ಚನ್ನಪಟ್ಟಣ ಟಿಕೆಟ್ ಸಿ.ಪಿ. ಯೋಗೇಶ್ವರ್, ಜೆಡಿಎಸ್‌ಗೋ?: ಇಂದು ಮತ್ತೆ ಮೈತ್ರಿ ಪಕ್ಷ ಸಭೆ

By Kannadaprabha NewsFirst Published Oct 20, 2024, 8:10 AM IST
Highlights

ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಯುತ್ತಿರುವುದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಬಿಜೆಪಿ ಮುಖಂಡರು ಸಹ ಜೆಡಿಎಸ್‌ಗೆ ನೀಡಲು ಒಲವು ತೋರಿದರು ಎನ್ನಲಾಗಿದೆ. 

ಬೆಂಗಳೂರು(ಅ.20):  ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಜೆಡಿಎಸ್ ನಡುವೆ ಸಹಮತ ವ್ಯಕ್ತವಾಗದ ಕಾರಣ ಇಂದು(ಭಾನುವಾರ) ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. 

ಈ ನಡುವೆ, ಜೆಡಿಎಸ್‌ಗೆ ಟಿಕೆಟ್ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ. ಶನಿವಾರ ಖಾಸಗಿ ಹೋಟೆಲ್‌ನಲ್ಲಿ ಉಭಯ ಪಕಗಳ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸ ಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮುಖಂಡರಾದ ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡಮತ್ತು ಬಿಜೆಪಿಯಿಂದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು. 

Latest Videos

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ಒಂದೂವರೆ ತಾಸುಗಿಂತ ಹೆಚ್ಚು ಕಾಲ ನಡೆದ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಸಾಧಕ-ಬಾಧಕ ಕುರಿತು ವಿಸ್ತ್ರತವಾಗಿ ಚರ್ಚೆ ನಡೆಸಲಾಯಿತು. ಶುಕ್ರವಾರ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಜತೆ ಜೆಡಿಎಸ್ ಮುಖಂಡರು ಸಭೆ ನಡೆಸಿದರೂ ಫಲಪ್ರದವಾಗಲಿಲ್ಲ. ಈ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ತಿಳಿದುಬಂದಿದೆ.

ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಯುತ್ತಿರುವುದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಬಿಜೆಪಿ ಮುಖಂಡರು ಸಹ ಜೆಡಿಎಸ್‌ಗೆ ನೀಡಲು ಒಲವು ತೋರಿದರು ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ಲಭಿಸುವುದು ಖಚಿತ. ಯೋಗೇಶ್ವರ್ ಪಟ್ಟು ಬಿಡದ ಕಾರಣ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಅಭ್ಯರ್ಥಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ.

click me!