ದೇಶದ ಜನರನ್ನ ರಕ್ಷಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ: ಅರುಣ್ ಸಿಂಗ್

By Suvarna News  |  First Published Sep 19, 2021, 3:26 PM IST

*  ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ
*  ಪ್ರಧಾನಿಗಳ ನೇತೃತ್ವದಲ್ಲಿ ಎಲ್ಲ ಚುನಾವಣೆ ಗೆದ್ದಿದ್ದೇವೆ
*  ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದ ಅರುಣ್‌ ಸಿಂಗ್‌ 
 


ದಾವಣಗೆರೆ(ಸೆ.19): ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರ ನಡೆಸಲಿದೆ. ಯಡಿಯೂರಪ್ಪನವರ ಕಾರ್ಯಕ್ರಮಗಳನ್ನ ಈಗಿನ ಸಿಎಂ ಬೊಮ್ಮಾಯಿ ಅವರು ಮುಂದುವರೆಸುತ್ತಿದ್ದಾರೆ. ಯಡಿಯೂರಪ್ಪನವರ ನೇತೃತ್ವದಲ್ಲಿ ಈ ಹಿಂದೆ ನಡೆದ ಎಲ್ಲಾ ಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಈಗ ಸಿಎಂ ಬೊಮ್ಮಾಯಿ ಹಾಗೂ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾವು ಉಪಚುನಾವಣೆಯನ್ನ ಗೆಲ್ಲುತ್ತೇವೆ. ಜಿಲ್ಲಾ ಪಂಚಾಯಿತಿ ಚುನಾವಣೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಅಂತ ರಾಜ್ಯ ಬಿಜೆಪಿ ಉಸ್ತುವಾರಿ ತಿಳಿಸಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಪ್ರಧಾನಿಗಳ ಜನ್ಮದಿನಾಚರಣೆಗೆ ನಾವು ಕೇಕ್ ಕಟ್ ಮಾಡಲಿಲ್ಲ, ಬಡವರ ಸೇವೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನ ಆಚರಿಸಿದ್ದೇವೆ. ಪ್ರಧಾನಿಗಳ ನೇತೃತ್ವದಲ್ಲಿ ನಡೆದ ಎಲ್ಲಾ ಚುನಾವಣೆಗಳನ್ನ ಗೆದ್ದಿದ್ದೇವೆ. ದೇಶದ ಜನತೆ ಮೋದಿಯವರ ಮೇಲೆ ವಿಸ್ವಾಸವಿಟ್ಟಿದ್ದಾರೆ. ಮುಖ್ಯಮಂತ್ರಿಯಿಂದ ಪ್ರಧಾನಿಮಂತ್ರಿಯವರೆಗೆ ಒಂದೇ ಒಂದು ರೂಪಾಯಿ ಭ್ರಷ್ಟಾಚಾರದ ಆರೋಪವಿಲ್ಲ ಅಂತ ತಿಳಿಸಿದ್ದಾರೆ. 

Tap to resize

Latest Videos

ಪ್ರತಿಪಕ್ಷವನ್ನು ಹಗುರವಾಗಿ ಪರಿಗಣಿಸಬೇಡಿ: ಬಿ.ಎಸ್‌.ಯಡಿಯೂರಪ್ಪ

ಕಾಂಗ್ರೆಸ್‌ನವರು ಬಡವರಿಗೆ ಶುದ್ಧ ಕುಡಿಯುವ ನೀರು ಸಹ ಕೊಡೋಕೆ ಆಗ್ಲಿಲ್ಲ. ಅರವತ್ತು ವರ್ಷದ ಆಡಳಿತದ  ಕಾಂಗ್ರೆಸ್ ಪಕ್ಷಕ್ಕೆ ಆರೋಗ್ಯ, ಶಿಕ್ಷಣ, ಕುಡಿಯುವ ನೀರು ಕೊಡಲು ಸಾಧ್ಯವಾಗಲಿಲ್ಲ ಅಂತ ಕೈ ನಾಯಕರ ವಿರುದ್ಧ ಅರುಣ್‌ ಸಿಂಗ್‌ ಹರಿಹಾಯ್ದಿದ್ದಾರೆ. 

ದೇಶದ ರೈತರು, ಕಾರ್ಮಿಕರು, ಬಡವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷದ ಜೊತೆಗೆ ನಿಂತಿದ್ದಾರೆ. ದೇಶದ ಜನರಿಗೆ ಅರ್ಥವಾಗಿದೆ ನಮ್ಮನ್ನು ರಕ್ಷಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಅಂತ. ಒಂದೇ ದಿನಕ್ಕೆ 2 ಕೋಟಿ 30ಲಕ್ಷ ಜನರಿಗೆ ಕೋವಿಡ್ ವ್ಯಾಕ್ಸಿನ್ ಹಾಕಲಾಗಿದೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಅಪಹಾಸ್ಯ ಮಾಡ್ತಿದ್ರು ಮೊದಲು ಅಂತ ಹೇಳಿದ್ದಾರೆ. 
 

click me!