ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಲೋಕಸಭಾ ಚುನಾವಣೆ ಸೋಲಿಸಲು ಪಣತೊಟ್ಟು ಕೊನೆಗೂ ಯಶಸ್ವಿ ಕಂಡ ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಅವರಿಗೆ ಬಿಎಸ್ ವೈ ನೇತೃತ್ವದ ಬಿಎಸ್ ವೈ ಸರ್ಕಾರ ಬಿಗ್ ಆಫರ್ ನೀಡಿದೆ.
ಬೆಂಗಳೂರು, [ಅ.12]: ಸೋಲಿಲ್ಲದ ಸರದಾನ ಸೋಲಿಗೆ ಶ್ರಮಿಸಿದ ಮಾಜಿ ಸಚಿವ, ಬಿಜೆಪಿ ನಾಯಕ ಬಾಬೂರಾವ್ ಚಿಂಚನಸೂರ್ ಅವರನ್ನು ಕೋಲಿ ಸಮುದಾಯ ಅಭಿವೃದ್ಧಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಾಬೂರಾವ್ ಚಿಂಚನಸೂರ್ ಅವರನ್ನು ಕೋಲಿ ಸಮುದಾಯ ಅಭಿವೃದ್ಧಿ ಅಧ್ಯಕ್ಷರಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಇಂದು [ಶನಿವಾರ] ಆದೇಶ ಹೊರಡಿಸಿದೆ.
undefined
ಖರ್ಗೆ ವಿರುದ್ಧ ತೊಡೆ ತಟ್ಟಿ ಘರ್ಜಿಸಿದ ಚಿಂಚನಸೂರ್
2019 ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ಗೆಲುವಿಗೆ ಚಿಂಚನಸೂರ್ ಅವರ ಕೊಡುಗೆಯೂ ಇದೆ.
ಈ ಮೊದಲು ಕಾಂಗ್ರೆಸ್ ನಲ್ಲಿದ್ದ ಬಾಬೂರಾವ್ ಚಿಂಚನಸೂರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಸರ್ವಾಡಳಿತ ಧೋರಣೆಯಿಂದ ಬೇಸತ್ತು ಬಿಜೆಪಿ ಸೇರಿದ್ದರು. ಅಲ್ಲಿಂದ ಖರ್ಗೆ ವಿರುದ್ಧ ತೊಡೆತಟ್ಟುತ್ತಲೇ ಇದ್ದಾರೆ.
ನಾನೂ ಮೋದಿ ಇದ್ದಂಗೆ, ಆದ್ರೆ ಅವರಿಗೆ ಹೆಂಡ್ತಿ ಇಲ್ಲ: ಚಿಂಚನಸೂರ್!
ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ನಡೆದಿದ್ದ ಪಾರ್ಲಿಮೆಂಟ್ ಎಲೆಕ್ಷನ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲೇಬೇಕೆಂದು ಪಣತೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಭರ್ಜರಿ ಪ್ರಚಾರ ಮಾಡಿದ್ದರು.
ಅಷ್ಟೇ ಅಲ್ಲದೇ ತಮ್ಮ ಕೋಲಿ ಸಮುದಾಯದ ಮತಗಳನ್ನು ಸೆಳೆಯುವುದರಲ್ಲಿ ಪ್ರಮುಖ ಪಾತ್ರವಹಿಸಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಇದರಿಂದ ಬಾಬೂರಾವ್ ಚಿಂಚನಸೂರ್ ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಸ್ಥಾನ ನೀಡಿದ್ದಾರೆ.