಡಿದೆ. ಅದಕ್ಕೆ ಮೊದಲ ಹಂತವಾಗಿ ಈ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. 

ಮಾಧುಸ್ವಾಮಿ ಹೇಳಿಕೆ ಸಾಕು ಸರಕಾರ ಅಸಮರ್ಥ ಎನ್ನಲು: ಕಾಂಗ್ರೆಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾಗಿದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿತ್ತು. 

click me!