Karnataka Assembly Election 2023: ಇಂದಿನಿಂದ ಬಿಜೆಪಿ ಕರ್ನಾಟಕ ಪ್ರವಾಸ

Published : Apr 12, 2022, 06:30 AM IST
Karnataka Assembly Election 2023: ಇಂದಿನಿಂದ ಬಿಜೆಪಿ ಕರ್ನಾಟಕ ಪ್ರವಾಸ

ಸಾರಾಂಶ

*  ನಳಿನ್‌ ಕಟೀಲ್‌, ಅರುಣ್‌ ಸಿಂಗ್‌, ಸಿಎಂ ನೇತೃತ್ವದಲ್ಲಿ 12 ದಿನ ರಾಜ್ಯ ಸಂಚಾರ *  ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ *  ಸರ್ಕಾರದ ಸಾಧನೆ ಬಗ್ಗೆ ಜಾಗೃತಿ  

ಬೆಂಗಳೂರು(ಏ.12):  ಮುಂಬರುವ ವಿಧಾನಸಭೆ ಚುನಾವಣೆಗೆ(Karnataka Assembly Election) ಈಗಿನಿಂದಲೇ ತಯಾರಿ ಆರಂಭಿಸಿರುವ ಆಡಳಿತಾರೂಢ ಬಿಜೆಪಿಯ(BJP) ಹಿರಿಯ ನಾಯಕರನ್ನು ಒಳಗೊಂಡ ಮೂರು ತಂಡಗಳ ನೇತೃತ್ವದ ರಾಜ್ಯ ಪ್ರವಾಸ(State Tour) ಮಂಗಳವಾರದಿಂದ ಆರಂಭವಾಗಲಿದೆ. ಮಂಗಳವಾರದಿಂದ ಈ ತಿಂಗಳ 24ರವರೆಗೆ ಅಂದರೆ, 12 ದಿನಗಳ ಕಾಲ ಮೂರು ತಂಡಗಳು ಪ್ರವಾಸ ನಡೆಸಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌(Nalin Kumar Kateel), ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌(Arun SinghO ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದಲ್ಲಿ ಮೂರು ತಂಡಗಳು ರಚನೆಯಾಗಿದ್ದು, ಅವುಗಳಲ್ಲಿ ಹಿರಿಯ ನಾಯಕರು ಇದ್ದಾರೆ.

ಈ ತಂಡಗಳು ತಮಗೆ ನಿಗದಿಪಡಿಸಿದ ಪಕ್ಷವಾರು ಸಂಘಟನೆಯ ವಿಭಾಗಗಳಲ್ಲಿ ಪ್ರವಾಸ ಕೈಗೊಂಡು ಅಲ್ಲಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಸ್ಥಳೀಯ ಸಮಸ್ಯೆಗಳಿದ್ದರೆ ಸ್ಥಳದಲ್ಲಿಯೇ ಚರ್ಚಿಸಿ ಬಗೆಹರಿಸಲಿದ್ದಾರೆ. ಸಂಘಟನೆ ಬಲಪಡಿಸುವ ಬಗ್ಗೆ ಸಲಹೆ ಸೂಚನೆ ನೀಡಲಿದ್ದಾರೆ. ಜತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ಬಗೆಯನ್ನು ಕಾರ್ಯಕರ್ತರಿಗೆ ತಿಳಿ ಹೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Karnataka Politics: ಬೊಮ್ಮಾಯಿ ಸಂಪುಟ ಸರ್ಕಸ್‌ ವಿಳಂಬಕ್ಕೆ ಏಳು ಕಾರಣಗಳು!

ತಂಡಗಳು

1.ನಳಿನ್‌ ಕುಮಾರ್‌ ಕಟೀಲ್‌ ತಂಡ

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವರಾದ ಕೆ.ಎಸ್‌.ಈಶ್ವರಪ್ಪ, ವಿ.ಸೋಮಣ್ಣ, ಸಂಸದ ಪ್ರತಾಪ್‌ ಸಿಂಹ, ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್‌ ಹಾಗೂ ಎಂ.ರಾಜೇಂದ್ರ ಇರಲಿದ್ದಾರೆ. ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜುಗೌಡ ಈ ತಂಡದ ಸಂಯೋಜಕರು. ಈ ತಂಡ ಮೈಸೂರು, ಬಳ್ಳಾರಿ, ಧಾರವಾಡ ಹಾಗೂ ಬೆಂಗಳೂರು ನಗರ ವಿಭಾಗಗಳಲ್ಲಿ ಸಂಚರಿಸಲಿದೆ.

2.ಅರುಣ್‌ ಸಿಂಗ್‌ ತಂಡ: 

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(BS Yediyurappa), ಸಚಿವರಾದ ಗೋವಿಂದ ಕಾರಜೋಳ, ಆರ್‌.ಅಶೋಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್‌, ಎಂ.ಶಂಕರಪ್ಪ ಮತ್ತು ಎಂ.ಬಿ.ನಂದೀಶ್‌ ಇದ್ದಾರೆ. ರಾಜ್ಯ ಕಾರ್ಯದರ್ಶಿ ಕೆ.ಎಸ್‌.ನವೀನ್‌ ತಂಡದ ಸಂಯೋಜಕರು. ಈ ತಂಡ ಬೆಳಗಾವಿ, ದಾವಣಗೆರೆ ಮತ್ತು ಬೆಂಗಳೂರು ಗ್ರಾಮಾಂತರ ವಿಭಾಗಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

3.ಬಸವರಾಜ ಬೊಮ್ಮಾಯಿ: 

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯದ ಸಚಿವರಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್‌ಕುಮಾರ್‌ ಸುರಾನಾ, ಲಕ್ಷ್ಮಣ ಸವದಿ, ಬಿ.ವೈ.ವಿಜಯೇಂದ್ರ ಹಾಗೂ ನಯನಾ ಗಣೇಶ್‌ ಇದ್ದಾರೆ. ರಾಜ್ಯ ಕಾರ್ಯದರ್ಶಿ ವಿನಯ ಬಿದರೆ ಸಂಯೋಜಕರು. ಈ ತಂಡ ಮಂಗಳೂರು, ಶಿವಮೊಗ್ಗ ಮತ್ತು ಕಲಬುರಗಿ ವಿಭಾಗಗಳಲ್ಲಿ ಸಂಚರಿಸಲಿದೆ.

BJ Puttaswamy: ರಾಜಕೀಯ ತ್ಯಜಿಸಿ ಮಠಾಧೀಶರಾಗಲಿದ್ದಾರೆ ಬಿಎಸ್.ಯಡಿಯೂರಪ್ಪ ಪರಮಾಪ್ತ!

ಯಾವ ತಂಡ ಎಲ್ಲಿ ಪ್ರವಾಸ?

1.ನಳಿನ್‌ಕುಮಾರ್‌ ಕಟೀಲ್‌

ಮೈಸೂರು, ಬಳ್ಳಾರಿ, ಧಾರವಾಡ, ಬೆಂಗಳೂರು ನಗರ

2.ಅರುಣ್‌ ಸಿಂಗ್‌

ಬೆಳಗಾವಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ

3.ಬಸವರಾಜ ಬೊಮ್ಮಾಯಿ

ಮಂಗಳೂರು, ಶಿವಮೊಗ್ಗ, ಕಲಬುರಗಿ ವಿಭಾಗ

ಹಿಂದೂ-ಮುಸ್ಲಿಮರು ಸಹೋದರರಂತೆ ಬಾಳಬೇಕು ಎಂದ ಬಿಎಸ್‌ವೈ

ಬೆಂಗಳೂರು: ಹಿಂದು-ಮುಸ್ಲಿಮರು (Hindu and Muslim) ಸಹೋದರಂತೆ ಬಾಳಬೇಕು. ಕೆಲವು ಕಿಡಿಗೇಡಿಗಳಿಂದಾಗಿ ಸೌಹಾರ್ದತೆಯನ್ನು ಕದಡುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗೂಳೂರಿನಲ್ಲಿ ಹೇಳಿದ್ದಾರೆ.

ನಿಮ್ಮ ನಿಮ್ಮ ದಿನನಿತ್ಯದ ಕೆಲಸವನ್ನು ಮಾತ್ರ ಮಾಡಿಕೊಂಡು ಹೋಗಿ. ರಾಜ್ಯದ ಸಾಮರಸ್ಯವನ್ನು ಕದಡುವ ಪ್ರಯತ್ನಗಳನ್ನು ಮಾಡಬೇಡಿ ಎಂದು ಹೇಳುವ ಮೂಲಕ ಶಾಂತಿ ಕದಡುವ ವ್ಯಕ್ತಿಗಳಿಗೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಆಗಿರುವ ಘಟನೆಗಳಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು ಮುಂದೆ ಇಂಥ ಅಹಿತಕರ ಘಟನೆಗಳು ನಡೆಯದಂತೆ ನಾವೆಲ್ಲರೂ ಒಟ್ಟಾಗಿ ಬಾಳುವಂಥ ಅವಕಾಶ ಕಲ್ಪಿಸಿಕೊಡಬೇಕು. ಸಾಮರಸ್ಯ ಕದಡುವ ಘಟನೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!