
ಹುಬ್ಬಳ್ಳಿ (ಜು.03): ನಾನು ನೂತನ ಸಚಿವ ಸಂಪುಟದಲ್ಲಿ ಇರುವುದಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ನಾನು ರಾಜ್ಯಪಾಲ ಆಗುತ್ತೇನೆ ಎಂಬುದೆಲ್ಲ ಸುಮ್ಮನೆ ಹರಿದಾಡುವ ಮಾತುಗಳು. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿದ್ದಾರೆ.
ಬೊಮ್ಮಾಯಿ ಸರ್ಕಾರದಲ್ಲಿ ನಮ್ಮ ಜಿಲ್ಲೆಯ ನಾಲ್ವರು ಶಾಸಕರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಕೊಡಲೇಬೇಕೆಂದು ಕೇಳಿದ್ದೇನೆ. ಸಿನಿಯಾರಿಟಿ ಆಧರಿಸಿ ಸ್ಥಾನ ಸಿಗುತ್ತದೆ ಎಂದು ಹೇಳಿದ್ದಾರೆ.
ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್
ನಾನು ಅಧಿಕಾರದಲ್ಲಿ ಇದ್ದುದು ಅಲ್ಪ ಸಮಯ ಮಾತ್ರ. ಮುಖ್ಯಮಂತ್ರಿಯಾಗಿ ಇದ್ದದ್ದು 10 ತಿಂಗಳು, ಕೈಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ಕೆಲವೇ ತಿಂಗಳು ಮಾತ್ರ. ಅಷ್ಟರಲ್ಲೇ ಸಾಕಷ್ಟುಕೆಲಸ ಮಾಡಿದ್ದೇನೆ.
ಒಂದು ವೇಳೆ ಯಾವುದಾದರೂ ಅಧಿಕಾರದಲ್ಲಿ ಪೂರ್ತಿ ಐದು ವರ್ಷ ಇದ್ದಿದ್ದರೆ ಪರಿಪೂರ್ಣ ಬದಲಾವಣೆ ಮಾಡಲು ಸಾಧ್ಯವಾಗುತ್ತಿತ್ತು ಎಂದಿದ್ದಾರೆ. ಅಧಿಕಾರ ಇದ್ದಾಗ ಕೆಲಸ ಮಾಡಿ ತೋರಿಸಿದ್ದೇನೆ. ಅಧಿಕಾರ ಇಲ್ಲದಿದ್ದರೂ ನಾನು ಕೆಲಸ ಮಾಡಿಸುತ್ತೇನೆ. ಮುಂದೆ ಯಾರೇ ಸಚಿವರಾದರೂ ಅವರಿಂದ ಕೆಲಸ ಮಾಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.