ಗೋವಾದಿಂದಲೇ ಕರ್ನಾಟಕ ಸಿಎಂ ಬದಲಾವಣೆಯ ಸುಳಿವು

By Suvarna NewsFirst Published Jul 25, 2021, 4:09 PM IST
Highlights

* ಸಿಎಂ ಬಿಎಸ್‌ ಯಡಿಯೂರಪ್ಪ ಬದಲಾವಣೆ ವಿಚಾರ
* ಮಹತ್ವದ ಸುಳಿವು ಕೊಟ್ಟ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ 
* ಗೋವಾದಿಂದಲೇ ಕರ್ನಾಟಕ ಸಿಎಂ ಬದಲಾವಣೆಯ ಸುಳಿವು ನೀಡಿದ ಸಿಟಿ ರವಿ

ಪಣಜಿ, (ಜು.25):  ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದಾರೆ. ಆದ್ರೆ, ಹೈಕಮಾಂಡ್ ಇನ್ನೂ ಯಾವುದೇ ಸ್ಪಷ್ಟ ಸಂದೇಶ ಕೊಟ್ಟಿಲ್ಲ.  

ಇದರ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಯಡಿಯೂರಪ್ಪನವರ ಬದಲಾವಣೆ ಬಗ್ಗೆ ಮಹತ್ವ ಸುಳಿವು ಕೊಟ್ಟಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಜೋಶಿ ನಡೆ

ಈ ಬಗ್ಗೆ ಗೋವಾದಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನಪ್ರಿಯ ನಾಯಕರಾಗಿದ್ದು, ಪಕ್ಷ ಅವರಿಗೆ ಬಹಳಷ್ಟು ಅವಕಾಶಗಳನ್ನು ನೀಡಿದೆ. ನಾಲ್ಕು ಬಾರಿ ಮುಖ್ಯಮಂತ್ರಿ, ಒಮ್ಮೆ ಉಪಮುಖ್ಯಮಂತ್ರಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಅವರಿಗೆ ಎಲ್ಲ ಅವಕಾಶ ನೀಡಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬದಲಾವಣೆಯ ಸುಳಿವು ನೀಡಿದರು.

ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಜನ ಸೇವೆ ಮಾಡುವ ಅವಕಾಶ ಯಡಿಯೂರಪ್ಪನವರಿಗೆ ಸಿಕ್ಕಿದೆ. ವಿರೋಧ ಪಕ್ಷದ ನಾಯಕರಾಗಿ, 4 ಸಲ ಪಕ್ಷದ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷದಲ್ಲಿ ಇಷ್ಟೊಂದು ಅವಕಾಶ ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದರು.

ಸಿಟಿ ರವಿ ಅವರ ಮಾತಿನ ಹಿಂದಿನ ಅರ್ಥ, ಇಲ್ಲಿವರೆಗೆ ಯಡಿಯೂರಪ್ಪನವರಿಗೆ ಬಿಜೆಪಿ ಪಕ್ಷ ಎಲ್ಲಾವನ್ನೂ ಅವಕಾಶ ಕೊಟ್ಟಿದೆ. ಇನ್ನೂ ಎಷ್ಟು ಕೊಡಬೇಕು. ವಯಸ್ಸಾಗಿದೆ. ಈಗ ಬದಲಾವಣೆ ಕಾಲ ಎಂದು ಪರೋಕ್ಷವಾಗಿ ಹೇಳಿದಂತಿವೆ.

click me!