ಸಿಂಧೂರ ಇಡುವವರು ಕಾಂಗ್ರೆಸ್‌ಗೆ ಮತ ನೀಡಬಾರದು. ಒಬ್ಬ ಮಾಜಿ ಮುಖ್ಯಮಂತ್ರಿಗೆ ಸಿಂಧೂರ ಕಂಡರೆ ಆಗುವುದಿಲ್ಲ. ಅವರಿಗೆ ಸಿಂಧೂರ ಹಾಗೂ ಕೇಸರಿ ಪೇಟ ಅಂದರೆ ಅಲರ್ಜಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ (ಮಾ.09): ಸಿಂಧೂರ ಇಡುವವರು ಕಾಂಗ್ರೆಸ್‌ಗೆ ಮತ ನೀಡಬಾರದು. ಒಬ್ಬ ಮಾಜಿ ಮುಖ್ಯಮಂತ್ರಿಗೆ ಸಿಂಧೂರ ಕಂಡರೆ ಆಗುವುದಿಲ್ಲ. ಅವರಿಗೆ ಸಿಂಧೂರ ಹಾಗೂ ಕೇಸರಿ ಪೇಟ ಅಂದರೆ ಅಲರ್ಜಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಸಿಂಧೂರ ಇಡುವ ನೀವು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಮತ ನೀಡಬೇಡಿ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ಹರಿದು ಬಿದ್ದ ಬೃಹತ್ ಮಾಲೆ: ಇದೆ ವೇಳೆ, ಯಾತ್ರೆ ಪ್ರಯುಕ್ತ ನಿಪ್ಪಾಣಿಯಲ್ಲಿ ಬೃಹತ್ ರೋಡ್ ಶೋ ಕೂಡ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ನಾಯಕರಿಗೆ ಹಾರ ಹಾಕಲು ಬೃಹತ್ ಹೂವಿನ ಹಾರ ತಯಾರಿಸಲಾಗಿತ್ತು. ಅದನ್ನು ಕ್ರೇನ್ ಬಳಸಿ ಹಾಕಲಾಗುತ್ತಿತ್ತು. ಆದರೆ, ಹಾಕುವ ವೇಳೆ ಹೂವಿನ ಹಾರ ತುಂಡಾಯಿತು. ಆದರೆ, ಯಾವುದೇ ಅಪಾಯ ಸಂಭವಿಸಿಲ್ಲ.
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಕೋಟೆ ಮೇಲೆ ಬಿಜೆಪಿ ಕಣ್ಣು
140ಕ್ಕೂ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳಿಗೆ ಜಯ: ಬರುವ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ಸೇರಿ 140ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಮಾಂಜರಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪಯಾತ್ರೆ ಸಮಾರಂಭವನ್ನುದ್ದೇಶಿ ಮಾತನಾಡಿದ ಅವರು, ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದು, ಹೆಚ್ಚಿನ ಸೀಟುಗಳನ್ನು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಈಗಾಗಲೇ ತ್ರೀಪುರಾ, ನಾಗಾಲ್ಯಾಂಡ್ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಹಲವು ನಾಯಕರು ತಮ್ಮ ಠೇವಣಿಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಪ್ರವಾಹಕ್ಕೆ ತುತ್ತಾಗಿ ಮನೆ ಕಳೆದುಕೊಂಡ ಕೃಷ್ಣಾ ತೀರದ ಜನತೆಗೆ ತಲಾ .5 ಲಕ್ಷಗಳ ಅನುದಾನ, ರೈತರಿಗೆ ಕೃಷಿ ಸಮ್ಮಾನ ಯೋಜನೆಯಡಿ ತಲಾ .10 ಸಾವಿರ ಹಾಗೂ ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಶಿಷ್ಯವೇತನ ಮಂಜೂರು ಮಾಡಿದ ಏಕೈಕ್ ಪಕ್ಷ ಬಿಜೆಪಿ ಅದಕ್ಕಾಗಿ ನಾವು ಬಿಜೆಪಿ ಸಂಕಲ್ಪಯಾತ್ರೆಯ ಮೂಲಕ ತಮ್ಮ ಮುಂದೆ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವಂತೆ ಮಾಡಿ ಎಂದು ಕೇಳಲು ಬಂದಿದ್ದೇವೆ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಚಿಕ್ಕೋಡಿ ತಾಲೂಕಿನ ಮಾಂಜರಿ, ಇಂಗಳಿ ಹಾಗೂ ಯಡೂರ ಗ್ರಾಮಗಳಲ್ಲಿ ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡ 3,546 ಜನ ಫಲಾನುಭವಿಗಳಿಗೆ ತಲಾ .5 ಲಕ್ಷಗಳನ್ನು ಬಿಡುಗಡೆ ಮಾಡಿದೆ. ಡಿಗ್ಗೆವಾಡಿ ಬ್ಯಾರೇಜ್‌ಗೆ .70 ಕೋಟಿ, ಕಲ್ಲೋಳ-ಯಡೂರ ಬ್ಯಾರೇಜಿಗೆ .35 ಕೋಟಿ ಹಾಗೂ ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಲಕ್ಷ್ಮೇ ಏತ ನೀರಾವರಿ ಯೋಜನೆಗೆ .203 ಕೋಟಿಗಳನ್ನು ಮೊದಲನೇ ಹಂತದ ಕಾಮಗಾರಿಗೆ ಬಿಡುಗಡೆ ಮಾಡಿದೆ ಎಂದರು.
ಇಂದು ಶಾಸಕ ಮಾಡಾಳು ವಿಚಾರಣೆ: ಕೋರ್ಟ್ ಸೂಚನೆ ಮೇರೆಗೆ ವಿಚಾರಣೆಗೆ ಹಾಜರು
ಸಚಿವೆ ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಶಾಸಕರಾದ ರಮೇಶ ಜಾರಕಿಹೊಳಿ, ಮಾಜಿ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ, ಲಕ್ಷ್ಮಣ ಸವದಿ, ರವಿಕುಮಾರ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಅರುಣ ಶಹಾಪುರ, ಶಶಿಕಾಂತ ನಾಯಕ್, ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಉಜ್ವಲಾ ಬಡವನಾಚೆ, ಶಾಂಭವಿ ಅಶ್ವಥಪೂರ, ಸತೀಶ ಅಪ್ಪಾಜಿಗೋಳ, ದುಂಡಪ್ಪ ಬೆಂಡವಾಡೆ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುರೇಶ ಉಕ್ಕಲಿ ನಿರೂಪಿಸಿದರು. ಸಂಜಯ ಪಾಟೀಲ ವಂದಿಸಿದರು.