2 ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಪ್ರಧಾನ ಮಂತ್ರಿಗಾಗಲಿ, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಿಗಾಗಲಿ ಬೇಡಿಕೆ ಇಡಲೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.
ಚಿಕ್ಕಮಗಳೂರು (ಜೂ.21): 2 ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಪ್ರಧಾನ ಮಂತ್ರಿಗಾಗಲಿ, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಿಗಾಗಲಿ ಬೇಡಿಕೆ ಇಡಲೇ ಇಲ್ಲ. ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸಪಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‌ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ ಜೂ.9ರಂದು ಪತ್ರ ಬರೆದಿದೆ.
ಇದಕ್ಕೆ ಜೂ.12ರಂದು ಅನುಮತಿಯನ್ನೂ ನೀಡಲಾಗಿದೆ. ಜೂ.13 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ ಎಫ್‌ಸಿಐ ಕೇಂದ್ರ ಕಚೇರಿಗೆ ಎಂಓಎಸ್‌ಎಸ್ ಕೋಟಾದಡಿ ಅಕ್ಕಿ ಮಾರಾಟವನ್ನು ನಿಬಂರ್‍ಧಿಸಿರುವ ಬಗ್ಗೆ ಆದೇಶ ಬಂದಿದೆ. ಜೂ.8ರಂದು ನಡೆದ ಸಭೆಯಲ್ಲೇ ಇದು ತೀರ್ಮಾನವಾಗಿದೆ ಎಂದರು. ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ, ಬದಲಿಗೆ ಎಫ್‌ಸಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರ. ಅಂದರೆ, ಇದು ರಾಜ್ಯ ಸರ್ಕಾರ ಎಫ್‌ಸಿಐಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿಯೇ ತೆಗೆದುಕೊಂಡ ತೀರ್ಮಾನ ಎಂದು ಸ್ಪಷ್ಟಪಡಿಸಿದರು.
undefined
ಕಾಂಗ್ರೆಸ್ಸಿಗರು ಕೆಲಸ ಮಾಡಲು ನಾಲಾಯಕ್: ಆರ್.ಅಶೋಕ್
ನಮ್ಮ ರಕ್ಷಣೆಗೆ ಸರ್ಕಾರ ಬರಲ್ಲ: ಬಿಜೆಪಿ ಅಧಿಕಾರದ ಅವಧಿಯಲ್ಲಿ ತಿದ್ದುಪಡಿ ಮಾಡಲಾಗಿದ್ದ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಖಂಡಿಸಿದ್ದಾರೆ. ಜತೆಗೆ, ನಮ್ಮ ರಕ್ಷಣೆಗೆ ಸರ್ಕಾರ ಬರುವುದಿಲ್ಲ, ನಾವೇ ನೇರ ಆ್ಯಕ್ಷನ್‌ಗೆ ಇಳಿಯಬೇಕು ಎಂದು ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವರಕ್ಷಣೆಗೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ನಾವು ಯೋಚನೆ ಮಾಡಬೇಕು. ಸ್ವರಕ್ಷಣೆಗೆ ಕೆಲವರು ದೊಣ್ಣೆ, ಇನ್ನೂ ಕೆಲವರು ಪರವಾನಗಿ ಇರುವ ಪಿಸ್ತೂಲ್ ಇಟ್ಟುಕೊಂಡಿರುತ್ತಾರೆ ಎಂದು ಸೂಚ್ಯವಾಗಿ ತಿಳಿಸಿದರು.
ನಾವು ಈ ಮತಾಂತರದಿಂದ ನಮ್ಮ ಸಮಾಜವನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವ ಕುರಿತು ಮಠಾಧೀಶರು ಚರ್ಚಿಸಬೇಕು. ಸಾಮ, ದಾನ, ಭೇದ, ದಂಡ ನಾಲ್ಕನ್ನೂ ಬಳಸಿ ಮರು ಮತಾಂತರಕ್ಕೆ ಮುಂದಾಗಬೇಕು ಎಂದು ಹೇಳಿದರು. ಈ ಸರ್ಕಾರ ನಮ್ಮ ಪರವಾಗಿಲ್ಲ, ಕಳ್ಳರ ಪರ, ಮತಾಂತರದ ಪರವಾಗಿದೆ. ನಮ್ಮ ಸಮಾಜ, ಸಮುದಾಯವನ್ನು ರಕ್ಷಣೆ ಮಾಡಿಕೊಳ್ಳಲು ನಾವೇ ಸ್ವತಃ ಕ್ರಮ ಕೈಗೊಳ್ಳಬೇಕು. ನಾವೇ ನಮ್ಮ ಆತ್ಮರಕ್ಷಣೆಗೆ ಮುಂದಾಗಲೇಬೇಕಾದ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ಸಿಗರು ಮತಾಂತರ ಮಾಡುವ ನೀತಿ ಪರವಾಗಿದ್ದಾರೆ ಎಂದು ಆರೋಪಿಸಿದರು.
ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು
ಮನೆಗೆ ಬೀಗ ಹಾಕಿ ಕಳ್ಳರಿಂದ ರಕ್ಷಣೆ ಪಡೆಯುತ್ತೇವೆ. ನಾವು ಹಾಕಿದ ಮತಾಂತರ ನಿಷೇಧದ ಕಾಯ್ದೆಯ ಬೀಗವನ್ನು ಕಾಂಗ್ರೆಸ್ಸಿಗರು ತೆಗೆದಿದ್ದಾರೆ. ಹೀಗಾಗಿ ಮನೆಯ ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ಮನೆಯ ಯಜಮಾನನದ್ದು. ಇಂದು ವಿವಿಧ ಸಮುದಾಯದ ಮುಖಂಡರು, ಮಠಾಧೀಶರು ಕುಳಿತು ಆಲೋಚನೆ ಮಾಡಬೇಕು. ದೇಶ, ಹಿಂದೂ ಸಮಾಜ ಉಳಿಸಿಕೊಳ್ಳಲು ಮಠಾಧೀಶರು, ಸಮಾಜದ ಮುಖಂಡರು, ಜಗದ್ಗುರುಗಳು, ಸನ್ಯಾಸಿಗಳ ಮಹಾಪಂಚಾಯತ್ ಕರೆಯಬೇಕು ಎಂದರು.