ಸುರಪುರ: ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

By Kannadaprabha NewsFirst Published Feb 26, 2023, 9:30 PM IST
Highlights

ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಕಾಂಗ್ರೆಸ್‌ ಪಕ್ಷದ ಅವಧಿಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆ. ಎಲ್ಲಾ ಕಾರ್ಯಕರ್ತರು ಮುಂಬರುವ ದಿನಗಳಲ್ಲಿ ಪಕ್ಷವನ್ನು ವಿಜಯದತ್ತ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ. ಪಕ್ಷದ ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸಬೇಕು. 

ಸುರಪುರ(ಫೆ.26):  ಮತಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕರಿಗೆ ನೀಡುವ ಸಮಾನತೆ, ಜಾತ್ಯತೀತ ರಾಜಕಾರಣ, ಕಾಂಗ್ರೆಸ್‌ ನಾಯಕತ್ವ ಮೆಚ್ಚಿ ಹೊರಟ್ಟಿಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಗೊಂಡಿರುವುದು ನಾವೀನ್ಯ ಚೈತನ್ಯ ನೀಡಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಹೊರಟ್ಟಿಗ್ರಾಮದ ಬಿಜೆಪಿಯ ಹಲವಾರು ಮುಖಂಡರು, ಕಾರ್ಯಕರ್ತರನ್ನು ಕಾಂಗ್ರೆಸ್‌ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆ ಶೂನ್ಯವಾಗಿದೆ. ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಸಮಾಜದಲ್ಲಿ ಅಶಾಂತಿ ವಾತಾವರಣ ಉಂಟು ಮಾಡುತ್ತಿದೆ ಎಂದು ದೂರಿದರು.

Latest Videos

ಯಾದಗಿರಿ ವಾಂತಿಭೇದಿ ಪ್ರಕರಣ: ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ, ಸಚಿವ ಚವ್ಹಾಣ್‌

ಕೋಮು ಸೌಹಾರ್ಧತೆಗಳಿಗೆ ಧಕ್ಕೆಯನ್ನುಂಟು ಮಾಡುವ ಹೇಳಿಕೆಗಳನ್ನು ನೀಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಹುಣಸಗಿ ಮತ್ತು ಸುರಪುರ ಅಭಿವೃದ್ಧಿಯಿಂದ ವಿಮುಖವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಕಾಂಗ್ರೆಸ್‌ ಪಕ್ಷದ ಅವಧಿಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆ. ಎಲ್ಲಾ ಕಾರ್ಯಕರ್ತರು ಮುಂಬರುವ ದಿನಗಳಲ್ಲಿ ಪಕ್ಷವನ್ನು ವಿಜಯದತ್ತ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ. ಪಕ್ಷದ ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.

ರಾಜಾ ವೇಣುಗೋಪಾಲ ನಾಯಕ, ಕಾಂಗ್ರೆಸ್‌ ತಾಲೂಕಾಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಹನುಮಂತರಾಯ ಪೂಜಾರಿ, ಜಟ್ಟೆಪ್ಪ ಪೂಜಾರಿ, ಗುಂಡಪ್ಪ ಗೆದ್ದಲಮರಿ, ಪ್ರದೀಪ್‌ ಇತರರಿದ್ದರು.

click me!