
ಬೆಂಗಳೂರು[ನ.23): ಪ್ರಚಾರ ಕಾರ್ಯ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿ ಮತ್ತು ಮಗುವನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಮಾನವೀಯತೆ ಮರೆದಿದ್ದಾರೆ.
ಶುಕ್ರವಾರ ಮಧ್ಯಾಹ್ನ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಚಾರ ಕಾರ್ಯವನ್ನು ಮುಗಿಸಿ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಕನಕಪುರ ರಸ್ತೆಯಲ್ಲಿ ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿರುವುದನ್ನು ಕಂಡು ವಾಹನ ನಿಲ್ಲಿಸಿದರು.
ಅಲ್ಲಿ ಬೈಕ್‌ನಲ್ಲಿದ್ದ ದಂಪತಿ ಮತ್ತು ಮಗು ಗಾಯಗೊಂಡಿದ್ದರು. ಇದನ್ನು ಕಂಡ ಸಚಿವ ಆರ್.ಅಶೋಕ್ ಮತ್ತು ಅನರ್ಹ ಶಾಸಕ ಮುನಿರತ್ನ ಅವರು ತಕ್ಷಣ ಗಾಯಗೊಂಡವರನ್ನು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.