ಯತ್ನಾಳ್, ಜಾರಕಿಹೊಳಿ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಹತ್ವದ ಹೇಳಿಕೆ

Published : Mar 19, 2021, 09:34 PM IST
ಯತ್ನಾಳ್, ಜಾರಕಿಹೊಳಿ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಹತ್ವದ ಹೇಳಿಕೆ

ಸಾರಾಂಶ

ಕರ್ನಾಟಕಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು, ರಮೇಶ್ ಜಾರಕಿಹೊಳಿ ಹಾಗೂ ಯತ್ನಾಳ್ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು ಹೀಗೆ...

ಬೆಂಗಳೂರು, (ಮಾ. 19): ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಚುನಾವಣೆ ಎದುರಾಗಿದ್ದರಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ.

ಕುಮಾರ ಕೃಪಾ ಅತಿಥಿ ಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ 6 ಸಚಿವರು ತೇಜೋವಧೆಯ‌ ಷಡ್ಯಂತ್ರದಿಂದ ಪಾರಾಗಲು ಕೋರ್ಟ್​​ಗೆ ಹೋಗಿದ್ದರಲ್ಲಿ ತಪ್ಪೇನಿಲ್ಲ ಎಂದು ಅರುಣ್ ಸಿಂಗ್ ಸಮರ್ಥಿಸಿಕೊಂಡರು. 

CD ಕೇಸ್: ರಮೇಶ್ ಜಾರಕಿಹೊಳಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಜೆಪಿ

 ಕೋರ್ಟ್‌ನಿಂದ ಸಚಿವರು ತಡೆಯಾಜ್ಞೆ ತಂದರೆ ಕಾಂಗ್ರೆಸ್​ಗೆ ಏನು ಸಮಸ್ಯೆ ಎಂಬುದು ಅರ್ಥವಾಗದು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವ್ಯವಸ್ಥಿತ ಪಿತೂರಿಯಿದೆ. ಆದರೂ ಅರೋಪ ಕೇಳಿ ಬಂದ 24 ತಾಸಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂತಹ ನೈತಿಕ ಹೊಣೆಗಾರಿಕೆ ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಕಾಂಗ್ರೆಸ್ ನಲ್ಲಿ ಇಂತಹದ್ದು ಕಾಣಸಿಗದು ಎಂದರು.

ಯತ್ನಾಳ್ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್,  ಶಾಸಕ ಬಸನಗೌಡ ಪಾಟೀಲ್ ಹೇಳಿಕೆಗಳನ್ನು ನಾವಂತೂ ಗಂಭೀರವಾಗಿ ಪರಿಗಣಿಸಿಲ್ಲ. ಪಕ್ಷದ ಕಾರ್ಯಕರ್ತರಿಗೂ ಇದು ಡೋಂಟ್ ಕೇರ್. ನೀವು (ಮಾಧ್ಯಮದವರು) ಆದ್ಯತೆ ಕೊಡಬೇಡಿ ಎಂದು ಹೇಳಿದರು.

ಯತ್ನಾಳ್ ವಿರುದ್ಧ ಶಿಸ್ತು ಕ್ತಮದ ಕುರಿತು ನಿರ್ದಿಷ್ಟವಾಗಿ ಯಾವುದೇ ಉತ್ತರ ನೀಡದ ಸಿಂಗ್, ಬಹಿರಂಗ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ ಎಂದು ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!