
ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ಬಲವರ್ಧನೆಗೆ ಶನಿವಾರ ಕೋಲ್ಕತಾದಲ್ಲಿ ತೃಣಮೂಲ ಕಾಂಗ್ರೆಸ್ ಬೃಹತ್ ರ‍್ಯಾಲಿ ನಡೆಯಲಿದ್ದು, ಇದರಲ್ಲಿ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿಯಲ್ಲಿದ್ದುಕೊಂಡೆ ಸದಾ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಶತ್ರುಘ್ನ ಸಿನ್ಹಾ ಇದೀಗ ವಿಪಕ್ಷ ಒಕ್ಕೂಟದ ಪ್ರಮುಖ ಭಾಗವಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ರ‍್ಯಾಲಿಯಲ್ಲಿ ಭಾಗಿಯಾಗುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಸಿನ್ಹಾ, ನಾನು ಎಂದಿಗೂ ಪಕ್ಷಕ್ಕೆ ನಿಷ್ಠೆಯಿಂದ ಇರುತ್ತೇನೆ. ಪಕ್ಷಕ್ಕೆ ಭಲ ತುಂಬಲು ಕಾರ್ಯ ನಿರ್ವಹಿಸುತ್ತೇವೆ. ಬಿಜೆಪಿ ಅತೃಪ್ತ ಮುಖಂಡ ಯಶವಂತ ಸಿನ್ಹಾ ಅವರ ಪ್ರತಿನಿಧಿಯಾಗಿ ಮಾತ್ರವೇ ಈ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಹೊರತು, ಇದರಲ್ಲಿ ಇನ್ನು ಯಾವ ಸೀಕ್ರೇಟ್ ಇಲ್ಲ ಎಂದಿದ್ದಾರೆ.
ಬಿಜೆಪಿ ಸಂಸದನ ಕಾಂಗ್ರೆಸ್ ಒಲವು : ಚುನಾವಣಾ ಬೆನ್ನಲ್ಲೇ ನೀಡ್ತಾರಾ ಶಾಕ್..?
ಮಮತಾ ಬ್ಯಾನರ್ಜಿ, ಬಿಜೆಪಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕಾರದಿಂದ ದೂರ ಇಡಲು ಯತ್ನಿಸುತ್ತಿರುವ ವಿಪಕ್ಷ ಬಣಕ್ಕೆ ತಮ್ಮ ಬೆಂಬಲವನ್ನು ನೀಡುತ್ತಿದ್ದಾರೆ.
ಈಗಾಗಲೇ ದೇಶದ ಪಂಚರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ಅಧಿಕಾರದಿಂದ ದೂರ ಸರಿಸುವ ಯತ್ನಗಳು ಭರದಿಂದ ಸಾಗಿವೆ. ಇದೇ ನಿಟ್ಟಿನಲ್ಲಿ ವಿಪಕ್ಷಗಳು ಮಹಾಘಟಬಂಧನ್ ಮೂಲಕ ಹೋರಾಟಕ್ಕೆ ಸಜ್ಜಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.