ಸಿದ್ದರಾಮಯ್ಯ ಬಜೆಟ್ ಮಂಡನೆ ಸೇರಿ ಹಲವು ಕಡೆ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಇಂಡಿಯಾ ಒಕ್ಕೂಟದಲ್ಲಿರುವ, ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನೆಂದು ಇಬ್ಬರೂ ತಿಳಿಸಬೇಕು ಎಂದು ಆಗ್ರಹಿಸಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
ತುಮಕೂರು(ಸೆ.06): ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಒಬ್ಬ ಅಯೋಗ್ಯ. ಅವರು ರಾಕ್ಷಸ ವಂಶದವರು ಅಂತ ಈಗ ಗೊತ್ತಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹರಿಹಾಯ್ದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಂಥ ಅಯೋಗ್ಯ ಮಂತ್ರಿ ತಮಿಳುನಾಡಿನಲ್ಲಿ ಇದ್ದಾರೆ ಅನ್ನುವುದು ಒಂದು ಹೇಳಿಕೆಯಿಂದ ಗೊತ್ತಾಗಿದೆ ಎಂದು ತಿಳಿಸಿದರು.
ಉದಯನಿಧಿ ಇನ್ನೂ ಬಚ್ಚಾ, ಕಣ್ಣು ತೆರೆದು ಜಗತ್ತು ನೋಡಿಲ್ಲ: ಮುತಾಲಿಕ್
ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರು ಬಹಳ ದೈವಭಕ್ತರು. ಇವರಲ್ಲಿ ಒಬ್ಬರು ನೊಣವಿನಕೆರೆ ಸ್ವಾಮೀಜಿ ಬಳಿ ಹೋಗಿ ಅವರ ಬಳಿ ಆಶೀರ್ವಾದ ಪಡೆಯುತ್ತಾರೆ. ಡಿ.ಕೆ.ಶಿವಕುಮಾರ್ ಇಡೀ ಜೀವನ ಅವರು ಹೇಳಿದಂತೆ ಕೇಳುತ್ತೇನೆ ಅಂತಾರೆ. ಸಿದ್ದರಾಮಯ್ಯ ಬಜೆಟ್ ಮಂಡನೆ ಸೇರಿ ಹಲವು ಕಡೆ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಇಂಡಿಯಾ ಒಕ್ಕೂಟದಲ್ಲಿರುವ, ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನೆಂದು ಇಬ್ಬರೂ ತಿಳಿಸಬೇಕು ಎಂದು ಆಗ್ರಹಿಸಿದರು.