ಸಿದ್ದರಾಮಯ್ಯಗೆ ಕಪ್ಪು ಬಾವುಟದ ಸ್ವಾಗತ: ಹಿಂದೂ ವಿರೋಧಿ ಸಿದ್ದು ಕೊಡಗಿಗೆ ಕಾಲಿಡಲು ಅಯೋಗ್ಯ, ಜೋಯಪ್ಪ

Published : Aug 18, 2022, 12:19 PM ISTUpdated : Aug 18, 2022, 05:27 PM IST
ಸಿದ್ದರಾಮಯ್ಯಗೆ ಕಪ್ಪು ಬಾವುಟದ ಸ್ವಾಗತ: ಹಿಂದೂ ವಿರೋಧಿ ಸಿದ್ದು ಕೊಡಗಿಗೆ ಕಾಲಿಡಲು ಅಯೋಗ್ಯ, ಜೋಯಪ್ಪ

ಸಾರಾಂಶ

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟದ ಸ್ವಾಗತ, ಸಿದ್ದುಗೆ ಸಾವರ್ಕರ್ ಭಾವಚಿತ್ರ ನೀಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು       

ಕೊಡಗು(ಆ.18):  ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸ್ವಾಗತ ಕೋರಿದ್ದಾರೆ. 

ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿದ್ದ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಮಡಿಲಲ್ಲಿಟ್ಟರಲ್ಲದೇ  ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಎಂಬ ಕೆಟ್ಟಪದ ಕೇಳಿ ಸಾಕಾಗಿ ಹೋಗಿದೆ: ಈಶ್ವರಪ್ಪ

ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ  ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ  ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭ ಪೋಲೀಸರು ಬಿಗಿ ಬಂದೋಬಸ್ತ್  ವ್ಯವಸ್ಥೆಗೊಳಿಸಿ ಸಿದ್ದರಾಮಯ್ಯರ  ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ