ಬೇರೆ ರಾಜ್ಯಗಳಲ್ಲೂ ಇದೇ ರೀತಿ ಸರ್ಕಾರ ಅಸ್ಥಿರಗೊಳಿಸಿರುವ ಅನೇಕ ನಿದರ್ಶನಗಳಿವೆ. ಕರ್ನಾಟಕದಲ್ಲೂ ಕೇಂದ್ರದ ತನಿಖಾ ಸಂಸ್ಥೆ ಉಪಯೋಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಕೆಡವಲು ಕುತಂತ್ರ ಮಾಡಿದ್ದಾರೆ. ಮೊದಲು ಇ.ಡಿ. ಅನ್ನು ಬಳಸಿಕೊಂಡರು ಈಗ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳಲು ಹೊರಟಿದ್ದಾರೆ ಎಂದ ಸಚಿವ ಕೃಷ್ಣ ಬೈರೇಗೌಡ
ಸಕಲೇಶಪುರ(ಆ.01): ಕೇಂದ್ರ ಸರ್ಕಾರ ಹಾಗೂ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕನ್ನಡಿಗರಿಂದ ಆಯ್ಕೆಯಾಗಿರುವ ನಮ್ಮ (ಕಾಂಗ್ರೆಸ್) ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ತಾಲೂಕಿನ ದೊಡ್ಡತಪ್ಪಲು ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ರಾಜ್ಯಗಳಲ್ಲೂ ಇದೇ ರೀತಿ ಸರ್ಕಾರ ಅಸ್ಥಿರಗೊಳಿಸಿರುವ ಅನೇಕ ನಿದರ್ಶನಗಳಿವೆ. ಕರ್ನಾಟಕದಲ್ಲೂ ಕೇಂದ್ರದ ತನಿಖಾ ಸಂಸ್ಥೆ ಉಪಯೋಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಕೆಡವಲು ಕುತಂತ್ರ ಮಾಡಿದ್ದಾರೆ. ಮೊದಲು ಇ.ಡಿ. ಅನ್ನು ಬಳಸಿಕೊಂಡರು ಈಗ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳಲು ಹೊರಟಿದ್ದಾರೆ ಎಂದರು.
undefined
ರಾಮನಗರ ಜಿಲ್ಲೆ ಹೆಸರು ಬದಲಾವಣೆ: ಬೆಂಗ್ಳೂರು ಹೆಸರು ಇಟ್ಟರೆ ಅಭಿವೃದ್ಧಿ ಆಗುತ್ತೆ, ಸಚಿವ ಕೃಷ್ಣಭೈರಗೌಡ
ಜೆಡಿಎಸ್ ಮತ್ತು ಬಿಜೆಪಿಯ ಕೇಂದ್ರ ಸಚಿವರು ದೆಹಲಿಯಲ್ಲಿ ಕುಳಿತು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ. ಅವರು ಏನು ಮಾಡುತ್ತಾರೆ ಮಾಡಲಿ, ನಾವು ಸಹ ಎಲ್ಲಾ ರೀತಿಯ ಸವಾಲು ಎದುರಿಸಲು ತಯಾರಿದ್ದೇವೆ. ರಾಜ್ಯಪಾಲರ ಕಚೇರಿ ದುರುಪಯೋಗಪಡಿಸಿಕೊಂಡು ಸರ್ಕಾರ ಕೆಡವಿದರೆ ನಾವು ಸುಪ್ರೀಂಕೋರ್ಟ್‌ಗೆ ಹೋಗಿ ಹೋರಾಟ ಮಾಡುತ್ತೇವೆ. ಅಲ್ಲದೆ, ಪ್ರಜಾಪ್ರಭುತ್ವ ಉಳಿಸಲು ನಾವು ಬೀದಿಗಿಳಿದು ಪ್ರತಿಭಟಿಸಲು ಸಿದ್ಧರಿದ್ದೇವೆ ಎಂದು ಸಚಿವರು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸೇರಿಕೊಂಡು ಏನಾದರೂ ಮಾಡಿ ಚುನಾಯಿತ ಸರ್ಕಾರವನ್ನು ಸಂವಿಧಾನಕ್ಕೆ ವಿರುದ್ಧವಾಗಿ ಬುಡಮೇಲು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಜಾರಿ ನಿರ್ದೇಶನಾಲಯ (ಇ.ಡಿ.) ಬಿಜೆಪಿಯ ಪೊಲಿಟಿಕಲ್ ವಿಂಗ್ ಆಗಿದೆ. ಸಿಎಂ ವಿರುದ್ಧ ಹೇಳಿಕೆ ಕೊಡಿ ತಪ್ಪು ಮಾಡಿರುವವರಿಗೆ ರಕ್ಷಣೆ ಕೊಡುತ್ತೇವೆ ಎಂದು ಇ.ಡಿ. ಅಧಿಕಾರಿಗಳು ಹೇಳಿದ್ದಾರೆ. ಈ ಮೂಲಕ ಹಗರಣವನ್ನು ಸಿಎಂ ಸಿದ್ದರಾಮಯ್ಯ ತಲೆಗೆ ಕಟ್ಟಲು ಮುಂದಾಗಿದ್ದಾರೆ. ಈ ಹಗರಣ ಉಪಯೋಗಿಸಿಕೊಂಡು ಸರ್ಕಾರವನ್ನು ಕೆಡವಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆ: 48 ಜನರ ಸಾವು, 46 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ!
ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್ ನಾಟಕ
ಮಡಿಕೇರಿ: ಬಿಜೆಪಿ ಮತ್ತು ಜೆಡಿಎಸ್ ಸೇರಿ ಪಾದಯಾತ್ರೆ ಕುರಿತು ನಾಟಕ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣೆ ಬೈರೆಗೌಡ ಹೇಳಿದರು. ಇಲ್ಲಿನ ಅತ್ತೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯ ಮೈಸೂರು ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಎಂಬ ಕುಮಾರಸ್ವಾಮಿ ನಿಲುವಿಗೆ ಪ್ರತಿಕ್ರಿಯಿಸಿ, ಕರ್ನಾಟಕಕ್ಕೆ ಬರಬೇಕಾಗಿರುವ ಅನುದಾನದ ಬಗ್ಗೆ ರಾಜ್ಯದ ಯಾವುದೇ ಕೇಂದ್ರ ಸಚಿವರು ಕೇಳಲಿಲ್ಲ. ಆ ಕಡೆ ಪ್ರಹ್ಲಾದ್ ಜೋಶಿ, ಈ ಕಡೆ ಕುಮಾರಸ್ವಾಮಿ ಇಬ್ಬರು ರಾಜ್ಯ ಸರ್ಕಾರವನ್ನು ಕೆಡವಲು ಕುತಂತ್ರ ಮಾಡುತ್ತಿದ್ದಾರೆ. ರಾಜ್ಯಕ್ಕೆ ನ್ಯಾಯ ಬೇಕು ಎಂದು ಧ್ವನಿ ಎತ್ತುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧ್ವನಿಯನ್ನು ಅಡಗಿಸಲು ಬಿಜೆಪಿ ಮತ್ತು ಜೆಡಿಎಸ್ ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.