ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ನಿಸ್ಸೀಮರು, ಜನರ ಆಶೀರ್ವಾದ ಇಲ್ಲದೇ ಅಧಿ ಕಾರಕ್ಕೆ ಬರುತ್ತಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಬಾಯಿಗೆ ಬಂದ ಹಾಗೇ ಮಾತನಾಡುವುದು ಬಿಜೆಪಿ ಸಂಸ್ಕೃತಿ, ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಹಣ ತೆಗೆದುಕೊಂಡು ಟಿಕೆಟ್ ನೀಡುವ ಪದ್ಧತಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿರಸಿ /ಬೆಳಗಾವಿ(ಮಾ.07): ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೆರಡು ದಿನದಲ್ಲಿ ಅಂತಿಮಗೊಳಿಸು ತೇವೆ. ಪಟ್ಟಿ ಅಂತಿಮವಾಗುವ ಮೊದಲು ಕೇಂದ್ರ ಚುನಾವಣಾ ಸಮಿತಿಯನ್ನು ಭೇಟಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿರಸಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿ ಸುತ್ತೇವೆ ಎಂದರು.
ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ನಿಸ್ಸೀಮರು, ಜನರ ಆಶೀರ್ವಾದ ಇಲ್ಲದೇ ಅಧಿ ಕಾರಕ್ಕೆ ಬರುತ್ತಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಬಾಯಿಗೆ ಬಂದ ಹಾಗೇ ಮಾತನಾಡುವುದು ಬಿಜೆಪಿ ಸಂಸ್ಕೃತಿ, ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಹಣ ತೆಗೆದುಕೊಂಡು ಟಿಕೆಟ್ ನೀಡುವ ಪದ್ಧತಿ ಇಲ್ಲ ಎಂದರು.
ಧರ್ಮ-ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ನನ್ನ ಜತೆ ಮಾತನಾಡಿಲ್ಲ. ಕಾಂಗ್ರೆಸ್‌ಗೆ ಯಾರು ಬಂದರೂ ಮುಕ್ತ ಸ್ವಾಗತವಿದೆ. ಆದರೆ, ಕಾಂಗ್ರೆಸ್ ತತ್ವ-ಸಿದ್ಧಾಂತ ಒಪ್ಪಿ ಬರಬೇಕು. ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಡೆದು ಪಕ್ಷಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಅನಂತನನ್ನು ಮನೆಗೆ ಕಳುಹಿಸಿ-ಸಿಎಂ:
ನಾಲ್ಕೂವರೆ ವರ್ಷದಿಂದ ನಿದ್ರೆಯಲ್ಲಿದ್ದು ಇದೀಗ ಎಚ್ಚರಗೊಂಡಿ ರುವ ಸಂಸದ ಅನಂತಕುಮಾರ ಹೆಗಡೆಯನ್ನು ಮನೆಗೆ ಕಳುಹಿಸಿ ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿ ದರು. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ ಯಿದೆ. ಜಿಲ್ಲೆಗೆ ಅವರ ಕೊಡುಗೆ ಏನು? ಇಂತಹ ಸಂಸದ ಜಿಲ್ಲೆಗೆ ಆಯೋಗ್ಯ ಎಂದು ಕಿಡಿಕಾರಿದರು.
ಮಹದಾಯಿ,ಮೇಕೆದಾಟುಗೆ ಕೇಂದ್ರ ಸಹಕರಿಸ್ತಿಲ್ಲ; ಬಳಿಕ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿ ಹಿಂದೆ ಇದ್ದ ಬಿಜೆಪಿ ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬನೇ ಒಬ್ಬ ಸಂಸದ ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಲಿಲ್ಲ. ಇದು ಬೆಳಗಾವಿಜನತೆಗೆ, ರಾಜ್ಯದಜನತೆಗೆ ಬಗೆದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.
ದಿನಬೆಳಗಾದರೆ ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಟೀಕೆ ಏಕೆ?: ಎಚ್.ಡಿ.ದೇವೇಗೌಡ
ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ: ಮಹಾ ಜನರ ಆಗ್ರಹ
ಅಥಣಿ: ಮಹಾರಾಷ್ಟ್ರದಲ್ಲಿದ್ದರೂ ಅನೇಕ ಸೌಲಭ್ಯಗಳಿಂದ ನಮ್ಮ ಗ್ರಾಮಗಳು ವಂಚಿತವಾಗಿವೆ. ಹೀಗಾಗಿ, ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ಮಹಾರಾಷ್ಟ್ರದ ಗಡಿ ಭಾಗದ ಜನರು ಅಥಣಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಬಂದು ಸಿಎಂಗೆ ಆಗ್ರಹಿಸಿದರು.
ಬುಧವಾರ ನಡೆದ ಏತ ನೀರಾವರಿಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಹಾರಾಷ್ಟ್ರದ ಜತ್ತ ತಾಲೂಕಿನ ನೂರಾರು ಕನ್ನಡಿಗರು ನಾಮಫಲಕಗಳನ್ನು ಹಿಡಿದುಕೊಂಡು ಭಾಗವಹಿಸಿದ್ದರು. ಗಡಿಭಾ ಗದ ಆನೇಕ ಹಳ್ಳಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಆದ್ದರಿಂದ ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಬೇಕು. ಗಡಿ ಭಾಗದ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು. ಜತೆಗೆ, ಬೇಸಿಗೆ ಸಂದರ್ಭದಲ್ಲಿ ನಮಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೊಟ್ಟಲಗಿ ಏತ ನೀರಾವರಿ ಯೋಜನೆ ಮೂಲಕ ನಮ್ಮ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಅಥಣಿ ಶಾಸಕ ಲಕ್ಷ್ಮಣಸವದಿ ಅವರಿಗೆ ಮನವಿ ಸಲ್ಲಿಸಿದರು. ಶಾಸಕ ಲಕ್ಷ್ಮಣ ಸವದಿ ಅವರುತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಗಡಿನಾಡಿನ ಕನ್ನಡಿಗರ ಸಮಸ್ಯೆ ಕುರಿತು ಪ್ರಸ್ತಾಪಿಸಿದಾಗ, ಮಹಾರಾಷ್ಟ್ರದ ಜತ್ತ ತಾಲೂಕಿನ ನೂರಾರು ಕನ್ನಡಿಗರು ನಾಮಫಲಕಗಳನ್ನು ಕೈಯಲ್ಲಿ ಹಿಡಿದು ಎದ್ದು ನಿಂತು ಘೋಷಣೆಗಳನ್ನು ಕೂಗುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದರು.