'ಬಿಜೆಪಿ ಬಂದ ಮೇಲೆ ಕಳ್ಳಕಾಕರು ನಿರುದ್ಯೋಗಿ ಆಗಿದ್ದಾರೆ' : ಡಿಕೆಶಿಗೆ ಪರೋಕ್ಷ ಟಾಂಗ್

Published : Jan 25, 2021, 07:23 AM IST
'ಬಿಜೆಪಿ ಬಂದ ಮೇಲೆ ಕಳ್ಳಕಾಕರು ನಿರುದ್ಯೋಗಿ ಆಗಿದ್ದಾರೆ' : ಡಿಕೆಶಿಗೆ ಪರೋಕ್ಷ ಟಾಂಗ್

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಬಂದಮೇಲೆ ಕಳ್ಳರು ನಿರುದ್ಯೋಗಿಗಳಾಗಿದ್ದಾರೆ ಎಂದರು. 

ಕೊಪ್ಪಳ (ಜ.25): ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಳ್ಳಕಾಕರು, ಭ್ರಷ್ಟರು ನಿರುದ್ಯೋಗಿಗಳಾಗಿರುವುದು ನಿಜ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ. 

ಈ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಾವು ನಿರುದ್ಯೋಗಿಗಳಾಗಿದ್ದೇವೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ. 

ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ! ...

ಕೊಪ್ಪಳದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ  ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಇಂಥ ಕಳ್ಳಕಾಕರಿಗೆ ಉದ್ಯೋಗ ಇಲ್ಲದಂತಾಗಿರುವುದು ನಿಜ ಎಂದು ಕಟೀಲ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಕಳ್ಳರು ಎನ್ನುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅವರೆಲ್ಲಾ ಏನಾಗಿದ್ದಾರೆ ಎನ್ನುವುದು ಗೊತ್ತಿದೆ. ಜೈಲಿಗೆ ಹೋಗಿ ಬಂದಿಲ್ಲವೇ? ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೆಹಲಿಗೆ ಕರ್ನಾಟಕ ಕಾಂಗ್ರೆಸ್ ನಾಯಕರ ದಂಡು: ಸಿಡಬ್ಲ್ಯುಸಿ ಸಭೆಗೆ ಸಿಎಂ ಡಿಕೆಶಿ, ಸಿದ್ದರಾಮಯ್ಯ ಪ್ರಯಾಣ
ಇಡಿ ದಾಳಿ ಕೇಸ್ ದಿಲ್ಲಿಗೆ ಶಿಫ್ಟ್ ಸಾಧ್ಯತೆ ನಡುವೆ ಸಿಎಂ ರೇಸ್‌ನಿಂದ ದಿಢೀರ್ ಹಿಂದೆ ಸರಿದ್ರಾ ಜಾರಕಿಹೊಳಿ? ಮೈಸೂರಲ್ಲಿ ಅಚ್ಚರಿ ಹೇಳಿಕೆ