
ಬೆಂಗಳೂರು (ಸೆ.13): ರಾಜ್ಯ ಬಿಜೆಪಿಯ ನಾಯಕರು ಕೂಡ ಕಾಂಗ್ರೆಸ್ ಪಕ್ಷದಂತೆ ನಡೆದುಕೊಂಡರೆ ಹೇಗೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತೀಕ್ಷ್ಣವಾಗಿ ಪ್ರಶ್ನಿಸಿದೆ. ಬಹುದಿನಗಳ ನಂತರ ಬಿಜೆಪಿಯ ಆಯ್ದ ಸುಮಾರು 40 ಮಂದಿ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಿದ ಆರ್.ಎಸ್ಎಸ್ ಮುಖಂಡರು ಕಿವಿ ಹಿಂಡುವ ಕೆಲಸ ಮಾಡಿದ್ದಾರೆ.
ಗುರುವಾರ ಬೆಳಗ್ಗೆಯಿಂದ ಮಧ್ಯಾಹ್ನದದವರೆಗೆ ಸುಮಾರು 5 ಗಂಟೆಗಳ ಕಾಲ ಸದಾಶಿವ ನಗರದ ರಾಜ್ಯೋತ್ಸಾನ ಪರಿಷತ್ತಿನ ಕಚೇರಿ ಯಲ್ಲಿ ಸಭೆ ನಡೆಸಿದ ಆರ್.ಎಸ್ಎಸ್ ಮುಖಂಡರು ಎಲ್ಲ ನಾಯಕರ ಮುಕ್ತ ಅಭಿಪ್ರಾಯ, ಅನಿಸಿಕೆಗಳನ್ನು ಆಲಿಸಿದ ನಂತರ ಸಾತ್ವಿಕವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಭಿನ್ನಮತ ತಡೆಗೆ ನಾಳೆ ಆರೆಸ್ಸೆಸ್‌ನಿಂದ ಮಹತ್ವದ ಸಭೆ
ಬಿಜೆಪಿಯಲ್ಲಿನ ಬೆಳವಣಿಗೆಗಳು ನಮಗೆ ಸಮಾಧಾನ ತರುತ್ತಿಲ್ಲ. ಹೀಗಾಗಿಯೇ ತುಸು ದೂರ ಉಳಿದುಕೊಂಡಿದ್ದೆವು. ಆದರೆ, ಈಗ ಪರಿಸ್ಥಿತಿ ಬಿಗಡಾಯಿಸುತ್ತಿರುವುದರಿಂದ ಪಕ್ಷದ ಭವಿಷ್ಯದ ದೃಷ್ಟಿಯಿಂದ ಇವತ್ತು ಸಭೆ ಕರೆದಿ ದೇವೆ. ಸಂಘ ಯಾವತ್ತಿಗೂ ಪಕ್ಷದ ಮಾರ್ಗ ದರ್ಶನಕ್ಕೆ ಸಿದ್ಧವಿರುತ್ತದೆ ಎಂದು ಸಂಘದ ಮುಖಂಡರು ಹೇಳಿದ್ದಾರೆ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಘದ ಪ್ರಮುಖರಾದ ಮುಕುಂದ್, ಸುಧೀರ್, ಬಿಜೆಪಿ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಆರ್ಗವಾಲ್, ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತಿತರರು ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ರೀತಿ ಅಲ್ಲ ಎಂಬ ಕಾರಣಕ್ಕೆ ಹಿಂದುತ್ವದ ಸಿದ್ಧಾಂತಕ್ಕಾಗಿ ಸಂಘವು ಬಿಜೆಪಿ ಯನ್ನು ಬೆಂಬಲಿಸುತ್ತಿದೆ. ಸಂಘದ ಅಪೇಕ್ಷೆ ಯಂತೆ ನೀವು ಶೇ.30ರಷ್ಟೂ ಇಲ್ಲದಿದ್ದರೆ ಹೇಗೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಪಕ್ಷದ ನಾಯಕರು ತತ್ವ-ಸಿದ್ಧಾಂಶಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವುದು ಸರಿ ಯಲ್ಲ ಪರಸ್ಪರ ಮುಕ್ತವಾಗಿ ಮಾತನಾಡುವು ದನ್ನು ಬಿಟ್ಟು ಮಾಧ್ಯಮಗಳ ಮೂಲಕ ಮಾತನಾಡುವುದು ಸರಿಯಲ್ಲ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದು ಸಂಘದ ಪ್ರಮುಖರು ತಾಕೀತು ಮಾಡಿದರು ಎನ್ನಲಾಗಿದೆ. ನೀವೆಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಒಟ್ಟಿಗೆ ಪ್ರವಾಸ ಮಾಡಬೇಕು. ಅಂದಾಗಲೇ ನಿಮ್ಮ ನಡುವೆ ಒಳ್ಳೆಯ ಬಾಂ ಧವ್ಯ ಬೆಸೆಯಲು ಸಾಧ್ಯವಾಗುತ್ತದೆ. ನೀವು ಇತರ ಪಕ್ಷಗಳ ನಾಯಕರಂತೆ ಆಗಬಾರದು. ನಿಮ್ಮ ನಡುವಿನ ಅಂತರ ಕಡಮೆಯಾಗಬೇಕು ಎಂಬುದು ನಮ್ಮ ಆಶಯ ಎಂದಿದ್ದಾರೆ. ಪ್ರತಿಯೊಂದಕ್ಕೂ ದೆಹಲಿಯತ್ತ ನೋಡ ಬೇಕಿಲ್ಲ ಎಲ್ಲವನ್ನೂ ಹೈಕಮಾಂಡ್ ನಡೆಸುವು ದಾದರೆ ನೀವು ಯಾಕಿರಬೇಕು? ಕೆಲವೊಂದು ವಿಷಯಗಳನ್ನು ರಾಜ್ಯ ನಾಯಕರೇ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.