ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬೆನ್ನಲ್ಲೇ ಆಯೋಜಿಸಲಾಗಿದ್ದ ಆ ಪಕ್ಷದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿದ್ದರ ಬಗ್ಗೆ ಬಿಜೆಪಿ ನಾಯಕರಲ್ಲೇ ಭಿನ್ನ ಅಭಿಪ್ರಾಯ ಹೊರಬಿದ್ದಿದೆ.
ಸುವರ್ಣಸೌಧ (ಡಿ.15): ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬೆನ್ನಲ್ಲೇ ಆಯೋಜಿಸಲಾಗಿದ್ದ ಆ ಪಕ್ಷದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿದ್ದರ ಬಗ್ಗೆ ಬಿಜೆಪಿ ನಾಯಕರಲ್ಲೇ ಭಿನ್ನ ಅಭಿಪ್ರಾಯ ಹೊರಬಿದ್ದಿದೆ. ಪಕ್ಷದ ಶಾಸಕರಾದ ಎಸ್.ಟಿ.ಸೋಮಶೇಖರ್ ಸೇರಿದಂತೆ ಇತರರು ಯಾವುದೇ ರೀತಿಯ ಶಿಸ್ತು ಉಲ್ಲಂಘನೆ ಮಾಡಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರೆ, ಇದೊಂದು ಗಂಭೀರ ವಿಷಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ನಾಯಕರು ಊಟಕ್ಕೆ ಕರೆದಿದ್ದರು.
ಅದಕ್ಕಾಗಿ ಹೋಗಿದ್ದೆವು ಎಂದು ಹೇಳಿದ್ದಾರೆ. ಆ ದೃಷ್ಟಿಯಿಂದ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಅವರು ಬುಧವಾರದ ಬಿಜೆಪಿಯ ಧರಣಿಯಲ್ಲೂ ಕೂಡ ಭಾಗವಹಿಸಿದ್ದರು. ನಮ್ಮ ಸಭೆಗಳಿಗೂ ಬಂದಿದ್ದರು. ಕಳೆದ ಮೂರು ತಿಂಗಳಿನಿಂದ ಇಂತಹ ಘಟನೆಗಳು ನಡೆಯುತ್ತಿವೆ. ಏನೇ ಇದ್ದರೂ ಮತ್ತೊಮ್ಮೆ ಅವರನ್ನು ಕರೆದು ಮಾತನಾಡುತ್ತೇನೆ ಎಂದರು. ಇನ್ನು ವಿಜಯೇಂದ್ರ ಮಾತನಾಡಿ, ಶಾಸಕರು ಭೋಜನ ಕೂಟಕ್ಕೆ ಹೋಗಿರುವ ಮಾಹಿತಿ ತಿಳಿಯಿತು. ಇದು ಗಂಭೀರ ವಿಷಯ. ಈ ಬಗ್ಗೆ ಅವರ ಜೊತೆ ಚರ್ಚಿಸುವೆ ಎಂದರು.
ಸಂಸತ್ ಮೇಲೆ ದಾಳಿ ಹಿಂದೆ ಬೇರೆಯ ಹುನ್ನಾರ ಇದೆ: ಯತೀಂದ್ರ ಸಿದ್ದರಾಮಯ್ಯ
ಸೋಮಶೇಖರ್ ಜತೆ ಅಶೋಕ್ ಮಾತುಕತೆ: ಈ ನಡುವೆ ವಿಧಾನಸಭೆಯ ಕಲಾಪದ ಹೊತ್ತಿನಲ್ಲೇ ಮೊಗಸಾಲೆಯಲ್ಲಿ ಅಶೋಕ್ ಅವರು ಶಾಸಕ ಸೋಮಶೇಖರ್‌ಜತೆ ಕೆಲಕಾಲ ಮಾತುಕತೆ ನಡೆಸಿದರು. ಇದೇ ವೇಳೆ ಸೋಮಶೇಖರ್‌ಅವರು ತಾವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರ ಆಹ್ವಾನದ ಮೇರೆಗೆ ಔತಣಕೂಟಕ್ಕೆ ಮಾತ್ರ ಹೋಗಿದ್ದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಸಮಜಾಯಿಷಿ ನೀಡಿದರು ಎನ್ನಲಾಗಿದೆ.
ರೈತರ ಬಗ್ಗೆ ಕಾಳಜಿವಿಲ್ಲದ ಕಾಂಗ್ರೆಸ್ ಸರ್ಕಾರ: ರಾಜ್ಯ ಸರ್ಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕು ಎನ್ನುವುದು ಪ್ರಾಮಾಣಿಕ ಕಳಕಳಿ ಇಲ್ಲ. ಆದರೆ, ಅಲ್ಪ ಸಂಖ್ಯಾತರಿಗೆ ₹10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಪರಿಹಾರ ಕೊಡಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಾರೆ. ರಾಜ್ಯ ಸರ್ಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಇವರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದನೆ ಮಾಡುತ್ತಿಲ್ಲ. ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದು ಸರ್ಕಾರ ಬರ ಪರಿಹಾರ ಪ್ರಕಟಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ
ಅಧಿವೇಶನ ಸಂದರ್ಭದಲ್ಲಿಯೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈ ಕುರಿತು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡುತ್ತೇನೆ ಎಂದರು. ಪೃಥ್ವಿಸಿಂಗ್ ಮೇಲೆ ಹಲ್ಲೆ ವಿಚಾರಕ್ಕೆ ಉತ್ತರಿಸಿ, ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು ಜಸ್ಟ್ ಕೇಸ್ ಮಾತ್ರ ದಾಖಲು ಮಾಡಿದ್ದಾರೆ. ಅಟೆಮ್ಟ್ ಟೂ ಮರ್ಡರ್ ಕೇಸ್ ಹಾಕೋದಿಲ್ಲ, 307 ಕೇಸ್ ಹಾಕೋದಿಲ್ಲ. ಅದರ ಬದಲು ಕಾಂಗ್ರೆಸ್ ಎಂಎಲ್‌ಸಿ ಮೇಲೆ ಎ1 ಮಾಡಿದ್ದಾರೆ. ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ತಿಳಿಸಿದರು.