2028ಕ್ಕೆ ನನ್ನ ಇನ್ನೊಂದು ಮುಖ ತೋರಿಸ್ತೇನೆ, ರಾಜ್ಯದಲ್ಲಿ ಬಿಜೆಪಿ ದಳ ಅಧಿಕಾರಕ್ಕೆ ಬರುತ್ತಾ? ಹೆಚ್‌ಡಿಕೆ ಹೇಳಿದ್ದೇನು?

Kannadaprabha News   | Kannada Prabha
Published : Oct 20, 2026, 07:50 AM IST
hd kumaraswamy

ಸಾರಾಂಶ

HD Kumaraswamy 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಹಾಸನ (ಅ.20) : 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನನಗೂ ಚದುರಂಗದ ಆಟ ಬರುತ್ತದೆ

ಈ ಕುರಿತು ಮಾತನಾಡಿದ ಅವರು, ನನಗೂ ಚದುರಂಗದ ಆಟ ಬರುತ್ತದೆ. ಸಮಯ ಬಂದಾಗ ಪಾನ್‌ ಮುಂದೆ ಇಡುತ್ತೇನೆ. ಈ ಬಾರಿ ಕುಮಾರಸ್ವಾಮಿಯ ಇನ್ನೊಂದು ಮುಖವನ್ನು ತೋರಿಸುತ್ತೇನೆ ಎಂಬ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆಯುವಂತಿತ್ತು. ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಸರ್ಕಾರದ ಕಾರ್ಯವೈಖರಿ ಕುರಿತು ಮುಕ್ತ ಚರ್ಚೆ ನಡೆಯಬೇಕು ಎಂದರು.

ಬಹಿರಂಗವಾಗಿ ಒಪ್ಪಿಕೊಂಡು ಸರಿಪಡಿಸಿಕೊಳ್ಳುವುದಾಗಿ ಹೇಳಿದ್ದೇನೆ

ಹಿಂದೆ ತಮ್ಮಿಂದ ತಪ್ಪುಗಳಾಗಿದ್ದರೆ ಅವುಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ಸರಿಪಡಿಸಿಕೊಳ್ಳುವುದಾಗಿ ಹೇಳಿದ್ದೇನೆ. ತಪ್ಪುಗಳನ್ನು ಒಪ್ಪಿಕೊಳ್ಳುವುದು ದೌರ್ಬಲ್ಯವಲ್ಲ. ಜನರು ನೀಡಿರುವ ಶಕ್ತಿಯನ್ನು ಬಳಸಿಕೊಂಡು ಜನಪರ ವಿಚಾರಗಳಿಗಾಗಿ ಹೋರಾಟ ನಡೆಸುವುದು ತಮ್ಮ ಉದ್ದೇಶ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನ್ಯೂಜಿಲೆಂಡ್​ನಿಂದ ಭಾರತದಲ್ಲಿ 20 ಲಕ್ಷ ಕೋಟಿ ಹೂಡಿಕೆ: ಭರಪೂರ ಉದ್ಯೋಗಾವಕಾಶ, ರೈತರಿಗೂ ಬಂಪರ್​
ಕಸದಿಂದ ಬಂತು 6 ಸಾವಿರ ಕೋಟಿ ರೂಪಾಯಿ! ಎಸೆಯುವ ತ್ಯಾಜ್ಯದಿಂದ ಸರ್ಕಾರಕ್ಕೆ ಈ ಪರಿ ಆದಾಯ ಹೇಗೆ