
ಮೈಸೂರು (ಮೇ 11): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಏರ್ಪಟ್ಟಿರುವ ಮೈತ್ರಿಯನ್ನು ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಮುಂದುವರೆಸಲಾಗುವುದು. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತದೆ. ಮೈತ್ರಿಗೆ ಯಾವುದೆ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ, ಬದಲಾವಣೆ ಅಗತ್ಯ: ರಾಹುಲ್ ಗಾಂಧಿ
ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಕೂಡ ಅಷ್ಟೆ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇನೆ. ಕಾಂಗ್ರೆಸ್ ನವರು ಏನೇ ಹೇಳಿದರೂ ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ ಹೇಳಿ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬೀಕರ ಬರಗಾಲ ಬಂದಿದೆ. ರಾಜ್ಯಾದ್ಯಂತ ನೂರಾರು ಕೆರೆಕಟ್ಟೆಗಳು ಬತ್ತಿಹೋಗಿವೆ. ತೀವ್ರ ಬರಗಾಲವು ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನ ಮಾಡಿ ರೈತರಿಗೆ ನೆರವಾಗಬೇಕು. ಬರಗಾಲದಿಂದ ತ್ತರಿಸಿರುವ ರೈತರ ಸಾಲ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.