ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಮುಸ್ಲಿಂ ಓಲೈಕೆಯಾಗಿದೆ, ಆದರೆ ಒಂದು ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸುವರ್ಣವಿಧಾನಸೌಧ (ಡಿ.6) : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಮುಸ್ಲಿಂ ಓಲೈಕೆಯಾಗಿದೆ, ಆದರೆ ಒಂದು ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯು ಮುಸ್ಲಿಂ ಓಲೈಕೆಯಲ್ಲದೇ ಮತ್ತೇನು? ಸರ್ಕಾರ ಇರುವುದು ಕೇವಲ ಒಂದು ಸಮುದಾಯವನ್ನು ಓಲೈಕೆ ಮಾಡುವುದಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂದು ಟೀಕಿಸಿದರು.
ಹೀಗೆ ಬಿಟ್ಟರೆ ವಿಶ್ವದ ಸಂಪತ್ತನ್ನೂ ಮುಸ್ಲಿಮರಿಗೆ ಹಂಚಲು ಸಿದ್ದು ರೆಡಿ: ಅಶೋಕ್
ಕಾಂಗ್ರೆಸ್ ಸರ್ಕಾರ ಇನ್ನೂ ನಾಲ್ಕುವರೆ ವರ್ಷ ಇರಲಿದೆ. ಹಂತ ಹಂತವಾಗಿ ಎಲ್ಲ ವಿಚಾರಗಳ ಕುರಿತು ಮಾತನಾಡುತ್ತೇನೆ. ಅಧಿವೇಶನದಲ್ಲಿ ಬಿಜೆಪಿಯೊಂದಿಗೆ ಜಂಟಿಯಾಗಿ ಹೋರಾಟ ನಡೆಸುತ್ತೇವೆ. ಜನಪರ ವಿಚಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ರಾಜ್ಯಪಾಲರಿಗೆ ನೀಡಿರುವ ದೂರಿನ ವಿಚಾರಗಳ ಕುರಿತು ಸದನದಲ್ಲಿ ಮಾತನಾಡುತ್ತೇವೆ ಎಂದು ಹೇಳಿದರು.
ಜನವರಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನ ಸಂದರ್ಭದಲ್ಲಿಯೂ ಬೇರೆ ಬೇರೆ ವಿಚಾರಗಳ ಕುರಿತು ಚರ್ಚಿಸಲಾಗುವುದು. ವರ್ಗಾವಣೆ ದಂಧೆ ಸೇರಿದಂತೆ ಇತರೆ ವಿಚಾರಗಳ ಕುರಿತು ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಮುಸ್ಲಿಮರಿಗೆ ಈ ದೇಶದ ಸಂಪತ್ತು ಹಂಚಿದ್ರೆ ತಪ್ಪೇನು? ಅಬಕಾರಿ ಸಚಿವ ಯಾಕೆ ಹಿಂಗಂದ್ರು!?
ಇನ್ನು, ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಬಲಿಷ್ಠ ನಾಯಕತ್ವ ಬೇಕು ಎಂದು ಜನತೆ ಹೇಳುತ್ತಿದ್ದಾರೆ. ಬಿಜೆಪಿ ವರಿಷ್ಠರು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಇದಾದ ಬಳಿಕ ದೆಹಲಿಗೆ ತೆರಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.