ಬಿಜೆಪಿ, ದಳದ ಹಲವು ನಾಯಕರು ನನ್ನ ಸಂಪರ್ಕದಲ್ಲಿ- ಡಿಕೆಶಿ; ಕಾಂಗ್ರೆಸ್ ಸಿದ್ಧಾಂತ ಒಪ್ಪುವವರ ಪಟ್ಟಿ ತಯಾರಿ!

Sathish Kumar KH   | Kannada Prabha
Published : Sep 14, 2026, 06:08 AM IST
DK Shivakumar

ಸಾರಾಂಶ

ಬಿಜೆಪಿ ಮತ್ತು ಜೆಡಿಎಸ್‌ನ ಹಲವು ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಬರುವವರಿಗೆ ಪಕ್ಷದಲ್ಲಿ ಅವಕಾಶ ನೀಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷಕ್ಕೆ ಬರುವವರ ಪಟ್ಟಿ ಸಿದ್ಧಪಡಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಲಾಗಿದೆ ಎಂದರು.

ಬೆಂಗಳೂರು (ಸೆ.14): ಬಿಜೆಪಿ ಹಾಗೂ ಜನತಾದಳದ ಸಾಕಷ್ಟು ನಾಯಕರು ನನ್ನೊಂದಿಗೆ, ಪಕ್ಷದ ಅಧ್ಯಕ್ಷರೊಂದಿಗೆ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಒಪ್ಪಿ, ನಂಬಿಕೆ ಇಟ್ಟು ಬರುವವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಎರಡೂ ಪಕ್ಷಗಳ ಸಾಕಷ್ಟು ನಾಯಕರು ನನ್ನ ಮತ್ತು ಅಧ್ಯಕ್ಷರ ಜೊತೆ ಚರ್ಚಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಹಾಗೂ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಮ್ಮೆಲ್ಲರ ಬಗ್ಗೆ ನಂಬಿಕೆವುಳ್ಳವರ ಪಟ್ಟಿ ತಯಾರಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಪಕ್ಷಕ್ಕೆ ಬರುವವರಿಗೆ ಮುಂದೆ ಅವಕಾಶ ಮಾಡಿಕೊಡಲಾಗುವುದು. ಈಗಾಗಲೇ ಪಕ್ಷಕ್ಕೆ ಬಂದಿರುವವರಿಗೆ ವಿವಿಧ ಸ್ಥಾನಗಳಲ್ಲಿ ಅವಕಾಶ ನೀಡಲಾಗಿರುವುದು ತಿಳಿದ ವಿಷಯ. ಯಾರೇ ಬಂದರೂ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಜನರ ಮಧ್ಯೆ ನಾಯಕನಿದ್ದರೆ ಜನ ಜಾತಿ ಕೇಳಲ್ಲ:

‘ಮಾಜಿ ಮೇಯರ್ ನಾಗರಾಜ್ ಅವರಿಗೆ, ಕೆ.ಎಂ.ನಾಗರಾಜ್ ಅವರಿಗೆ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಟಿಕೆಟ್ ನೀಡಲು ತೀರ್ಮಾನಿಸಲಾಯಿತು. ಆಗ ನಾವು ನರೇಂದ್ರ ಬಾಬು ಹಾಗೂ ಚಂದ್ರಶೇಖರ್ ಅವರಿಗೆ ನೀಡೋಣ ಎಂದು ಎಸ್.ಎಂ.ಕೃಷ್ಣ ಅವರಿಗೆ ಹೇಳಿದೆವು. ಆಗ ಅನೇಕರು ಎರಡೂ ಕ್ಷೇತ್ರಗಳಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಅಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗದವರು ಗೆಲ್ಲಲು ಸಾಧ್ಯವೇ ಎಂದು ಕೇಳಿದರು. ಆದರೆ ಇವರಿಬ್ಬರೂ ಗೆದ್ದರು. ಜನರ ನಡುವೆ ಇದ್ದರೆ ಜನ ಜಾತಿ ಕೇಳಲ್ಲ‌. ನಾಯಕ ಕ್ರಿಯಾಶೀಲರಾಗಿದ್ದರೆ ಜನ ಗೆಲ್ಲಿಸುತ್ತಾರೆ. ಜನ ಜಾತಿ ನೋಡುವ ಹಾಗಿದ್ದರೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲು ಹೇಗೆ ಸಾಧ್ಯ? ಸಿಂಧ್ಯಾ ಅವರು ನನ್ನ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿದ್ದರು. ಅಲ್ಲಿ ಮರಾಠಿ ಮತದಾರರ ಸಂಖ್ಯೆ 3 ಸಾವಿರವೂ ದಾಟಿಲ್ಲ‌. ರಾಮನಗರದಲ್ಲಿ ನಿಖಿಲ್ ಎದುರು ಇಕ್ಬಾಲ್ ಹುಸೇನ್ ಗೆಲ್ಲಲು ಹೇಗೆ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನೆ.ಲ.ನರೇಂದ್ರ ಬಾಬು ಮತ್ತು ಅವರ ಬೆಂಬಲಿಗರನ್ನು ಪಕ್ಷದ ಬಾವುಟ ನೀಡಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ, ಮಾಜಿ ಸಚಿವೆ ರಾಣಿ ಸತೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಹಳಬರು ಹೊಸಬರೆಂಬ ಭೇದವಿಲ್ಲ:

ಕಾಂಗ್ರೆಸ್ ಪಕ್ಷದಲ್ಲಿ ಹಳಬರು ಹೊಸಬರು ಎನ್ನುವ ಭೇದವಿಲ್ಲ. ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ನಲ್ಲಿ ಸೋತರೂ ಎಂಎಲ್‌ಸಿ ಮಾಡಲಾಯಿತು. ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಾಯಿತು. ಎಷ್ಟೋ ಜನ ದಳದಲ್ಲಿ ಇದ್ದವರಿಗೂ ಅವಕಾಶ ನೀಡಿದ್ದೇವೆ. ಇದರಿಂದ ನಮ್ಮ‌ ಪಕ್ಷದವರಿಗೆ ತೊಂದರೆಯಾಗಿದೆ. ಏಕೆಂದರೆ ನಮ್ಮನ್ನು ನಂಬಿದವರಿಗೆ, ದುಡಿಯುವವರಿಗೆ ಅವಕಾಶ ನೀಡಬೇಕು. ಬಿಜೆಪಿಗೆ ಹೋದರೆ ಅಲ್ಲಿ ಬದುಕಲು ಆಗುವುದಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಬೇರೆಯವರು ಬಂದು ಬದುಕಬಹುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

R Ashok: ಡಿಕೆಶಿ ನೀನು ಹಿಂದೂ ಹೌದೋ ಅಲ್ವೋ? ಈಗ ಬಂದು ತೋರಿಸು.. ಸಿಎಂಗೆ ಆರ್ ಅಶೋಕ್ ಹಾಕಿದ ಸವಾಲೇನು?
ಜಾರಕಿಹೊಳಿ ಮೇಲಿನ ED ದಾಳಿಗೆ ಸಿದ್ದರಾಮಯ್ಯನವರ ಶಾಪವೇ ಕಾರಣ - ಯತ್ನಾಳ್ ಹೀಗ್ಯಾಕೆ ಹೇಳಿದರು?