ರಾಜ್ಯದಲ್ಲೇ ಅತಿ ಶೀಘ್ರದಲ್ಲೇ ಬಿಜೆಪಿ - ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಒಗ್ಗೂಡಿ ರಾಜ್ಯವನ್ನು ಕಟ್ಟಲಿದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕೆ.ಆರ್.ಪೇಟೆ (ಏ.15): ರಾಜ್ಯದಲ್ಲೇ ಅತಿ ಶೀಘ್ರದಲ್ಲೇ ಬಿಜೆಪಿ - ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಒಗ್ಗೂಡಿ ರಾಜ್ಯವನ್ನು ಕಟ್ಟಲಿದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆಗಳನ್ನು ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತನೀಡಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.
ತಾಲೂಕಿನ ಗಡಿ ಭಾಗ ಅಶೋಕ ನಗರದ ಬಳಿ ಶಾಸಕ ಎಚ್.ಟಿ.ಮಂಜು ಮತ್ತು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ನಿಖಿಲ್ ಗೆ ಅದ್ಧೂರಿ ಸ್ವಾಗತ ನೀಡಿದರು. ನಂತರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆಯಿಂದ ಪ್ರಚಾರ ಯಾತ್ರೆ ಆರಂಭಿಸಿದ ನಿಖಿಲ್, ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ, ಆಲಂಬಾಡಿ ಕಾವಲು, ಅಕ್ಕಿಹೆಬ್ಬಾಳು, ಬೀರವಳ್ಳಿ, ಮಂದಗೆರೆ, ಕಿಕ್ಕೇರಿ ಹೋಬಳಿಯ ದಬ್ಬೇಘಟ್ಟ, ಮಾದಾಪುರ, ಆನೆಗೊಳ, ಐಕನಹಳ್ಳಿ, ಲಕ್ಷ್ಮೀಪುರ, ಕಿಕ್ಕೇರಿ, ಚೌಡೇನಹಳ್ಳಿ ಮತ್ತು ಕಸಬಾ ಹೋಬಳಿಯ ಹಿರೀಕಳಲೆ ಗ್ರಾಪಂ ಕೇಂದ್ರಗಳಲ್ಲಿ ಸಂಚರಿಸಿ ಮತಯಾಚಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು. ರಾಜ್ಯ ಕಟ್ಟುವ ಕುಮಾರಣ್ಣನವರ ಚಿಂತನೆ ಮತ್ತು ಬದ್ಧತೆಗಳನ್ನು ಗಮನಿಸಿದ ಬಿಜೆಪಿ ನಾಯಕರು ಕುಮಾರಣ್ಣನನ್ನು ಬೆಂಬಲಿಸಿ ಮೈತ್ರಿ ಮಾಡಿಕೊಂಡಿದ್ದಾರೆ. ಕುಮಾರಣ್ಣ ಕೇವಲ ಮಂಡ್ಯದ ಸಂಸದರಾಗದೇ ಸಮಸ್ತ ರಾಜ್ಯದ ಪ್ರತಿನಿಧಿಯಾಗಿ ಕೇಂದ್ರದಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. ಮಣ್ಣಿನ ಮಕ್ಕಳಾದ ಕುಮಾರಣ್ಣ ಮತ್ತು ಬಿ.ಎಸ್.ಯಡಿಯೂರಪ್ಪ ಒಟ್ಟಾಗಿದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
ನಿಮ್ಮಿಂದ ಸಿಎಂ ಆಗದ್ದನ್ನೇ ಮರೆತು ಮಂಡ್ಯಕ್ಕೆ ಪಲಾಯನ: ಎಚ್ಡಿಕೆ ವಿರುದ್ಧ ಸಚಿವ ಜಮೀರ್ ವಾಗ್ದಾಳಿ
ಒಳ್ಳೆಯ ಉದ್ದೇಶಕ್ಕಾಗಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದೆ ಎಂದು ಹೇಳಿದರು. ಶಾಸಕ ಎಚ್.ಟಿ.ಮಂಜು ಹಾಗೂ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಸಭೆಗಳಲ್ಲಿ ಮಾತನಾಡಿದರು. ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮೀಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕೀರಾಂ, ಮನ್ಮುಲ್ ನಿರ್ದೇಶಕ ಡಾಲು ರವಿ, ರಾಜ್ಯ ಜೆಡಿಎಸ್ ವಕ್ತಾರ ಅಶ್ವಿನ್ ಕುಮಾರ್, ಅಕ್ಕಿಹೆಬ್ಬಾಳು ರಘು ಸೇರಿ ಆಯಾ ಭಾಗದ ಸ್ಥಳೀಯ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.