ಕನಕಗಿರಿ ಕ್ಷೇತ್ರದ ಬಿಜೆಪಿಯಲ್ಲಿ ಉಸಿರುಗಟ್ಟುವಂಥ ವಾತಾವರಣವಿದೆ. ಇನ್ನು ಈ ನಾಲ್ಕೂವರೆ ವರ್ಷಗಳಲ್ಲಿ ಬಿಜೆಪಿ ಮತ್ತು ಶಾಸಕ ಬಸವರಾಜ ದಢೇಸೂಗೂರು ಇವರಿಂದ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಗಳು ಹುಸಿಯಾಗಿವೆ: ರುದ್ರಗೌಡ
ಕಾರಟಗಿ(ಸೆ.15): ಬಿಜೆಪಿ ಮುಖಂಡ ಹಾಗೂ ಎಪಿಎಂಸಿ ಮಾಜಿ ಸದಸ್ಯ ರುದ್ರಗೌಡ ಪಾಟೀಲ್ ನಂದಿಹಳ್ಳಿ ಅವರು ಬಿಜೆಪಿ ತೊರೆದು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರುದ್ರಗೌಡ ಪಾಟೀಲ್ ನಂದಿಹಳ್ಳಿ ಸೇರಿದಂತೆ ಅವರ ಆಪ್ತರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಅಮರೇಗೌಡ ಭಯ್ಯಾಪುರ ಮತ್ತು ವಿಧಾನಪರಿಷತ್ ಸದಸ್ಯ ಶರಣೇಗೌಡ ಭಯ್ಯಾಪುರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಕನಕಗಿರಿ ಕ್ಷೇತ್ರದ ಬಿಜೆಪಿಯಲ್ಲಿ ಉಸಿರುಗಟ್ಟುವಂಥ ವಾತಾವರಣವಿದೆ. ಇನ್ನು ಈ ನಾಲ್ಕೂವರೆ ವರ್ಷಗಳಲ್ಲಿ ಬಿಜೆಪಿ ಮತ್ತು ಶಾಸಕ ಬಸವರಾಜ ದಢೇಸೂಗೂರು ಇವರಿಂದ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಗಳು ಹುಸಿಯಾಗಿದ್ದು, ಅವರಲ್ಲಿ ದೂರದೃಷ್ಟಿಯ ಕೊರತೆ ಎದ್ದು ಕಾಣುತ್ತಿದ್ದರಿಂದ ತಕ್ಷಣವೇ ಎಚ್ಚೆತ್ತು ಮರಳಿ ಕಾಂಗ್ರೆಸ್ ಸೇರಲು ನಿರ್ಧರಿಸಿದೆ ಎಂದು ರುದ್ರಗೌಡ ನಂದಿಹಳ್ಳಿ ತಿಳಿಸಿದ್ದಾರೆ.
undefined
Mandya: ಜೆಡಿಎಸ್ ನಿರ್ದೇಶನದಂತೆ ಜಿಲ್ಲೆಯಲ್ಲಿ ಆಡಳಿತ: ಚಲುವರಾಯಸ್ವಾಮಿ
ಈ ವೇಳೆ ಕಾಂಗ್ರೆಸ್ ಮುಖಂಡರಾದ ಕೆ. ಸಿದ್ದನಗೌಡ, ಬಿ. ಶರಣಯ್ಯಸ್ವಾಮಿ, ಬಸಯ್ಯಸ್ವಾಮಿ ಹೇರೂರು, ತಾಪಂ ಮಾಜಿ ಅಧ್ಯಕ್ಷ ವಿರುಪಾಕ್ಷಗೌಡ ಹೇರೂರು, ವಿಜಯಕುಮಾರ ಕೋಲ್ಕಾರ್ ಸೇರಿದಂತೆ ಇತರರು ಇದ್ದರು.
ಕಳೆದ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ರುದ್ರಗೌಡ ಅವರು ಕಾಂಗ್ರೆಸ್ ತೊರೆದು ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಈಗ ಕನಕಗಿರಿ ಕ್ಷೇತ್ರದಲ್ಲಿ ಇತ್ತೀಚೆಗೆ ಕನಕಗಿರಿ, ನವಲಿ ಭಾಗದ ಮುಖಂಡರು ಬಿಜೆಪಿಗೆ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೆ ರೆಡ್ಡಿ ಸಮುದಾಯದ ಯುವ ಮುಖಂಡ ಬಿಜೆಪಿ ತೊರೆದು ಶಾಸಕ ಮತ್ತು ಆ ಪಕ್ಷಕ್ಕೆ ಶಾಕ್ ನೀಡಿದ್ದಾರೆ.