ಶಿಕ್ಷಣ ವಿರೋಧಿ, ವಿದ್ಯಾರ್ಥಿಗಳಿಗೆ ದ್ರೋಹ ಬಗೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾದರೆ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶಿಕ್ಷಕರುಗಳಲ್ಲಿ ವಿನಂತಿಸಿದರು.
ಚಿತ್ರದುರ್ಗ (ಮೇ.26): ಶಿಕ್ಷಣ ವಿರೋಧಿ, ವಿದ್ಯಾರ್ಥಿಗಳಿಗೆ ದ್ರೋಹ ಬಗೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾದರೆ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶಿಕ್ಷಕರುಗಳಲ್ಲಿ ವಿನಂತಿಸಿದರು. ಚಳ್ಳಕೆರೆ ರಸ್ತೆಯಲ್ಲಿರುವ ವಿನಾಯಕ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರ ಪರ ಹಮ್ಮಿಕೊಳ್ಳಲಾಗಿದ್ದ ಮತ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರ ಬಲ ಹೊಂದಿರುವ ವೈ.ಎ.ನಾರಾಯಣಸ್ವಾಮಿ ಹಾಗೂ ಹಣ ಬಲವುಳ್ಳ ಕಾಂಗ್ರೆಸ್ ಅಭ್ಯರ್ಥಿ ನಡುವೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಒಂದೊಂದು ಮತಕ್ಕೂ ಪ್ರಾಮುಖ್ಯತೆಯಿದೆ. ಹಾಗಾಗಿ ಪ್ರಥಮ ಸುತ್ತಿನಲ್ಲಿಯೇ ವೈ.ಎ.ಎನ್. ಗೆಲ್ಲಿಸಿ ತುಘಲಕ್ ದರ್ಬಾರ್ ನಡೆಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಂದೇಶ ಕಳಿಸಬೇಕಿದೆ ಎಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು. ಅನುದಾನಿತ ಶಾಲೆಗಳು ಮುಚ್ಚುತ್ತಿವೆ. ಓಪಿಎಸ್. ಇನ್ನೂ ಕೈಸೇರಿಲ್ಲ. ಆತ್ಮನಿರ್ಭರ, ಭಾರತವನ್ನು ವಿಶ್ವಗುರುವಾಗಿಸಲು ಪ್ರಧಾನಿ ಮೋದಿರವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಅದು ಬೇಕಿಲ್ಲ.
undefined
ಹರೀಶ್ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿಎಂ ಸಿದ್ದರಾಮಯ್ಯ
ಶಿಕ್ಷಣದ ಜೊತೆ ರಾಜಕೀಯವಾಟವಾಡುತ್ತಿದೆ. ಶಿಕ್ಷಕರಿಗೆ ಬರೆ ಎಳೆಯುವ ನೀತಿ ಅನುಸರಿಸುತ್ತಿರುವ ಕನ್ನಡ ಬಾರದ ಶಿಕ್ಷಣ ಸಚಿವರನ್ನು ನಾಡಿಗೆ ಕೊಟ್ಟಂತ ಅಪಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲಬೇಕು ಎಂದು ತರಾಟೆ ತೆಗೆದುಕೊಂಡರು. ಮಾಜಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಹದಿನೆಂಟು ವರ್ಷಗಳಿಂದಲೂ ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗಿರುವ ವೈ.ಎ.ನಾರಾಯಣಸ್ವಾಮಿರವರಿಗೆ ಈ ಚುನಾವಣೆ ಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ಕೋರಿದರು. ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾಲ್ಕನೆ ಬಾರಿಗೆ ಸ್ಪರ್ಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ಕಷ್ಟ-ಸುಖದಲ್ಲಿ ಮೊದಲಿನಿಂದಲೂ ಭಾಗಿಯಾಗುತ್ತ ಬರುತ್ತಿದ್ದಾರೆ.
ಶಿಕ್ಷಕರುಗಳಿಗೆ ನಿಜವಾಗಿಯೂ ಶಕ್ತಿ ಬರಬೇಕಾಗಿರುವುದರಿಂದ ಈ ಚುನಾವಣೆ ಅತ್ಯಂತ ಮಹತ್ವದ್ದು, ಹಣ ಬಲವೋ ಶಿಕ್ಷಕರು ಬಲವೋ ಎನ್ನುವುದನ್ನು ನೀವುಗಳು ತೀರ್ಮಾನಿಸಬೇಕೆಂದು ಶಿಕ್ಷಕರುಗಳಲ್ಲಿ ಕೇಳಿಕೊಂಡರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಐದನೆ ವೇತನ ಆಯೋಗ ಒಪ್ಪಿಕೊಂಡಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು. ಕಾಂಗ್ರೆಸ್ ಸರ್ಕಾರ ಎಂದಿಗೂ ಶಿಕ್ಷಕರುಗಳ ಪರವಾಗಿಲ್ಲ. ನೌಕರರ ವಿರೋಧಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಏಳನೆ ವೇತನ ಆಯೋಗವನ್ನು ಒಪ್ಪಿಕೊಂಡಿಲ್ಲ. ಬಡ ಮಕ್ಕಳು, ನೌಕರರ ಪರವಾಗಿರುವ ವೈ.ಎ.ನಾರಾಯಣಸ್ವಾಮಿರವರನ್ನು ಗೆಲ್ಲಿಸಿ ಎಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
AI ಇಂಟಲಿಜೆನ್ಸ್‌ನನ್ನು ಏಲಿಯನ್ ಇಂಟೆಲಿಜೆನ್ಸ್ ಎಂದು ಕರೆದ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್!
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಶಿಕ್ಷಕರುಗಳಲ್ಲಿ ಮತ ಯಾಚಿಸಿ ಮಾತನಾಡುತ್ತ ಕಳೆದ ಹದಿನೆಂಟು ವರ್ಷಗಳಿಂದಲೂ ಯಾವುದೇ ಕಪ್ಪು ಚುಕ್ಕೆಯಿಲ್ಲದಂತೆ ನಿಮ್ಮ ಸೇವೆ ಮಾಡಿದ್ದೇನೆ. ಅತಿ ಹೆಚ್ಚು ಅಭಿಮಾನ, ನಂಬಿಕೆ, ಪ್ರೀತಿ ತೋರಿದ್ದೀರ, ಕೊಟ್ಟ ಮಾತಿಗೆ ತಪ್ಪಿಲ್ಲ. ನೀವುಗಳು ಹೇಳಿದ ಕೆಲಸ ಮಾಡಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ ವಿಧಾನಪರಿಷತ್‍ಗೆ ಕಳಿಸಿಕೊಡಿ. ನಿಮ್ಮ ಸಮಸ್ಯೆಗಳಿಗೆ ಸದಾ ಹೋರಾಡುತ್ತೇನೆಂದು ಭರವಸೆ ನೀಡಿದರು. ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿ, ಮೂರು ಬಾರಿ ಗೆದ್ದು ನಿಮ್ಮ ಸೇವೆ ಮಾಡಿರುವ ವೈ.ಎ.ನಾರಾಯಣಸ್ವಾಮಿರವರನ್ನು ನಾಲ್ಕನೆ ಬಾರಿಗೆ ಗೆಲ್ಲಿಸಿ. ಐದು ಜಿಲ್ಲೆಗಳಲ್ಲಿ ಲೀಡ್ ಕೊಡಿ ಎಂದು ಶಿಕ್ಷಕರುಗಳಲ್ಲಿ ಕೋರಿದರು.