ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ಧರಾಗಿ: ಸಿದ್ದರಾಮಯ್ಯ ವಿರುದ್ಧ ಸುನಿಲ್‌ ಕುಮಾರ್‌ ವಾಗ್ದಾಳಿ

Published : Jul 21, 2024, 05:39 PM ISTUpdated : Jul 22, 2024, 08:43 AM IST
ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ಧರಾಗಿ: ಸಿದ್ದರಾಮಯ್ಯ ವಿರುದ್ಧ ಸುನಿಲ್‌ ಕುಮಾರ್‌ ವಾಗ್ದಾಳಿ

ಸಾರಾಂಶ

ನಿಮ್ಮನ್ನೆಲ್ಲ ಬಲಿ ಹಾಕುತ್ತೇನೆ ಎಂದು ಸದನದಲ್ಲಿ ತೊಡೆ ತಟ್ಟಿದಷ್ಟೇ ದಮ್ಮು- ತಾಕತ್ತು ನಿಜಕ್ಕೂ ಇದ್ದರೆ ಮೊದಲು ನ್ಯಾಯಸಮ್ಮತ ತನಿಖೆ ನಡೆಸಿ, ಬೇಕಾದರೆ ಸಿಬಿಐ ತನಿಖೆಗೂ ಆದೇಶಿಸಿ. ಎಸ್ಎಸ್ಎಸ್ಐಟಿ ರಚನೆ ಮಾಡಿದರೂ ನೋ ಪ್ರಾಬ್ಲೆಮ್ ! ಅದನ್ನು ಬಿಟ್ಟು ಅಪಪ್ರಚಾರದ ತುತ್ತೂರಿ ಊದುತ್ತಾ ಹೋದರೆ ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ದರಾಗಿ ಎಂದ ಮಾಜಿ ಸಚಿವ ಸುನಿಲ್‌ ಕುಮಾರ್‌ 

ಬೆಂಗಳೂರು(ಜು.21): ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಕಾರ್ಕಳದ ಪರಶುರಾಮ ಥೀಂಪಾರ್ಕ್ ನಲ್ಲಿ ಹನ್ನೊಂದು ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭಾ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6 ಕೋಟಿ ರೂ. ಪರಶುರಾಮ ಥೀಂ ಪಾರ್ಕ್ ನಲ್ಲಿ ಅವ್ಯವಹಾರ ನಡೆದಿದೆ ಎಂದು ಕಳೆದ ಒಂದು ವರ್ಷದಿಂದ ಕಾಂಗ್ರೆಸ್‌ ನಾಯಕರು ಸುಳ್ಳು ನರೇಟಿವ್ ಕಟ್ಟುತ್ತಲೇ ಇದ್ದಾರೆ. ಇವರಿಗೆ ಸತ್ಯ ಬಹಿರಂಗವಾಗುವುದು ಬೇಕಿಲ್ಲ, ಪ್ರವಾಸೋದ್ಯಮ ಅಭಿವೃದ್ಧಿಯಾಗುವುದು ಬೇಕಿಲ್ಲ. ನಿರಂತರ ಆರೋಪ ನಡೆಸಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಮಾತ್ರ‌ ಉದ್ದೇಶ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ಎಕ್ಸ್‌ನಲ್ಲಿ ಬರೆದುಕೊಂಡಿರುವ ಸುನಿಲ್‌ ಕುಮಾರ್‌ ಅವರು, ಪ್ರತಿ ಬಾರಿಯೂ ಅಧಿವೇಶನ ಸಂದರ್ಭದಲ್ಲಿ ಥೀಂ ಪಾರ್ಕ್ ಬಗ್ಗೆ ಅಪಪ್ರಚಾರ ನಡೆಸುವುದು ಈ ಸರ್ಕಾರಕ್ಕೆ ಹಾಗೂ ಕಾರ್ಕಳ ಕಾಂಗ್ರೆಸ್ ಮುಖಂಡರಿಗೆ ಚಟವಾಗಿಬಿಟ್ಟಿದೆ. ಕಳೆದ ಅಧೀವೇಶನದ ಸಮಯದಲ್ಲಿ ತನಿಖೆ ನಡೆಸುತ್ತೇವೆ ಎಂದರು. ಸಿಐಡಿ ತನಿಖೆಗೂ ಸೂಚಿಸಿದರು. ಆದರೆ ಇದುವರೆಗೆ ತನಿಖೆ ಪ್ರಗತಿಯಾಗಿಲ್ಲ. ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಚುನಾವಣೆ ನೀತಿ ಸಂಹಿತೆಯ ನೆಪ ಹೇಳಿ ತಪ್ಪಿಸಿಕೊಂಡರು. ಈಗ ಮುಡಾದಲ್ಲಿ ಭೂಮಿ ನುಂಗಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಹೈಕಮಾಂಡ್ ಭಂಡಾರ ತುಂಬಿ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಮತ್ತೆ ಪರಶುರಾಮ ಥೀಮ್ ಪಾರ್ಕ್ ನೆನಪಾಗಿದೆ ಎಂದು ಹರಿಹಾಯ್ದಿದ್ದಾರೆ. 

ಮುಡಾ ಹಗರಣದಲ್ಲಿ ಸತ್ತವರ ಹೆಸರಲ್ಲೂ ಡಿನೋಟಿಫಿಕೇಶನ್‌: ಸಿಎಂ ವಿರುದ್ಧ ಎಚ್‌ಡಿಕೆ ಆರೋಪ

ನಿಮ್ಮನ್ನೆಲ್ಲ ಬಲಿ ಹಾಕುತ್ತೇನೆ ಎಂದು ಸದನದಲ್ಲಿ ತೊಡೆ ತಟ್ಟಿದಷ್ಟೇ ದಮ್ಮು- ತಾಕತ್ತು ನಿಜಕ್ಕೂ ಇದ್ದರೆ ಮೊದಲು ನ್ಯಾಯಸಮ್ಮತ ತನಿಖೆ ನಡೆಸಿ, ಬೇಕಾದರೆ ಸಿಬಿಐ ತನಿಖೆಗೂ ಆದೇಶಿಸಿ. ಎಸ್ಎಸ್ಎಸ್ಐಟಿ ರಚನೆ ಮಾಡಿದರೂ ನೋ ಪ್ರಾಬ್ಲೆಮ್ ! ಅದನ್ನು ಬಿಟ್ಟು ಅಪಪ್ರಚಾರದ ತುತ್ತೂರಿ ಊದುತ್ತಾ ಹೋದರೆ ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ದರಾಗಿ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ