ಬಿಜೆಪಿ ಯುವ ನಾಯಕನ ಅಚ್ಚರಿ ನಿರ್ಧಾರ, ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ!

Published : Oct 24, 2023, 05:55 PM IST
ಬಿಜೆಪಿ ಯುವ ನಾಯಕನ ಅಚ್ಚರಿ ನಿರ್ಧಾರ, ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ!

ಸಾರಾಂಶ

ಬಿಜೆಪಿಯ ಯುವ ನಾಯಕ ಎಂದೇ ಗುರಿತಿಸಿಕೊಂಡಿರುವ, ಮಾಜಿ ಸಂಸದ, ಕೇಂದ್ರ ಸಚಿವ ನಾರಾಯಣ ರಾಣೆ ಪುತ್ರ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. 

ಮುಂಬೈ(ಅ.24) ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಲು ಸಜ್ಜಾಗಿದೆ. ಚುನಾವಣೆ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಯುವ ನಾಯಕ, ಮಾಜಿ ಸಂಸದ ನಿಲೇಶ್ ರಾಣೆ ಅಚ್ಚರಿ ನಿರ್ಧಾರ ತೆಗೆದುಕೊಂಡಿದ್ದಾರೆ. ಸಕ್ರಿಯ ರಾಜಾಕರಣದಿಂದ ನಿಲೇಶ್ ರಾಣೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಟ್ವಿಟರ್ ನಿಲೇಶ್ ರಾಣೆ ಟ್ವಿಟರ್ ಮೂಲಕ ಭಾವನಾತ್ಮ ಸಂದೇಶ ಹಂಚಿಕೊಂಡಿದ್ದಾರೆ.

ನಿಲೇಶ್ ರಾಣೆ ಕೇಂದ್ರ ಸಚಿವ ನಾರಾಯಣೆ ರಾಣೆ ಪುತ್ರ. 42ರ ಹರೆಯದ ನಿಲೇಶ್ ರಾಣೆ, ಬಿಜೆಪಿ ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಸೌಭಾಗ್ಯ ಎಂದಿದ್ದಾರೆ. ಇದೇ ವೇಳೆ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿರುವ ಹಿಂದೆ ಯಾವುದೇ ಕಾರಣಗಳಿಲ್ಲ. ಚುನಾವಣೆಗೆ ಸ್ಪರ್ಧಿಸುವುದು, ಆಡಳಿತದಲ್ಲಿ ಆಸಕ್ತಿ ಇಲ್ಲದ ಕಾರಣ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ನಿಲೇಶ ರಾಣೆ ಸ್ಪಷ್ಟಪಡಿಸಿದ್ದಾರೆ.

Sanjay Raut to Narayan Rane : ಬೆದರಿಕೆ ಹಾಕೋದ್ರಲ್ಲಿ ನಾವು ನಿಮ್ಮಪ್ಪ, ಎಚ್ಚರಿಕೆಯಿಂದಿರಿ!

ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ರಾಜಕೀಯದಲ್ಲಿ ಆಸಕ್ತಿ ಇಲ್ಲದ ಕಾರಣ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ. ಇದಕ್ಕೆ ಬೇರೆ ಕಾರಣಗಳಿಲ್ಲ. 2019 ಹಾಗೂ 2020ರಲ್ಲಿ ನನಗೆ ಪ್ರೀತಿ ನೀಡಿದ ಎಲ್ಲಾ ಜನತೆಗೆ ಕೃತಜ್ಞನಾಗಿದ್ದೇನೆ. ನನ್ನನ್ನು ಪ್ರೋತ್ಸಾಹಿಸಿ, ಬೆಂಬಲಿಸಿದ ನಿಮಗೆ ಚಿರಋಣಿ. ಬಿಜೆಪಿ ನಾಯಕರು ನನ್ನ ಮೇಲೆ ಇಟ್ಟ ಪ್ರೀತಿ, ನಂಬಿಕೆ, ಬಿಜೆಪಿಯಂತ ಅತೀ ದೊಡ್ಡ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಠ. ನಾನು ಸಣ್ಣವ. ಆದರೆ ರಾಜಕೀಯದಿಂದ ಬಹಳಷ್ಟು ಕಲಿತಿದ್ದೇನೆ. ಕೆಲವು ಸಹದ್ಯೋಗಿಗಳು ಕುಟುಂಬದ ಭಾಗವಾಗಿದ್ದಾರೆ. ಈ ಕುಟುಂಬಕ್ಕೆ ಜೀವನದಲ್ಲಿ ಯಾವಾಗಲೂ ಋಣಿಯಾಗಿದ್ದೇನೆ. ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲು ನಾನು ಆಸಕ್ತಿ ಹೊಂದಿಲ್ಲ. ಟೀಕೆಗಳು ಸಹಜ, ಟೀಕಿಸುತ್ತಾರೆ. ಆದರೆ ರಾಜಕೀಯ ನನ್ನ ಜೀವನ, ನನ್ನ ಸಮಯಕ್ಕೆ ಸರಿ ಹೊಂದುತ್ತಿಲ್ಲ. ಹೀಗಾಗಿ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಉದ್ದೇಶಪೂರ್ವಕವಾಗಿ ಕೆಲವರ ಮನಸ್ಸು ನೋಯಿಸಿದ್ದಕ್ಕೆ ಕ್ಷಮೆ ಇರಲಿ ಎಂದು ನಿಲೇಶ್ ರಾಣೆ ಭಾವನಾತ್ಮ ಪೋಸ್ಟ್ ಹಂಚಿಕೊಂಡಿದ್ದಾರೆ.

 

 

Maharashtra Politics: ಆದಿತ್ಯ ಠಾಕ್ರೆ ನೋಡಿ 'ಮಿಯಾಂವ್ ಮಿಯಾಂವ್' ಎಂದ ಬಿಜೆಪಿ ಶಾಸಕ!

2009ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ನಿಲೇಶ್ ರಾಣೆ ಸಂಸದರಾಗಿ ಆಯ್ಕೆಯಾಗಿದ್ದರು. ಮಹಾರಾಷ್ಟ್ರದ ರತ್ನಗಿರಿ ಸಿಂಧೂದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರಲ್ಲಿ ಬಿಜೆಪಿ ಸೇರಿಕೊಂಡ ನಿಲೇಶ್ ರಾಣೆ ಲೋಕಸಭೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ ಬಿಜೆಪಿಯ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ