ಲೋಕಸಭಾ ಚುನಾವಣೆಗೆ ಮಾತ್ರ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ನಮ್ಮ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮೈಸೂರು (ಫೆ.07): ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಂಡಿವೆ. ಆದರೆ, ನಮ್ಮ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಜತೆ ಲೋಕಸಭಾ ಚುನಾವಣಾ ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೆ. ನಮ್ಮ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ. ಜೆಡಿಎಸ್ ಜಯಪ್ರಕಾಶ್ ನಾರಾಯಣ್ ಕಟ್ಟಿದ ಪಕ್ಷವಾಗಿದೆ. ಪಕ್ಷ ಉಳಿಸಿ ಬೆಳೆಸಿದ ಎಚ್.ಡಿ. ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತೇವೆ. ನಮ್ಮ ತತ್ವ ಸಿದ್ಧಾಂತದಲ್ಲಿ ಒಂದಿಂಚು ಕೂಡ ಬದಲಾಗಲ್ಲ. ಬಿಜೆಪಿಯವರದು ಅವರಿಗೆ, ನಮ್ಮದು ನಮಗೆ. ಕೇವಲ ಸೀಟು ಹಂಚಿಕೆ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ ಎಂದು ಹೇಳಿದರು.
undefined
ರಾಜ್ಯಗಳಿಂದ 100 ರೂ. ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ ಕೊಟ್ಟರೆ, ನಮಗೆ 12 ರೂ. ಕೊಡ್ತಾರೆ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಸರಿ ಟವೆಲ್ ಹಾಕಿದ ವಿಚಾರದ ಕುರಿತು ಮಾತನಾಡಿದ ಅವರು, ಅದು ಬಿಜೆಪಿಯವರ ಟವಲ್ ಅಲ್ಲ. ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಕೇಸರಿ ಟವೆಲ್ ಅನ್ನು ಹಾಕಿದ್ದಾನೆ. ಅದು ಕುಮಾರಸ್ವಾಮಿ ಅವರ ಹೆಗಲ ಮೇಲಿತ್ತು. ಆದರೆ, ಕಾಂಗ್ರೆಸ್‌ನವರು ಅದನ್ನೇ ದೊಡ್ಡದು ಮಾಡಿದ್ದಾರೆ. ಆದರೆ, ತತ್ವ ಸಿದ್ದಾಂತದಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಆಗುವುದಿಲ್ಲ ಎಂದು ಮಾಹಿತಿ ನೀಡಿದರು.
ಕೇಂಂದ್ರ ಅನುದಾನಕ್ಕಾಗಿ ರಾಜ್ಯ ಸರ್ಕಾರ ಪ್ರತಿಭಟನೆ ಹಂತಕ್ಕೆ ಹೋಗಬಾರದಿತ್ತು: ಇನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಡೆಲ್ಲಿ ಚಲೋ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಭಟನೆ ಹಂತಕ್ಕೆ ಹೋಗಬಾರದಿತ್ತು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವುದು ಸರಿಯಲ್ಲ. ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಂ ಅವರು ಆರ್ಥಿಕ ಸಚಿವರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಸಚಿವರು ಆಗಿದ್ದಾರೆ. ಇಬ್ಬರೂ ಕುಳಿತು ಮೀಟಿಂಗ್ ಮಾಡಬೇಕಿತ್ತು. ವಿವರವಾದ ಮಾಹಿತಿಗಳೊಂದಿಗೆ ಮಾತನಾಡಬೇಕಿತ್ತು ಎಂದು ಸಲಹೆ ನೀಡಿದ್ದಾರೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಕೊಡಬೇಕಾದ ಎಲ್ಲ ಅನುದಾನವನ್ನೂ ಈಗಾಗಲೇ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ, ರಾಜ್ಯ ಸರ್ಕಾರದವರು ಕೊಟ್ಟಿಲ್ಲ ಎನ್ನುತ್ತಾರೆ. ಏನೇ ಇದ್ದರು ಕುಳಿತು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಬಹುದಿತ್ತು.ಅದನ್ನು ಬಿಟ್ಟು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬಾರದಿತ್ತು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ದೇಶದ ಮುಂದೆ ಬೆತ್ತಲಾದ ಕಾಂಗ್ರೆಸ್‌ನ 2 ತಲೆ ರಾಜಕಾರಣ: ಮಾಜಿ ಸಿಎಂ ಕುಮಾರಸ್ವಾಮಿ ಹೀಗೆ ಹೇಳಿದ್ಯಾಕೆ?
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳು, ತಾಲೂಕು ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಹಾಗೂ ನಗರ ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಮೂಲಭೂತ ಸೌಕರ್ಯಗಳ ಕುರಿತ ಸಮಸ್ಯೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ಮುಂಬರುವ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗಂಭೀರವಾಗಿ ತಗೆದುಕೊಂಡು ಸಮಸ್ಯೆಗಳ ನಿವಾರಣೆಗೆ ಇಂದು ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.