ಭಾರತ್‌ ಜೋಡೋ, ಕಾಂಗ್ರೆಸ್‌ ಚೋಡೋ: ನಿಜಗುಣರಾಜು ವ್ಯಂಗ್ಯ

By Kannadaprabha News  |  First Published Sep 17, 2022, 1:56 PM IST

ಬಿಜೆಪಿಯು 370 ವಿಧಿಯನ್ನು ತೆಗೆಯುವ ಮೂಲಕ ದೇಶವನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದೆ. ಉತ್ತರ ಭಾರತದಲ್ಲಿ ಕಾಂಗ್ರೆಸ್‌ ನಾಯಕರು ಪಕ್ಷ ಬಿಡುತ್ತಿದ್ದಾರೆ: ನಿಜಗುಣರಾಜು


ಚಾಮರಾಜನಗರ(ಸೆ.17):  ಕಾಂಗ್ರೆಸ್‌ ಪಕ್ಷವು ಒಂದೆಡೆ ಭಾರತ್‌ ಜೋಡೋ ಕಾರ್ಯಕ್ರಮ ಮಾಡುತ್ತಿದ್ದರೆ, ಮತ್ತೊಂದೆಡೆ ದೇಶದ ಉತ್ತರ ಭಾರತದಲ್ಲಿ ಕಾಂಗ್ರೆಸ್‌ ಚೋಡೋ ಆಗುತ್ತಿದೆ ಎಂದು ಕಾಡಾ ಅಧ್ಯಕ್ಷ ನಿಜಗುಣರಾಜು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ದೇಶವನ್ನು ಇಬ್ಬಾಗ ಮಾಡುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಸತ್ಯಕ್ಕೆ ದೂರ. ಸ್ವಾತಂತ್ರ್ಯ ನಂತರದಲ್ಲಿ ದೇಶವನ್ನು ವಿಭಜಿಸಿದವರು ಯಾರು ಎಂದು ಪ್ರಶ್ನಿಸಿದ ಅವರು ಒಂದು ದೇಶದಲ್ಲಿ 2 ಸಂವಿಧಾನ, 2 ಬಾವುಟ, 2 ಪ್ರಧಾನಿಗಳನ್ನು ಹುಟ್ಟು ಹಾಕಿದವರು ಯಾರು ಎಂದು ಪ್ರಶ್ನಿಸಿದರು.

Tap to resize

Latest Videos

undefined

Karnataka Politics: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಅಧಿಕಾರ ಸೋನಿಯಾಗೆ

ಬಿಜೆಪಿಯು 370 ವಿಧಿಯನ್ನು ತೆಗೆಯುವ ಮೂಲಕ ದೇಶವನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದೆ. ಉತ್ತರ ಭಾರತದಲ್ಲಿ ಕಾಂಗ್ರೆಸ್‌ ನಾಯಕರು ಪಕ್ಷ ಬಿಡುತ್ತಿದ್ದಾರೆ. ಕಾಂಗ್ರೆಸ್‌ ನಾಯಕರು ಇಲ್ಲ ಸಲ್ಲದ ಆರೋಪ ಮಾಡಿಕೊಂಡು ರಾಜಕಾರಣ ಮಾಡುವಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಪದೇ ಪದೇ ಸುಳ್ಳು ಹೇಳಿ, ಅದನ್ನೇ ನಿಜ ಮಾಡಲು ಹೊರಟಿದ್ದಾರೆ ಎಂದರು.

ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಧೂಳಿಪಟವಾಗುತ್ತಿದೆ. ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಅರ್‌. ಧ್ರುವನಾರಾಯಣ ಅವರನ್ನು ಕಾಂಗ್ರೆಸ್‌ ದುರಾಡಳಿತ ನೋಡಿ ಜನರು ಸೋಲಿಸಿದರು. ಕಾಂಗ್ರೆಸ್‌ ಪಕ್ಷವು ಅಖಂಡ ಭಾರತವನ್ನು ಹರಿದು ಹಂಚಿದರು. ಬಿಜೆಪಿಯು ಅಧಿಕಾರಕ್ಕೆ ಬಂದ ನಂತರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಿದೆ. ಪ್ರತಿ ಜಿಲ್ಲೆಗಳಲ್ಲೂ ಮೆಡಿಕಲ… ಕಾಲೇಜುಗಳನ್ನು ಪ್ರಾರಂಭಿಸಿತು. ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಎಸ್ಪಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ್‌, ಮುಖಂಡರಾದ ಕಿಲಗೆರೆ ಬಸವರಾಜು, ಸೂರ್ಯಕುಮಾರ್‌, ಶ್ರೀನಾಥ್‌, ಮಲಲೇದೇವರು, ರಂಗನಾಥ್‌ ಇದ್ದರು.
 

click me!