'ಕೊತ್ವಾಲ್ ರಾಮಚಂದ್ರ ಶಿಷ್ಯರಿಂದ ತೊಂದರೆಯಾಗದಿರಲಿ ಅಂತ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಿಸಿದ್ದೇವೆ'

By Ramesh BFirst Published Sep 17, 2022, 6:35 PM IST
Highlights

ಕೊತ್ವಾಲ್ ರಾಮಚಂದ್ರರ ಶಿಷ್ಯರಿಂದ ತೊಂದರೆಯಾಗದಂತೆ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಿಸಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕಮಗಳೂರು, (ಸೆಪ್ಟೆಂಬರ್.17): ಸರ್ಕಾರದವರು ನನಗೆ ಯಾಕೆ ಭದ್ರತೆ ಹೆಚ್ಚಿಸಿದ್ದಾರೆ ಎನ್ನುವುದು ಗೊತ್ತಿಲ್ಲ ಎನ್ನುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂದು(ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಅವರಿಗೆ ಯಾವುದೇ ಥ್ರೆಟ್ ಇಲ್ಲದೆ ಇರಬಹುದು. ಕೊತ್ವಾಲ್ ರಾಮಚಂದ್ರರ ಶಿಷ್ಯರು ರಾಜಕಾರಣದಲ್ಲಿ ಇದ್ದಾರೆ. ಅವರಿಂದ ಯಾರಿಗೂ ತೊಂದರೆ ಆಗಬಾರದು. ಹಾಗಾಗಿ, ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಿಸಿದ್ದೇವೆ ಎಂದು ವ್ಯಂಗ್ಯವಾಡಿದರು.

ಮೊಟ್ಟೆ ಎಸೆತ ಪ್ರಕರಣ: ಸಿದ್ದರಾಮಯ್ಯ ಭದ್ರತೆ ಹೆಚ್ಚಿಸಿದ ಪೊಲೀಸ್‌ ಇಲಾಖೆ

ಸಿದ್ದರಾಮಯ್ಯ ಹೇಳಿದ್ದೇನು?
ನನಗೆ ಭದ್ರತೆ ಹೆಚ್ಚಿಸಿರುವುದು ನನಗೆ ಗೊತ್ತಿಲ್ಲ. ಸರ್ಕಾರದವರು ಮಾಡಿದ್ದಾರೆ, ಯಾಕ್ ಮಾಡಿದ್ದಾರೆ ಗೊತ್ತಿಲ್ಲ.
ನನಗೆ ಥ್ರೆಟ್   ಇತ್ತು ಅಂತಾ ಯಾರೋ ಹೇಳಿದ್ರು. ಥ್ರೆಟ್  ಇದೆ ಅಂತಾ ಸರ್ಕಾರ ಅವರೆ ಮಾಡಿದ್ದಾರೆ. ನಾನು ಏನು ಹೇಳಿಲ್ಲ, ನನಗೆ ಏನು ಗೊತ್ತಿಲ್ಲ ಎಂದು ಮಂಡ್ಯದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. 

ಸಿದ್ದರಾಮಯ್ಯನವರಿಗೆ ಭದ್ರತೆ ಹೇಗಿದೆ?
ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಬೆಂಗಾವಲು ಪಡೆಯನ್ನು ಹೆಚ್ಚಿಸಿ ಪೊಲೀಸ್‌ ಇಲಾಖೆ ಆದೇಶಿಸಿದೆ. ಸಿದ್ದರಾಮಯ್ಯಗೆ ಎಸ್ಕಾರ್ಟ್ ಹೆಚ್ವಿಸಿ ಬೆಂಗಳೂರು ಪೊಲೀಸರು ಆದೇಶಿಸಿದ್ದಾರೆ. ಅಧಿಕಾರಿ, ಸಿಬ್ಬಂದಿಗಳು ಸೇರಿ 21 ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮೂರು ಪಾಳಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ. ಘಟನೆ ಬಳಿಕ ಪ್ರತಿ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲೆ ಹೋದರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಏನಾದ್ರು ಅವಘಡ ಸಂಭವಿದರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲು ಸಹ ತಿಳಿಸಲಾಗಿದೆ.  

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸದ್ಯ ಯಾವುದೇ ಅಧಿಕೃತ ಉನ್ನತ ಶ್ರೇಣಿಯ ಭದ್ರತೆಯನ್ನು ನೀಡಲಾಗಿಲ್ಲವಾದರೂ ಜಿಲ್ಲೆಗಳಿಗೆ ಪ್ರವಾಸ ಮಾಡುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆಯನ್ನುಒದಗಿಸಲಾಗಿದೆ.

click me!